ಬೆಳಗಾವಿ ಶಿವಬಸವನಗರ ಕಾರಂಜಿಮಠದ ಶಿವಾನುಭವ ಮಂಟಪದಲ್ಲಿ ೨೯೮ನೇ ಶಿವಾನುಭವ ಹಾಗೂ ವೀರವಿರಾಗಿಣಿ ಅಕ್ಕಮಹಾದೇವಿ ಜಯಂತಿ ಕಾರ್ಯಕ್ರಮವು ಸೋಮವಾರ ೬ ಏಪ್ರಿಲ್ ೨೦೨೬ರಂದು ಸಾಯಂಕಾಲ ೬ ಗಂಟೆಗೆ ಜರುಗುವುದು.
ಕಾರ್ಯಕ್ರಮದ ಸಾನ್ನಿಧ್ಯವನ್ನು ಪೂಜ್ಯ ಶ್ರೀ ಮ.ನಿ.ಪ್ರ. ಗುರುಸಿದ್ಧ ಮಹಾಸ್ವಾಮಿಗಳು ವಹಿಸಲಿದ್ದು, ಅಖಿಲ ಭಾರತ ವೀರಶೈವ ಮಹಾಸಭೆ ಜಿಲ್ಲಾ ಘಟಕದ ಅಧ್ಯಕ್ಷರಾದ ರತ್ನಪ್ರಭಾ ಬೆಲ್ಲದ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸುವರು. ಮುಖ್ಯ ಅತಿಥಿಗಳಾಗಿ ಶರಣೆ ಪ್ರೇಮಕ್ಕ ಅಂಗಡಿ ಅವರು ಆಗಮಿಸಿ “ಸಾರ್ಥಕ ಬದುಕಿಗೆ ಮಹಾದೇವಿಯಕ್ಕನ ಸಂದೇಶ” ಎಂಬ ವಿಷಯ ಕುರಿತು ವಿಶೇಷ ಉಪನ್ಯಾಸ ನೀಡುವರು. ಶ್ರೀ ಕಾರಂಜಿಮಠದ ಕುಮಾರೇಶ್ವರ ಸಂಗೀತ ಪಾಠಶಾಲೆಯ ಮಕ್ಕಳಿಂದ ಪ್ರಾರ್ಥನೆ ಜರುಗುವುದು ಎಂದು ಶ್ರೀಮಠದ ಪ್ರಕಟಣೆಯಲ್ಲಿ ತಿಳಿಸಲಾಗಿದೆ.
