ವಿಜಯಪುರ ನಗರದ ಕಂದಗಲ್ಲ ಹನುಮಂತರಾಯ ರಂಗಮಂದಿರದಲ್ಲಿ ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಆಯೋಜಿಸಿದ್ದ ವಿಜಯಪುರ ನಗರದ ಜನತೆಯ ಗಮನ ಸೆಳೆಯಿತು. ಈ ಯಕ್ಷಗಾನ ಕಾರ್ಯಕ್ರಮವನ್ನು ಇಲಾಖೆಯ ಅಧಿಕಾರಿ ಮಹೇಶ್ ಪೋದಾರ್ ಉದ್ಘಾಟಿಸಿದರು. ಈ ವೇಳೆ ಮಾತನಾಡಿದ ಅವರು, ಕಲೆ ಮತ್ತು ಸಾಂಸ್ಕೃತಿಕ ಚಟುವಟಿಕೆಗಳನ್ನು ಉಳಿಸಿ ಬೆಳೆಸುವ ಕೆಲಸವನ್ನು ನಾವೆಲ್ಲರೂ ಮಾಡಬೇಕು ಎಂದು ಕರೆ ನೀಡಿದರು. ಕಾರ್ಯಕ್ರಮದಲ್ಲಿ ದಿನಪತ್ರಿಕೆಗಳ ಪ್ರತಿನಿಧಿಗಳು, ಅಧಿಕಾರಿಗಳು ಮತ್ತು ಕಲಾವಿದರು ಪಾಲ್ಗೊಂಡಿದ್ದರು.
