BELAGAVI

ಬೆಳಗಾವಿಯಲ್ಲಿ ಮಹಿಳಾ ಶಕ್ತಿ ಅನಾವರಣ: ಸರ್ಕಾರಿ ನೌಕರರ ಸಂಘದಿಂದ ಸಾಧಕಿಯರಿಗೆ ಪ್ರಶಸ್ತಿ ಪ್ರದಾನ!

Share

“ಬೆಳಗಾವಿಯ ಕನ್ನಡ ಸಾಹಿತ್ಯ ಭವನದಲ್ಲಿಂದು ಮಹಿಳಾ ಸಂಭ್ರಮ ಮನೆಮಾಡಿತ್ತು. ವಿವಿಧ ಕ್ಷೇತ್ರಗಳಲ್ಲಿ ಅಪ್ರತಿಮ ಸಾಧನೆ ಮಾಡಿದ ಮಹಿಳೆಯರನ್ನು ಗುರುತಿಸಿ ಪ್ರಶಸ್ತಿ ಪ್ರದಾನ ಮಾಡಲಾಯಿತು.

ಬೆಳಗಾವಿಯ ಚೆನ್ನಮ್ಮ ವೃತ್ತದ ಕನ್ನಡ ಸಾಹಿತ್ಯ ಭವನದಲ್ಲಿ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಕ್ಷೇಮಾಭಿವೃದ್ಧಿ ಸಂಘ ಹಾಗೂ ಖಾನಾಪುರದ ಕರ್ನಾಟಕ ರಾಜ್ಯ ಸರ್ಕಾರಿ ವಿಕಲಚೇತನ ನೌಕರರ ಸಂಘದ ಸಹಯೋಗದಲ್ಲಿ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಮತ್ತು ಪ್ರಶಸ್ತಿ ಪ್ರದಾನ ಸಮಾರಂಭ ಅರ್ಥಪೂರ್ಣವಾಗಿ ಜರುಗಿತು. ಕಾರ್ಯಕ್ರಮವನ್ನು ಖ್ಯಾತ ಸ್ತ್ರೀ ರೋಗತಜ್ಞೆ *ಡಾ. ವನಿತಾ ಬ. ಮೆಟಗುಡ್ಡ* ಉದ್ಘಾಟಿಸಿ ಮಹಿಳೆಯರ ಹಕ್ಕುಗಳ ಬಗ್ಗೆ ಮಾತನಾಡಿದರು. ಬೆಳಗಾವಿ ಗ್ರಾಮೀಣ ಕ್ಷೇತ್ರ ಶಿಕ್ಷಣಾಧಿಕಾರಿ *ಅಂಜನೇಯ ಆರ್.ಕೆ.* ಅವರು ಸಾಧಕಿಯರಿಗೆ ಪ್ರಶಸ್ತಿ ವಿತರಿಸಿದರು.

ಯರಗಟ್ಟಿ ಕಾಲೇಜಿನ ಸಹಾಯಕ ಪ್ರಾಧ್ಯಾಪಕ *ಡಾ. ರಾಜಶೇಖರ ಬಿರಾದಾರ* ಅವರು ಮಹಿಳಾ ಸಬಲೀಕರಣದ ಕುರಿತು ವಿಶೇಷ ಉಪನ್ಯಾಸ ನೀಡಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು *ಸುರೇಶ ಸಕಣ್ಣವರ* ವಹಿಸಿದ್ದರು. ಬೆಳಗಾವಿ ಗ್ರಾಮೀಣ ದೈಹಿಕ ಶಿಕ್ಷಣ ಶಿಕ್ಷಣಾಧಿಕಾರಿ *ಶ್ರೀಮತಿ ಎಸ್. ಎನ್. ಭದ್ರ* ಅವರು ಆಶಯ ನುಡಿಗಳನ್ನಾಡಿದರು.

ಕ್ಷೇತ್ರ ಸಮನ್ವಯಾಧಿಕಾರಿ *ಡಾ. ದಾನಮ್ಮ ಝಳಕಿ* ಅವರು ಜ್ಯೋತಿ ಪ್ರಜ್ವಲಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಮಹಿಳೆಯರು ಸಾಂಘಿಕವಾಗಿ ಹೋರಾಟ ನಡೆಸಿದಾಗ ಮಾತ್ರ ಶೋಷಣೆ ಮುಕ್ತ ಸಮಾಜ ನಿರ್ಮಾಣ ಸಾಧ್ಯ ಎಂದು ಈ ಸಂದರ್ಭದಲ್ಲಿ ಗಣ್ಯರು ಅಭಿಪ್ರಾಯಪಟ್ಟರು.

ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಹಿರಿಯ ಸಾಹಿತಿ ಹಾಗೂ ಕಸಾಪ ಕಾರ್ಯದರ್ಶಿ *ಎಂ. ವೈ. ಮೆಣಸಿನಕಾಯಿ, ರಾಜ್ಯ ಪ್ರಶಸ್ತಿ ಪುರಸ್ಕೃತ ಸಾಹಿತಿ **ಡಾ. ಸುನೀಲ ಪಲೀಟ, ಸಾವಿತ್ರಿಬಾಯಿ ಕಲೆ ಶಿಕ್ಷಕಿಯರ ಸಂಘದ ಜಿಲ್ಲಾಧ್ಯಕ್ಷೆ **ಶ್ರೀಮತಿ ನಸೀನ್ ಬಾನು ಕಾಶೀಮನವರ, ಪ್ರಾಥಮಿಕ ಶಾಲೆ ಶಿಕ್ಷಕರ ಸಂಘದ ಅಧ್ಯಕ್ಷ **ಚಂದ್ರಶೇಖರ ಕೋಲಕಾರ* ಮತ್ತು ವಿಕಲಚೇತನ ನೌಕರರ ಸಂಘದ ಅಧ್ಯಕ್ಷ *ವಿಠಲ ಯಕಾಜನವರ* ಉಪಸ್ಥಿತರಿದ್ದರು. ವಿವಿಧ ತಾಲೂಕಿನ ಸಂಘದ ಪದಾಧಿಕಾರಿಗಳು ಹಾಗೂ ಸರ್ಕಾರಿ ನೌಕರರು ಪಾಲ್ಗೊಂಡು ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು.

Tags:

error: Content is protected !!