Bagalkot

ಬಾಗಲಕೋಟೆ ಬೈ-ಎಲೆಕ್ಷನ್ ಅಖಾಡಕ್ಕೆ ಸಿಎಂ ಎಂಟ್ರಿ:

Share

ಬಾಗಲಕೋಟೆ ಉಪಚುನಾವಣೆಯ ಕಾವು ದಿನದಿಂದ ದಿನಕ್ಕೆ ಏರುತ್ತಿದ್ದು, ಮತದಾರರ ಮನಗೆಲ್ಲಲು ಮುಖ್ಯಮಂತ್ರಿ ಸಿದ್ದರಾಮಯ್ಯ ಖುದ್ದಾಗಿ ಅಖಾಡಕ್ಕಿಳಿದಿದ್ದಾರೆ. ಹಿರಿಯ ಶಾಸಕರನ್ನು ವಿಶ್ವಾಸಕ್ಕೆ ಪಡೆಯುವ ಮೂಲಕ ಚುನಾವಣಾ ಗೆಲುವಿನ ದಾರಿಯನ್ನು ಸುಗಮಗೊಳಿಸಲು ಸಿಎಂ ಮಾಸ್ಟರ್ ಪ್ಲ್ಯಾನ್ ರೂಪಿಸುತ್ತಿದ್ದಾರೆ.

ಬಾಗಲಕೋಟೆ ಉಪಚುನಾವಣೆಯ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜಿಲ್ಲೆಯಲ್ಲಿ ಬಿರುಸಿನ ಪ್ರವಾಸ ಕೈಗೊಂಡಿದ್ದು, ಇಂದು ಹಿರಿಯ ಶಾಸಕ ಬಿ.ಬಿ. ಚಿಮ್ಮನಕಟ್ಟಿ ಅವರ ನಿವಾಸಕ್ಕೆ ಭೇಟಿ ನೀಡಿ ಮಹತ್ವದ ಮಾತುಕತೆ ನಡೆಸಿದರು. ಈ ಸಂದರ್ಭದಲ್ಲಿ ಸಚಿವ ವಿನಯ್ ಕುಲಕರ್ಣಿ ಅವರು ಸಿಎಂಗೆ ಸಾಥ್ ನೀಡಿದ್ದು, ಕ್ಷೇತ್ರದಲ್ಲಿ ಪಕ್ಷದ ಸಂಘಟನೆ ಮತ್ತು ಮತದಾರರನ್ನು ಸೆಳೆಯುವ ಕುರಿತು ಸುದೀರ್ಘ ಚರ್ಚೆ ನಡೆಸಲಾಯಿತು.

ಹಿರಿಯ ನಾಯಕರ ಅನುಭವ ಮತ್ತು ಸಚಿವರ ಸಕ್ರಿಯ ಪಾಲ್ಗೊಳ್ಳುವಿಕೆಯ ಮೂಲಕ ಉಪಚುನಾವಣೆಯಲ್ಲಿ ಕಾಂಗ್ರೆಸ್ ಬಾವುಟ ಹಾರಿಸಲು ಸಿದ್ದರಾಮಯ್ಯ ಅವರು ಇಲ್ಲಿಂದಲೇ ರಣಕಹಳೆ ಮೊಳಗಿಸಿದ್ದಾರೆ. ಈ ಭೇಟಿಯು ಜಿಲ್ಲಾ ರಾಜಕಾರಣದಲ್ಲಿ ಹೊಸ ಸಂಚಲನ ಮೂಡಿಸಿದ್ದು, ವಿರೋಧ ಪಕ್ಷಗಳ ಲೆಕ್ಕಾಚಾರಕ್ಕೆ ಬ್ರೇಕ್ ಹಾಕಲು ಕೈ ನಾಯಕರು ಸಜ್ಜಾಗಿದ್ದಾರೆ.

Tags:

error: Content is protected !!