Belagavi

ಬೆಳಗಾವಿ ನಗರದಲ್ಲಿ ಗಾಂಜಾ ಸೇವಿಸಿ ಅಸಹಜ ವರ್ತನೆ; ಇಬ್ಬರು ಆರೋಪಿಗಳನ್ನು ಬಂಧಿಸಿದ ಉದ್ಯಮಬಾಗ ಮತ್ತು ಮಾರ್ಕೆಟ್ ಪೊಲೀಸರು

Share

ಬೆಳಗಾವಿಯಲ್ಲಿ ಮಾದಕ ವಸ್ತುಗಳ ಹಾವಳಿ ತಡೆಯಲು ಪೊಲೀಸರು ಕಟ್ಟುನಿಟ್ಟಿನ ಕ್ರಮ ಕೈಗೊಂಡಿದ್ದಾರೆ. ಸಾರ್ವಜನಿಕ ಸ್ಥಳಗಳಲ್ಲಿ ಗಾಂಜಾ ಸೇವಿಸಿ ಅಸಹಜವಾಗಿ ವರ್ತಿಸುತ್ತಿದ್ದ ಇಬ್ಬರು ವ್ಯಕ್ತಿಗಳನ್ನು ಉದ್ಯಮಬಾಗ ಮತ್ತು ಮಾರ್ಕೆಟ್ ಪೊಲೀಸ್ ಠಾಣೆಯ ಸಿಬ್ಬಂದಿಗಳು ಕಾರ್ಯಾಚರಣೆ ನಡೆಸಿ ವಶಕ್ಕೆ ಪಡೆದಿದ್ದಾರೆ.”

ಬೆಳಗಾವಿ ನಗರದ ಸಾರ್ವಜನಿಕ ಸ್ಥಳಗಳಲ್ಲಿ ಗಾಂಜಾ ಸೇವಿಸಿ ಸಾರ್ವಜನಿಕರಿಗೆ ಕಿರಿಕಿರಿ ಉಂಟುಮಾಡುತ್ತಿದ್ದ ಇಬ್ಬರು ವ್ಯಕ್ತಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಉದ್ಯಮಬಾಗ ಇಂಡಸ್ಟ್ರಿಯಲ್ ಏರಿಯಾದಲ್ಲಿ ಕಾರ್ತಿಕ್ ಅಂಬೇವಾಡಕರ್ ಎಂಬಾತನಿಂದ ಗಾಂಜಾ ಖರೀದಿಸಿ ಸೇವನೆ ಮಾಡಿದ್ದ ಆರೋಪಿ ಮಂಜುನಾಥ ಮೋಹನಸಾ ಧೋಂಗಡಿ (32) ಎಂಬುವವನನ್ನು ಉದ್ಯಮಬಾಗ ಪಿಎಸ್‌ಐ ಪಿ. ಜಿ. ಗಂಡವ್ವಗೋಳ ಮತ್ತು ತಂಡ ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿ ಬಂಧಿಸಿದೆ. ಅತ್ತ ಮಾರ್ಕೆಟ್ ಪೊಲೀಸ್ ಠಾಣಾ ವ್ಯಾಪ್ತಿಯ ಮಹಾದ್ವಾರ ರಸ್ತೆಯಲ್ಲಿ ಗಾಂಜಾ ಸೇವಿಸಿ ಅಸಹಜವಾಗಿ ವರ್ತಿಸುತ್ತಿದ್ದ ಆರೋಪಿ ಸೂರಜ್ ವಿಠಲ ಗುಂಡೇಕರ್ (22) ಎಂಬಾತನನ್ನು ಸಿಎಚ್ ಸುರೇಶ್ ಕಾಂಬಳೆ ನೇತೃತ್ವದ ತಂಡ ವಶಕ್ಕೆ ಪಡೆದುಕೊಂಡಿದೆ. ಎರಡೂ ಪ್ರಕರಣಗಳಲ್ಲಿ ಎನ್‌ಡಿಪಿಎಸ್ ಕಾಯ್ದೆಯಡಿ ಪ್ರಕರಣ ದಾಖಲಾಗಿದ್ದು, ಸಮಯೋಚಿತವಾಗಿ ಕಾರ್ಯನಿರ್ವಹಿಸಿದ ಪೊಲೀಸ್ ಸಿಬ್ಬಂದಿಯ ಕಾರ್ಯವೈಖರಿಯನ್ನು ಬೆಳಗಾವಿ ನಗರ ಪೊಲೀಸ್ ಆಯುಕ್ತರು ಹಾಗೂ ಡಿಸಿಪಿಯವರು ಶ್ಲಾಘಿಸಿದ್ದಾರೆ.

Tags:

error: Content is protected !!