ಶಾರ್ಟ್ ಸರ್ಕ್ಯೂಟನಿಂದಾಗಿ ಮನೆಯೊಂದಕ್ಕೆ ಬೆಂಕಿ ಬಿದ್ದು, ಮನೆಯಲ್ಲಿದ್ದ ವಸ್ತುಗಳು ಸುಟ್ಟು ಕರಕಲಾದ ಘಟನೆ ಧಾರವಾಡ ಲಕ್ಷ್ಮಿಸಿಂಗನ ಕೆರೆಯಲ್ಲಿ ನಡೆದಿದೆ.


ವೈ- ಧಾರವಾಡ ಲಕ್ಷ್ಮೀಸಿಂಗನಕೆರೆಯ ಶಮೀನಾ ಗದಗವಾಲೆ ಎಂಬುವವರಿಗೆ ಸೇರಿದ ಮನೆಗೆ ಸುಟ್ಟುಕರಕಲಾಗಿದೆ. ಶಾರ್ಟ್ ಸರ್ಕ್ಯೂಟನಿಂದ ಮನೆಗೆ ಏಕಾಏಕಿ ಬೆಂಕಿ ಹೊತ್ತಿಕೊಂಡಿದೆ. ಮನೆಯಲ್ಲಿ ಯಾರು ಇಲ್ಲದ ಸಮಯದಲ್ಲಿ ಈ ದುರ್ಘಟನೆ ನಡೆದಿದ್ದು, ಬಾರಿ ಅನಾಹುತವೊಂದು ತಪ್ಪಿದೆ. ಮನೆಗೆ ಏಕಾಏಕಿ ಬೆಂಕಿ ಕಾಣಿಸಿಕೊಳ್ಳುತ್ತಿದ್ದಂತೆ ಆತಂಕಗೊಂಡ ಸ್ಥಳೀಯರು, ಕೂಡಲೇ ಅಗ್ನಿಶಾಮಕ ದಳಕ್ಕೆ ಮಾಹಿತಿ ನೀಡಿದ್ದಾರೆ. ಆದರೆ, ಘಟನಾ ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ ಆಗಮಿಸಿಲ್ಲವೆಂದು ಸ್ಥಳೀಯರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅಗ್ನಿಶಾಮಕ ದಳದವರಿಗಾಗಿ ಕಾಯದೆ ಅಕ್ಕಪಕ್ಕದ ನಿವಾಸಿಗಳೇ ಧೈರ್ಯ ತೋರಿ, ಹರಸಾಹಸ ಪಟ್ಟು ಬೆಂಕಿ ನಂದಿಸುವಲ್ಲಿ ಸ್ಥಳೀಯರು ಯಶಸ್ವಿಯಾದಗಿದ್ದಾರೆ. ಸ್ಥಳೀಯರ ಸಮಯ ಪ್ರಜ್ಞೆಯಿಂದಾಗಿ ಬೆಂಕಿ ಪಕ್ಕದ ಮನೆಗಳಿಗೆ ಹರಡುವುದು ತಪ್ಪಿದೆ. ಧಾರವಾಡ ವಿದ್ಯಾಗಿರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
