ಬೆಳಗಾವಿಯ ಛತ್ರಪತಿ ಶಿವಾಜಿನಗರದ ನಿವಾಸಿಗಳು ಈಗ ಸಾಂಕ್ರಾಮಿಕ ರೋಗದ ಭೀತಿಯಲ್ಲಿ ನಲುಗುತ್ತಿದ್ದಾರೆ. ಕಟ್ಟಡ ನಿರ್ಮಾಣ ಕಾರ್ಯದಿಂದಾಗಿ ಚರಂಡಿ ಬ್ಲಾಕೇಜ್ ಆಗಿದ್ದು, ಕೊಳಚೆ ನೀರು ಕುಡಿಯುವ ನೀರಿಗೆ ಸೇರುತ್ತಿರುವುದು ಜನರಲ್ಲಿ ಆತಂಕ ಮೂಡಿಸಿದೆ.

ಬೆಳಗಾವಿಯ ಛತ್ರಪತಿ ಶಿವಾಜಿನಗರದ 2ನೇ ಮೇನ್ ರಸ್ತೆಯಲ್ಲಿ ಸಾರ್ವಜನಿಕರು ತೀವ್ರ ಸಂಕಷ್ಟ ಎದುರಿಸುತ್ತಿದ್ದಾರೆ. ಕಟ್ಟಡ ನಿರ್ಮಾಣ ಕಾರ್ಯದಿಂದಾಗಿ ಇಲ್ಲಿನ ಚರಂಡಿ ಬ್ಲಾಕ್ ಆಗಿ ಕೊಳಚೆ ನೀರು ರಸ್ತೆಯಲ್ಲೇ ಹರಿಯುತ್ತಿರುವುದಲ್ಲದೆ, ಅಚ್ಚರಿಯೆಂಬಂತೆ ಕುಡಿಯುವ ನೀರಿನ ಪೈಪ್ಗಳನ್ನು ಚರಂಡಿಯ ಒಳಗಡೆಯೇ ಅಳವಡಿಸಲಾಗಿದೆ. ಚರಂಡಿ ನೀರು ಸೋರಿಕೆಯಾಗಿ ಪೈಪ್ಲೈನ್ ಸೇರುತ್ತಿರುವುದರಿಂದ ಸಾರ್ವಜನಿಕರಿಗೆ ಪೂರೈಕೆಯಾಗುವ ನೀರು ಸಂಪೂರ್ಣ ಕಲುಷಿತಗೊಂಡಿದೆ. ನಲ್ಲಿಗಳಲ್ಲಿ ಬರುತ್ತಿರುವ ನೀರು ಹೊಲಸು ವಾಸನೆಯಿಂದ ಕೂಡಿದ್ದು, ಈ ನೀರನ್ನು ಬಳಸಲಾಗದೆ ಮಹಿಳೆಯರು ಹಾಗೂ ಹಿರಿಯ ನಾಗರಿಕರು ತೀವ್ರ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಬೈಟ್

ಈ ಗಂಭೀರ ಸಮಸ್ಯೆಯ ಕುರಿತು ಸಂಬಂಧಿಸಿದ ಅಧಿಕಾರಿಗಳಿಗೆ ಹಲವು ಬಾರಿ ದೂರು ನೀಡಿದರೂ ಯಾವುದೇ ಸ್ಪಂದನೆ ಸಿಕ್ಕಿಲ್ಲ ಎಂದು ಸ್ಥಳೀಯರು ಅಸಮಾಧಾನ ಹೊರಹಾಕಿದ್ದಾರೆ. ಕಲುಷಿತ ನೀರಿನ ಸೇವನೆಯಿಂದಾಗಿ ಪ್ರದೇಶದಲ್ಲಿ ಸಾಂಕ್ರಾಮಿಕ ರೋಗಗಳು ಹರಡುವ ಭೀತಿ ಎದುರಾಗಿದೆ. ಮಹಾನಗರ ಪಾಲಿಕೆ ಅಧಿಕಾರಿಗಳು ಕೂಡಲೇ ಸ್ಥಳಕ್ಕೆ ಭೇಟಿ ನೀಡಿ ಚರಂಡಿ ಬ್ಲಾಕ್ ತೆರವುಗೊಳಿಸಬೇಕು. ಒಂದು ವೇಳೆ ಈ ನಿರ್ಲಕ್ಷ್ಯ ಮುಂದುವರೆದರೆ ಉಗ್ರ ಪ್ರತಿಭಟನೆ ನಡೆಸುವುದಾಗಿ ನಿವಾಸಿಗಳು ಎಚ್ಚರಿಕೆ ನೀಡಿದ್ದಾರೆ. ಬೈಟ್
