ದಾಂಡೇಲಿ-ಹಳಿಯಾಳ ರಸ್ತೆಯಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಿನ್ನೆ ತಡಸಂಜೆ ನಡೆದಿದೆ. ದಾಂಡೇಲಿಯಿಂದ ಧಾರವಾಡದ ಕಡೆಗೆ ಬರುತ್ತಿದ್ದ ಕಾರು, ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಮರಕ್ಕೆ ವೇಗವಾಗಿ ಡಿಕ್ಕಿ ಹೊಡೆದಿದೆ.

ಅಪಘಾತದ ತೀವ್ರತೆಗೆ ಧಾರವಾಡ ಮೂಲದ ಫಕ್ರುಸಾಬ್ ಹಾಗೂ ರಿಹಾನ್ ಎಂಬುವವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಕಾರಿನಲ್ಲಿದ್ದ ಇನ್ನೊಬ್ಬ ವ್ಯಕ್ತಿ ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಹುಬ್ಬಳ್ಳಿಯ ಕಿಮ್ಸ್ (KIMS) ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನಾ ಸ್ಥಳಕ್ಕೆ ಹಳಿಯಾಳ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಕುರಿತು ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.
