Belagavi

ಬೆಳಗಾವಿಯಲ್ಲಿ ಅದ್ಧೂರಿ ಡಾ. ಅಂಬೇಡ್ಕರರ ಜಯಂತಿ… ಸಂವಿಧಾನ ಅರ್ಥೈಸಿಕೊಂಡು ನಡೆದರೇ ದೇಶ ಇನ್ನಷ್ಟು ಅಭಿವೃದ್ಧಿ ಕಾಣುತ್ತದೆ; ಸಚಿವ ಸತೀಶ್ ಜಾರಕಿಹೊಳಿ

Share

• ಬೆಳಗಾವಿಯಲ್ಲಿ ಅಂಬೇಡ್ಕರ್ ಜಯಂತಿ ಅದ್ಧೂರಿ ಆಚರಣೆ
• ಬಾಬಾಸಾಹೇಬರ ಪ್ರತಿಮೆಗೆ ಸಚಿವರಿಂದ ಪುಷ್ಪ ನಮನ
• ಅಂಬೇಡ್ಕರ್ ವಿಚಾರಧಾರೆ ಅರಿತು ಬಾಳಲು ಕರೆ
• ಜಿಲ್ಲಾಡಳಿತದ ಕಾರ್ಯಕ್ರಮದಲ್ಲಿ ಭಾಗಿಯಾದ ಗಣ್ಯರು

ಬೆಳಗಾವಿಯಲ್ಲಿ ಇಂದು ವಿಶ್ವರತ್ನ ಸಂವಿಧಾನ ಶಿಲ್ಪಿ ಮಹಾಮಾನವತಾವಾದಿ ಡಾ. ಬಿ. ಆರ್. ಅಂಬೇಡ್ಕರರ 135ನೇ ಜಯಂತಿಯನ್ನು ಅದ್ಧೂರಿಯಾಗಿ ಆಚರಿಸಲಾಯಿತು.

ವಿಶ್ವರತ್ನ ಸಂವಿಧಾನ ಶಿಲ್ಪಿ ಮಹಾಮಾನವತಾವಾದಿ ಡಾ. ಬಿ. ಆರ್. ಅಂಬೇಡ್ಕರರ 135ನೇ ಜಯಂತಿಯನ್ನು ಬೆಳಗಾವಿಯ ಅದ್ಧೂರಿಯಾಗಿ ಆಚರಿಸಲಾಯಿತು. ಉದ್ಯಾನದಲ್ಲಿರುವ ಡಾ. ಅಂಬೇಡ್ಕರರ ಮೂರ್ತಿಗೆ ಜಿಲ್ಲಾ ಉಸ್ತುವಾರಿ ಮತ್ತು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ, ಶಾಸಕ ಆಸೀಫ್ ಸೇಠ್ ಸೇರಿದಂತೆ ಇನ್ನುಳಿದ ಗಣ್ಯರು ಮಾಲಾರ್ಪನೆ ಮಾಡಿ ಗೌರವ ಸಲ್ಲಿಸಿದರು.

ಈ ವೇಳೆ ಮಾತನಾಡಿದ ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ ಅವರು ಏಪ್ರೀಲ್ 14 ಸಂವಿಧಾನ ಶಿಲ್ಪಿ ಡಾ. ಬಾಬಾಸಾಹೇಬ್ ಅಂಬೇಡ್ಕರರ ಜಯಂತಿಯ ದಿನ ಅತ್ಯಂತ ಮಹತ್ವದ್ದಾಗಿದೆ. ಎಲ್ಲರೂ ಬಾಬಾಸಾಹೇಬರ ವಿಚಾರಧಾರೆಗಳನ್ನು ಅರಿತು ಬಾಳಬೇಕು. ಸಂವಿಧಾನವನ್ನು ಅರ್ಥೈಸಿಕೊಂಡು ನಡೆದರೇ ದೇಶಕ್ಕೆ ಇನ್ನಷ್ಟು ಒಳ್ಳೆಯದಾಗುತ್ತದೆ ಎಂದರು.

ಉತ್ತರ ಮತಕ್ಷೇತ್ರದ ಶಾಸಕರಾದ ಆಸೀಫ್ ಸೇಠ್ ಅವರು ಡಾ. ಬಾಬಾಸಾಹೇಬ್ ಅಂಬೇಡ್ಕರ್’ರು ಕೇವಲ ಒಂದೇ ಸಮುದಾಯಕ್ಕೆ ಸೀಮಿತವಾಗಿಲ್ಲ. ದೇಶದ ಪ್ರತಿಯೊಬ್ಬ ನಾಗರೀಕರಿಗಾಗಿ ಸಂವಿಧಾನದಲ್ಲಿ ಸಮಾನ ಹಕ್ಕುಗಳನ್ನು ನೀಡಿದ್ದಾರೆ. ಅವರ ನೀಡಿದ ಸಂವಿಧಾನವೇ ದೇಶದ ಅಖಂಡತೆಗೆ ಪಾತ್ರವಾಗಿದ್ದು, ಅಂಬೇಡ್ಕರರನ್ನು ಕೇವಲ ಒಂದು ದಿನ ನೆನೆಯದೇ ಪ್ರತಿದಿನ ನೆನೆಯುವಂತಾಗಬೇಕೆಂದರು.

ಇದೇ ವೇಳೆ ಪ್ರಾದೇಶಿಕ ಆಯುಕ್ತರಾದ ಜಾನಕಿ ಎಂ., ಜಿಲ್ಲಾಧಿಕಾರಿಗಳಾದ ಮೊಹ್ಮದ್ ರೋಷನ್, ಜಿಲ್ಲಾ ಪಂಚಾಯತ್ ಸಿಇಓ ರಾಹುಲ್ ಶಿಂಧೆ, ಮಹಾನಗರ ಪಾಲಿಕೆ ಆಯುಕ್ತ ಕಾರ್ತಿಕ್ ಎಂ., ನಗರ ಪೊಲೀಸ್ ಆಯುಕ್ತರಾದ ಭೂಷಣ್ ಬೋರಸೆ, ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕ ರಾಮನಗೌಡ ಕನ್ನೋಳ್ಳಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಉಪನಿರ್ದೇಶಕಿ ವಿದ್ಯಾವತಿ ಭಜಂತ್ರಿ ಸೇರಿದಂತೆ ಇನ್ನುಳಿದ ಗಣ್ಯರು ಕೂಡ ಡಾ. ಬಾಬಾಸಾಹೇಬ್ ಅಂಬೇಡ್ಕರರಿಗೆ ಗೌರವ ಸಲ್ಲಿಸಿದರು.

Tags:

error: Content is protected !!