Accident

ಘಾರ್ಲಿ ಕ್ರಾಸ್ ಬಳಿ ಭೀಕರ ಅಪಘಾತ: ಲಾರಿ ಚಕ್ರಕ್ಕೆ ಸಿಲುಕಿ ವೃದ್ಧ ಸಾವು!

Share

ಬೆಳಗಾವಿ ಜಿಲ್ಲೆಯ ಖಾನಾಪುರ ತಾಲೂಕಿನ ಘಾರ್ಲಿ ಕ್ರಾಸ್ ಬಳಿ ಇಂದು ಮಧ್ಯಾಹ್ನ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಅತಿವೇಗವಾಗಿ ಬಂದ ಕಂಟೇನರ್ ಟ್ರಕ್ ಡಿಕ್ಕಿ ಹೊಡೆದ ಪರಿಣಾಮ, ದ್ವಿಚಕ್ರ ವಾಹನ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ದು, ಚಾಲಕ ಲಾರಿ ಸಮೇತ ಪರಾರಿಯಾಗಿದ್ದಾನೆ.

ಅಳ್ನಾವರ-ರಾಮನಗರ ಹೆದ್ದಾರಿಯ ಘಾರ್ಲಿ ಕ್ರಾಸ್ ಬಳಿ ಬುಧವಾರ ಮಧ್ಯಾಹ್ನ ಸಂಭವಿಸಿದ ಅಪಘಾತದಲ್ಲಿ ಉತ್ತರ ಕನ್ನಡ ಜಿಲ್ಲೆಯ ಜೋಯಿಡಾ ತಾಲೂಕಿನ ಮಾಲಂಬಾ ನಿವಾಸಿ ಬಾಳಕೃಷ್ಣ ಯಶವಂತ ಚೌಧರಿ (60) ಎಂಬುವವರು ಮೃತಪಟ್ಟಿದ್ದಾರೆ. ಇವರು ತಮ್ಮ ಲೂನಾ ದ್ವಿಚಕ್ರ ವಾಹನದಲ್ಲಿ ಸಂಚರಿಸುತ್ತಿದ್ದಾಗ, ಹಿಂಬದಿಯಿಂದ ಅತಿವೇಗವಾಗಿ ಬಂದ ಕಂಟೇನರ್ ಟ್ರಕ್ (HR-55/AU-1441) ಡಿಕ್ಕಿ ಹೊಡೆದಿದೆ. ಅಪಘಾತದ ತೀವ್ರತೆಗೆ ಸವಾರ ಕೆಳಗೆ ಬಿದ್ದಿದ್ದು, ಟ್ರಕ್‌ನ ಹಿಂಬದಿಯ ಚಕ್ರ ತಲೆಯ ಮೇಲೆ ಹರಿದಿದ್ದರಿಂದ ಅವರು ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ.

ಘಟನೆ ನಡೆದ ತಕ್ಷಣ ಮಾನವೀಯತೆ ಮರೆತ ಟ್ರಕ್ ಚಾಲಕ ವಾಹನವನ್ನು ನಿಲ್ಲಿಸದೇ ಸ್ಥಳದಿಂದ ಪರಾರಿಯಾಗಿದ್ದಾನೆ. ಈ ಕುರಿತು ಖಾನಾಪುರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ಪಿಎಸ್ಐ ಆರ್. ಎಸ್. ಸಪಾಟೆ ನೇತೃತ್ವದಲ್ಲಿ ತನಿಖೆ ಆರಂಭವಾಗಿದೆ. ಹಿಟ್ ಅಂಡ್ ರನ್ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು, ತಲೆಮರೆಸಿಕೊಂಡಿರುವ ಚಾಲಕ ಮತ್ತು ವಾಹನ ಪತ್ತೆಗಾಗಿ ವಿಶೇಷ ತಂಡಗಳನ್ನು ರಚಿಸಿ ಬಲೆ ಬೀಸಿದ್ದಾರೆ.

Tags:

error: Content is protected !!