ಚಚಡಿ ಏತ ನೀರಾವರಿ ಯೋಜನೆ ಪೂರ್ಣಗೊಳಿಸಿ ನಾಲೆಗಳಿಗೆ ನೀರು ಹರಿಸದಿದ್ದರೆ ಉಗ್ರ ಹೋರಾಟ ಮಾಡುವುದಾಗಿ ರೈತ ಸಂಘಟನೆಗಳು ಸರ್ಕಾರಕ್ಕೆ ಗಡುವು ನೀಡಿವೆ. ಈ ಬಗ್ಗೆ ರೈತ ಮುಖಂಡ ಕುಮಾರ್ ತಿಗಡಿ ಅವರು ಅಧಿಕಾರಿಗಳಿಗೆ ಮನವಿ ಸಲ್ಲಿಸಿ, ಖಡಕ್ ಎಚ್ಚರಿಕೆ ನೀಡಿದ್ದಾರೆ.

ಚಚಡಿ ಏತ ನೀರಾವರಿ ಯೋಜನೆಯ ಬಾಕಿ ಉಳಿದಿರುವ ಕಾಮಗಾರಿಗಳನ್ನು ತಕ್ಷಣವೇ ಪೂರ್ಣಗೊಳಿಸಿ ನಾಲೆಗಳಿಗೆ ನೀರು ಹರಿಸಬೇಕು ಹಾಗೂ ಖನಗಾಂವ ಮತ್ತು ವಣ್ಣೂರ ಭಾಗದ ಕಾಲುವೆಗಳನ್ನು ಕೂಡಲೇ ಸ್ವಚ್ಛಗೊಳಿಸಿ ರೈತರಿಗೆ ಅನುಕೂಲ ಮಾಡಿಕೊಡಬೇಕು ಎಂದು ರೈತ ಮುಖಂಡ ಕುಮಾರ್ ತಿಗಡಿ ಒತ್ತಾಯಿಸಿದ್ದಾರೆ. ರೈತರ ಈ ನ್ಯಾಯಯುತ ಬೇಡಿಕೆಗಳನ್ನು ನಿರ್ಲಕ್ಷಿಸಿದಲ್ಲಿ, ರಾಜ್ಯಾಧ್ಯಕ್ಷ ಚೂನಪ್ಪ ಪೂಜೇರಿ ಹಾಗೂ ಗೌರವಾಧ್ಯಕ್ಷರಾದ ಪೂಜ್ಯ ಶಶಿಕಾಂತ ಗುರೂಜಿ ಅವರ ನೇತೃತ್ವದಲ್ಲಿ ನೇಸರ್ಗಿ ಹೈವೇ ಬಂದ್ ಮಾಡಿ ಬೃಹತ್ ಪ್ರತಿಭಟನೆ ನಡೆಸಲಾಗುವುದು ಎಂದು ಅವರು ಸರ್ಕಾರಕ್ಕೆ ಎಚ್ಚರಿಸಿದ್ದಾರೆ. ಬೆಳೆಗಳು ಒಣಗುತ್ತಿದ್ದು, ರೈತರು ಸಂಕಷ್ಟದಲ್ಲಿರುವುದರಿಂದ ಅಧಿಕಾರಿಗಳು ಕೂಡಲೇ ಕಾರ್ಯಪ್ರವೃತ್ತರಾಗಬೇಕು ಎಂದು ಅವರು ಆಗ್ರಹಿಸಿದ್ದಾರೆ.

