hubbali

ಮಹದಾಯಿ ವಿಚಾರದಲ್ಲಿ ಬಿಜೆಪಿ ‘ಫೇಲ್’: ಡಿಸಿಎಂ ಡಿ.ಕೆ.ಶಿವಕುಮಾರ್

Share

• ಮಹದಾಯಿ ಯೋಜನೆಯಲ್ಲಿ ಬಿಜೆಪಿ ವಿಫಲ
• ದಕ್ಷಿಣದ ಸೀಟು ಕಡಿತಕ್ಕೆ ಷಡ್ಯಂತ್ರ
• ಬಿಜೆಪಿ ಎಂಪಿಗಳಿಗೆ ಶಕ್ತಿಯೇ ಇಲ್ಲ
• ಕೇಂದ್ರದ ವಿರುದ್ಧ ಡಿಕೆಶಿ ಕಿಡಿ

ಮಹದಾಯಿ ಯೋಜನೆ ಜಾರಿಯಲ್ಲಿ ಕೇಂದ್ರ ಬಿಜೆಪಿ ಸರ್ಕಾರ ಫೇಲ್ ಅಗಿದೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಕಿಡಿಕಾರಿದ್ದಾರೆ.
ಹುಬ್ಬಳ್ಳಿ ವಿಮಾನನಿಲ್ದಾಣದಲ್ಲಿ ಮಾತನಾಡಿದ ಅವರು, ಮಹಿಳಾ ಮೀಸಲಾತಿ ಹೆಸರಿನಲ್ಲಿ ದಕ್ಷಿಣ ಭಾರತದ ಶಕ್ತಿ ಕುಂದಿಸುವ ಷಡ್ಯಂತ್ರ ನಡೆಯುತ್ತಿದೆ ಎಂದು ಗಂಭೀರ ಆರೋಪ ಮಾಡಿದರು.ಮಹಿಳಾ ಮೀಸಲಾತಿ ಮಸೂದೆಯ ಹಿಂದೆ ದಕ್ಷಿಣ ಭಾರತದ ರಾಜ್ಯಗಳ ಲೋಕಸಭಾ ಸ್ಥಾನಗಳನ್ನು ಕಡಿಮೆ ಮಾಡುವ ದೊಡ್ಡ ಷಡ್ಯಂತ್ರ ಅಡಗಿದೆ ಎಂದು ಡಿ.ಕೆ. ಶಿವಕುಮಾರ್ ಆರೋಪಿಸಿದರು. “ದಕ್ಷಿಣ ಭಾರತದ ರಾಜ್ಯಗಳ ಬೆಂಬಲವಿಲ್ಲದೆಯೇ ಕೇಂದ್ರದಲ್ಲಿ ಅಧಿಕಾರ ಹಿಡಿಯುವ ಹಪಾಹಪಿಗೆ ಬಿಜೆಪಿ ಬಿದ್ದಿದೆ. ಈ ಬಗ್ಗೆ ರಾಜ್ಯದ ಯಾವೊಬ್ಬ ಬಿಜೆಪಿ ನಾಯಕರೂ ತುಟಿಪಿಟಕ್ ಎನ್ನುತ್ತಿಲ್ಲ. ಆದರೆ ಅವರ ಈ ಸೋಲಿನ ಸರಣಿ ಈಗಾಗಲೇ ಆರಂಭವಾಗಿದೆ,” ಎಂದು ಅವರು ಲೇವಡಿ ಮಾಡಿದರು.
ಮಹದಾಯಿ ನೀರಾವರಿ ಯೋಜನೆಗೆ ಸಂಬಂಧಿಸಿದಂತೆ ಬಿಜೆಪಿ ಸರ್ಕಾರಗಳು ಕೇವಲ ಕಾಲಹರಣ ಮಾಡುತ್ತಿವೆ ಎಂದು ಡಿಕೆಶಿ ಆಕ್ರೋಶ ವ್ಯಕ್ತಪಡಿಸಿದರು. “ಕರ್ನಾಟಕದ ಬಿಜೆಪಿ ಸಂಸದರಿಗೆ ಪ್ರಧಾನಿ ಮೋದಿ ಅವರನ್ನು ಭೇಟಿ ಮಾಡಿ ರಾಜ್ಯದ ಹಿತಾಸಕ್ತಿ ಕಾಪಾಡುವಷ್ಟು ಶಕ್ತಿಯಿಲ್ಲ. ನೀರಾವರಿ ವಿಚಾರದಲ್ಲಿ ಬಿಜೆಪಿ ಸಂಪೂರ್ಣವಾಗಿ ವಿಫಲವಾಗಿದೆ. ನಾವು ನಮ್ಮ ಕರ್ತವ್ಯವನ್ನು ಪ್ರಾಮಾಣಿಕವಾಗಿ ಮಾಡುತ್ತಿದ್ದೇವೆ, ಆದರೆ ಬಿಜೆಪಿಯವರು ಕೇವಲ ರಾಜಕೀಯ ಲಾಭ ಪಡೆಯಲು ಯತ್ನಿಸುತ್ತಿದ್ದಾರೆ,” ಎಂದು ವಾಗ್ದಾಳಿ ನಡೆಸಿದರು.

Tags:

error: Content is protected !!