ನಗರದ ಗೋಕುಲ ರಸ್ತೆಯಲ್ಲಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಬೈಕ್‌ನಲ್ಲಿ ಪ್ರಯಾಣಿಸುತ್ತಿದ್ದ ಇಬ್ಬರು ಯುವಕರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ನಡೆದಿದೆ.
ನಿನ್ನೆ ರಾತ್ರಿ ನಗರದ ಅರ್ಬನ್ ಓಯಸಿಸ್ ಮಾಲ್ ಸಮೀಪ ಈ ದುರ್ಘಟನೆ ಸಂಭವಿಸಿದೆ. ಚಲಿಸುತ್ತಿದ್ದ ಬೈಕ್, ರಸ್ತೆ ಮಧ್ಯೆ ಬಿದ್ದಿದ್ದ ವೈರ್‌ಗೆ ಸಿಲುಕಿದ ಪರಿಣಾಮ ನಿಯಂತ್ರಣ ತಪ್ಪಿ ಸ್ಕಿಡ್ ಆಗಿದೆ. ಪರಿಣಾಮ ಬೈಕ್ ಸವಾರರು ರಸ್ತೆ ಮೇಲೆ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದಾರೆ.
ಅಪಘಾತದಲ್ಲಿ ಇಬ್ಬರ ತಲೆಗೆ ತೀವ್ರ ಪೆಟ್ಟಾಗಿದ್ದು, ಹೆಚ್ಚಿನ ರಕ್ತಸ್ರಾವದಿಂದ ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ಗೋಕುಲ ರೋಡ್ ಪೊಲೀಸ್ ಠಾಣೆ ಹಾಗೂ ಉತ್ತರ ಸಂಚಾರಿ ಪೊಲೀಸ್ ಠಾಣೆಯ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಮೃತರ ಗುರುತು ಇನ್ನಷ್ಟೇ ಪತ್ತೆಯಾಗಬೇಕಿದ್ದು, ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ಕೈಗೊಂಡಿದ್ದಾರೆ.
