ಬೆಳಗಾವಿ ಜಿಲ್ಲೆಯಲ್ಲಿ ಪೆಟ್ರೋಲ್, ಡಿಸೇಲ್ ಹಾಗೂ ಗ್ಯಾಸ್ ಸಿಲಿಂಡರ್ ಸಮಸ್ಯೆ ಇಲ್ಲ ಎಂದು ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಹೇಳಿದರು.
ಬೆಳಗಾವಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದರು. ಸಾಮಾಜಿಕ ಜಾಲತಾಣದಲ್ಲಿ ಪೆಟ್ರೋಲ್ ಸಮಸ್ಯೆ ಇದೆ ಎಂದು ವದಂತಿ ಹರಡಿಸಿದ್ದರು. ಆಗ ಜನರು ಪೆಟ್ರೋಲ್ ಗಾಗಿ ಬಂಕ್ ಮುಂದೆ ಸಾಲುಗಟ್ಟಿ ನಿಲ್ಲುತ್ತಿದ್ದರು. ಆದರೆ ಈಗ ಆ ಸಮಸ್ಯೆ ಇಲ್ಲ. ಇನ್ನೂ ಸಿಲಿಂಡರ್ ಗ್ಯಾಸ್ ಸಮರ್ಪಕವಾಗಿ ಪೂರೈಸಲಾಗುತ್ತಿದೆ ಎಂದರು.
ಇಂಧನ ಪೂರೈಕೆ ಕಂಪೆನಿ ಹಾಗೂ ಬಂಕ್‌ಮಾಲೀಕರ ಜತೆ ಈಗಾಗಲೇ ಚರ್ಚೆ ಮಾಡಲಾಗಿದ್ದು, ಪೆಟ್ರೋಲ್ ಕೊರತೆ ಎಲ್ಲಿಯೂ ಕಂಡುಬರುತ್ತಿಲ್ಲ ಎಂದರು.
ಮೊದಲು ಜನರು ಆತಂಕಕ್ಕೆ ಒಳಗಾಗಿ ಪೆಟ್ರೋಲ್ ಸಂಗ್ರಹಕ್ಕೆ ಮುಂದಾಗಿರುವುದರಿಂದ ಈ ರೀತಿಯ ಗೊಂದಲ ಉಂಟಾಗಿತ್ತು.
ಬಂಕ್ ಗಳಲ್ಲಿ ಬಾಟಲ್ ಅಥವಾ ಕ್ಯಾನ್ ಗಳಲ್ಲಿ ಪೆಟ್ರೋಲ್ ಅಥವಾ ಡೀಸೆಲ್ ಮಾರಾಟ ಮಾಡದಂತೆ ಸೂಚನೆ ನೀಡಲಾಗಿದೆ ಎಂದರು.
