ಮಾರ್ಚ್ 13 ಮತ್ತು 14 ರಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಪ್ರಸ್ತುತ ಪಡಿಸುವ ಧಾರವಾಡ ಸಂಸದ ಕ್ರೀಡಾ ಮಹೋತ್ಸವದ ಅಂಗವಾಗಿ, ತೂಕದ ಹಾಗೂ ಜಂಗಿ ನಿಖಾಲಿ ಕುಸ್ತಿ ಸ್ಪರ್ಧೆಯನ್ನು ಧಾರವಾಡದ ಕೆ.ಸಿ.ಡಿ. ಮೈದಾನದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಮಾಜಿ ಶಾಸಕ ಅಮೃತ ದೇಸಾಯಿ ತಿಳಿಸಿದರು.

ನಗರದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಖೆಲೋ ಇಂಡಿಯಾ ಮತ್ತು ಪಿಟ್ ಇಂಡಿಯಾ ಉಪ ಕ್ರಮಗಳಿಂದ ಇಂದು ಇಡೀ ದೇಶ ಫಿಟ್ನೆಸ್ ಪ್ರಯೋಜನಗಳನ್ನು ಪಡೆಯುತ್ತಿದೆ. ಧಾರವಾಡ ಸಂಸದ ಪ್ರಲ್ಹಾದ ಜೋಶಿ ನೇತೃತ್ವದಲ್ಲಿ ಧಾರವಾಡ ಸಂಸದ ಕ್ರೀಡಾ ಮಹೋತ್ಸವ- 2025-26 ಅತ್ಯಂತ ಯಶಸ್ವಿಯಾಗಿ ನಡೆದಿದ್ದು, 31 ಸಾವಿರಕ್ಕೂ ಅಧಿಕ ಕ್ರೀಡಾಪಟುಗಳು ಕ್ರೀಡಾ ಮಹೋತ್ಸವದಲ್ಲಿ ಪಾಲ್ಗೊಂಡಿದ್ದು ವಿಶೇಷವಾಗಿದೆ. ಮಾರ್ಚ 13 ಹಾಗೂ 14 ರಂದು ಧಾರವಾಡದ ಕರ್ನಾಟಕ ಕಾಲೇಜು ಮೈದಾನದಲ್ಲಿ ಕುಸ್ತಿ ಪಂದ್ಯಾವಳಿಗಳು ನಡೆಯಲಿವೆ ದೇಶದ ಪ್ರತಿಷ್ಠಿತ ಕುಸ್ತಿ ಪಟುಗಳ ಜೊತೆಗೆ ನಮ್ಮ ಲೋಕಸಭಾ ಕ್ಷೇತ್ರದ ಕುಸ್ತಿ ಪಟುಗಳು ಈ ಮಹೋತ್ಸವದಲ್ಲಿ ಭಾಗವಹಿಸಲಿದ್ದಾರೆ ಎಂದರು.
