Vijaypura

ಕೂಡಲಸಂಗಮ ಸ್ವಾಮೀಜಿ ಕೇಸಿಗೆ ಸ್ಫೋಟಕ ಟ್ವಿಸ್ಟ್​: ಆರೋಪಿಸಿದ ಮಹಿಳೆಯೇ ನಾಪತ್ತೆ

Share

ಕೂಡಲಸಂಗಮ ಪಂಚಮಸಾಲಿ ಪೀಠದ ಜಯಮೃತ್ಯುಂಜಯ ಸ್ವಾಮೀಜಿ ವಿರುದ್ಧದ ಲೈಂಗಿಕ ಕಿರುಕುಳ ಮತ್ತು ಬ್ಲಾಕ್‌ಮೇಲ್ ಆರೋಪ ಪ್ರಕರಣ ಬೇರೆ ಸ್ವರೂಪ ಪಡೆದುಕೊಂಡಿದೆ. ಇತ್ತ ಬೆಂಗಳೂರಿನ ಮಹಿಳೆಯೊಬ್ಬರು ಸ್ವಾಮೀಜಿ ವಿರುದ್ಧ ಆರೋಪ ಮಾಡಿದ್ದೇ ತಡ ಅತ್ತ ವಿಜಯಪುರಲ್ಲಿ ಹನಿಟ್ರ್ಯಾಪ್ ಪ್ರಕರಣ ದಾಖಲಾಗಿದೆ. ಇದರ ಬೆನ್ನಲ್ಲೇ ಯಮೃತ್ಯುಂಜಯ ಸ್ವಾಮೀಜಿ ವಿರುದ್ಧ ಬೆತ್ತಲೆ ವಿಡಿಯೋ ಕಾಲ್ ಆರೋಪ ಮಾಡಿದ್ದ ಮಹಿಳೆ ದಿಢೀರ್ ನಾಪತ್ತೆಯಾಗಿದ್ದಾಳೆ. ಈ ಕುರಿತು ಇಲ್ಲಿದೆ ಡಿಟೇಲ್ಸ್…

ಕೂಡಲಸಂಗಮ ಪಂಚಮಸಾಲಿ ಪೀಠದ ಜಯಮೃತ್ಯುಂಜಯ ಸ್ವಾಮೀಜಿ ವಿರುದ್ಧ ಬೆಂಗಳೂರು ಮೂಲದ ಮಹಿಳೆಯೊಬ್ಬರು ಲೈಂಗಿಕ ಕಿರುಕುಳ ಮತ್ತು ಬ್ಲಾಕ್‌ಮೇಲ್ ಆರೋಪ ಹೊರಿಸಿದ್ದು, ಈ ಪ್ರಕರಣ ಭಾರೀ ಸಂಚಲನ ಮೂಡಿಸಿದೆ. ಆದ್ರೆ, ಮಹಿಳಾ ಆಯೋಗಕ್ಕೆ ದೂರು ನೀಡಿದ್ದ ಮಹಿಳೆ ಇದೀಗ ದಿಢೀರ್ ನಾಪತ್ತೆ ಯಾಗಿದ್ದಾರೆ.ಮಠಕ್ಕೆ ಕರೆಸಿ ನನ್ನೊಂದಿಗೆ ಅಸಭ್ಯವಾಗಿ ವರ್ತಿಸಿದ್ದು, ಆ ವಿಡಿಯೋ ಮಾಡಿಕೊಂಡು ಪ್ರತಿನಿತ್ಯ ರಾತ್ರಿ ಬೆತ್ತಲೆ ವಿಡಿಯೋ ಕಾಲ್ ಮಾಡುವಂತೆ ಬ್ಲ್ಯಾಕ್ ಮೇಲ್ ಮಾಡುತ್ತಿದ್ದಾರೆ. ಹೀಗೆ ಜಯಮೃತ್ಯುಂಜಯ ಸ್ವಾಮೀಜಿ ವಿರುದ್ಧ ಸಾಲು ಸಾಲು ಆರೋಪ ಮಾಡಿದ್ದ ಮಹಿಳೆ ನಾಪತ್ತೆಯಾಗಿದ್ದು, ಪೊಲೀಸರು ಎಷ್ಟೇ ಹುಡುಕಾಡುತ್ತಿದ್ದರೂ ಸಹ ಸಂಪರ್ಕಕ್ಕೆ ಸಿಗುತ್ತಿಲ್ಲ. ಸ್ವಾಮೀಜಿ ವಿರುದ್ಧ ಆರೋಪ ಮಾಡಿದ ಮಹಿಳೆ ನಾಪತ್ತೆ ಜಯಮೃತ್ಯುಂಜಯ ಸ್ವಾಮೀಜಿ ವಿರುದ್ಧ ಹಲವು ಆರೋಪಗಳನ್ನು ಮಾಡಿದ್ದು, ಈ ಸಂಬಂಧ ಅವರ ವಿರುದ್ಧ ಸೂಕ್ತ ಕ್ರಮಕೈಗೊಳ್ಳುವಂತೆ ಮಹಿಳೆ ಮಹಿಳಾ ಆಯೋಗಕ್ಕೆ ದೂರು ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ಪೊಲೀಸರು, ಸಂತ್ರಸ್ತ ಮಹಿಳೆಯಿಂದ ಅಧಿಕೃತ ದೂರು ಪಡೆಯಲು ಮುಂದಾಗಿದ್ದಾರೆ. ಆದ್ರೆ, ಮಹಿಳೆ ಮಾತ್ರ ನಿಗೂಢವಾಗಿ ನಾಪತ್ತೆಯಾಗಿದ್ದಾಳೆ. ಪೊಲೀಸರು ಎಷ್ಟೇ ಸಂಪರ್ಕಕ್ಕೆ ಯತ್ನ ಮಾಡಿದ್ರೂ ಸಂತ್ರಸ್ಥೆ ಸಂಪರ್ಕಕ್ಕೆ ಸಿಗುತ್ತಿಲ್ಲ. ಮಹಿಳೆಯ ಅಧಿಕೃತ ನಿವಾಸಕ್ಕೂ ಪೊಲೀಸರು ತೆರಳಿ ಪರಿಶೀಲನೆ ಮಾಡಿದರೂ ಸಹ ಪತ್ತೆಯಾಗಿಲ್ಲ. ಮಹಿಳೆ ಫೋನ್ ನಂಬರ್ ಕೂಡ ಸ್ವಿಚ್ಡ್ ಆಫ್ ಆಗಿದೆ. ಹೀಗಾಗಿ ಪೊಲೀಸರು ಸದ್ಯಕ್ಕೆ ಯಾವುದೇ ಪ್ರಕರಣ ದಾಖಲಿಸಿಕೊಂಡಿಲ್ಲ.

ಮಹಿಳೆ ಮಹಿಳಾ ಆಯೋಗಕ್ಕೆ ದೂರು ನೀಡುತ್ತಿದ್ದಂತೆಯೆ ಅತ್ತ ವಿಜಯಪುರ ಗ್ರಾಮೀಣ ಠಾಣೆಗೆ ಸ್ವಾಮೀಜಿ ಹನಿಟ್ರ್ಯಾಪ್ ದೂರು ದಾಖಲಿಸಿದ್ದಾರೆ. ಹಲ್ಲೆ ನಡೆಸಿ ನಂತರ ಹಣಕ್ಕಾಗಿ ಬ್ಲ್ಯಾಕ್‌ಮೇಲ್ ಮಾಡಲಾಗುತ್ತಿದೆ ಎಂದು ಬಸವಜಯ ಮೃತ್ಯುಂಜಯ ಸ್ವಾಮೀಜಿ ಅವರು ತಮ್ಮ ಶಿಷ್ಯ ಸಂತೋಷ ಮಂಜಣ್ಣಿ ಮೂಲಕ ವಿಜಯಪುರ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.ಮಹಿಳೆಯು ಅನಾಥಾಶ್ರಮ ನಡೆಸುತ್ತಿರುವುದಾಗಿ ಸುಳ್ಳು ಹೇಳಿ ಪರಿಚಯ ಮಾಡಿಕೊಂಡಿದ್ದಳು. ನನ್ನ ತೇಜೋವಧೆ ಮಾಡುವುದಾಗಿ ಬೆದರಿಸಿ 3 ಕೋಟಿ ರೂಪಾಯಿ ನೀಡುವಂತೆ ಬ್ಲಾಕ್‌ಮೇಲ್ ಮಾಡುತ್ತಿದ್ದಾಳೆ ಎಂದು ದೂರಿನಲ್ಲಿ ಉಲ್ಲೇಖಿಸಿದ್ದಾರೆ. ಸಂಬಂಧ ಮಹಿಳೆ ಸೇರಿದಂತೆ ಹಲವರ ವಿರುದ್ಧ ಎಫ್​ಐಆರ್ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸಿದ್ದಾರೆ. ಬೆಂಗಳೂರಿನ ಮಹಿಳೆ ಮಹಿಳಾ ಆಯೋಗಕ್ಕೆ ದೂರು ನೀಡುತ್ತಿದ್ದಂತೆಯೇ ಅತ್ತ ವಿಜಯಪುರಲ್ಲಿ ಜಯಮೃತ್ಯುಂಜಯ ಸ್ವಾಮೀಜಿ ಸಹ ಮಹಿಳೆ ಸೇರಿದಂತೆ ಇತರರ ವಿರುದ್ಧ ಹನಿಟ್ರ್ಯಾಪ್ ದೂರು ನೀಡಿದ್ದು, ಈ ಸಂಬಂಧ ವಿಜಯಪುರ ಪೊಲೀಸರು ಎಫ್​​ಐಆರ್ ದಾಖಸಿಕೊಂಡು ಮಹಿಳೆ ಹಾಗೂ ಖಾಸಗಿ ಚಾನಲ್ ಎಂಡಿ ಸೇರಿದಂತೆ ಇತರೆ ಆರೋಪಿಗಳಿಗಾಗಿ ಹುಡುಕಾಟ ನಡೆಸಿದ್ದಾರೆ. ಬೆಂಗಳೂರು, ಮಂಡ್ಯ, ವಿಜಯಪುರ ಸೇರಿದಂತೆ ಪಕ್ಕದ ರಾಜ್ಯಗಳಲ್ಲೂ ಕಾರ್ಯಚರಣೆ ನಡೆಸಿದ್ದಾರೆ. ಇದರಿಂದ ಭಯಗೊಂಡು ಮಹಿಳೆ ತಲೆಮರೆಸಿಕೊಂಡ್ರಾ ಎನ್ನುವ ಅನುಮಾಗಳು ವ್ಯಕ್ತವಾಗಿವೆ.

ಇನ್ನೂ ಸ್ವಾಮೀಜಿಯದ್ದು ಎನ್ನಲಾದ ಕೆಲವು ಖಾಸಗಿ ವಿಡಿಯೋ ತುಣುಕುಗಳು ಇತ್ತೀಚೆಗೆ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವುದು ಪ್ರಕರಣಕ್ಕೆ ಮತ್ತಷ್ಟು ತಿರುವು ನೀಡಿದೆ. ಒಂದು ಕಡೆ ಮಹಿಳೆಯು ಲೈಂಗಿಕ ದೌರ್ಜನ್ಯದ ಆರೋಪ ಮಾಡಿದರೆ, ಮತ್ತೊಂದೆಡೆ ಸ್ವಾಮೀಜಿ “ಇದು ವ್ಯವಸ್ಥಿತ ಪಿತೂರಿ ಮತ್ತು ಹನಿಟ್ರ್ಯಾಪ್ ಮಾದರಿಯ ಬ್ಲಾಕ್‌ಮೇಲ್,”ಎಂದು ಹೇಳಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ಸಂಬಂಧ ಪೊಲೀಸರು ತನಿಖೆ ಮುಂದುವರಿಸಿದ್ದು, ಅಂತಿಮವಾಗಿ ಈ ಪ್ರಕರಣ ಯಾವ ಹಂತಕ್ಕೆ ಬಂದು ನಿಲ್ಲಲಿದೆ ಎನ್ನುವುದನ್ನು ಕಾದುನೋಡಬೇಕಿದೆ.

Tags:

error: Content is protected !!