Belagavi

ಬೆಳಗಾವಿಯಲ್ಲಿ ಗೋ-ಸನ್ಮಾನ ಅಭಿಯಾನಕ್ಕೆ ಭರ್ಜರಿ ಬೆಂಬಲ: ಏಪ್ರಿಲ್ 27ಕ್ಕೆ ಜಿಲ್ಲಾಧಿಕಾರಿ ಕಚೇರಿ ಚಲೋ

Share

ಗೋಹತ್ಯೆ ನಿಷೇಧ ಮತ್ತು ಗೋಮಾತೆಯನ್ನು ‘ರಾಷ್ಟ್ರಮಾತೆ’ ಎಂದು ಘೋಷಿಸುವಂತೆ ಆಗ್ರಹಿಸಿ ಬೆಳಗಾವಿಯ ಹಿಂದೂ ಬಾಂಧವರು ಬೃಹತ್ ಅಭಿಯಾನಕ್ಕೆ ಮುಂದಾಗಿದ್ದಾರೆ. ಹನುಮ ಜಯಂತಿಯಂದು ಆರಂಭವಾದ ಸಹಿ ಸಂಗ್ರಹ ಅಭಿಯಾನದ ನಂತರ, ಈಗ ಏಪ್ರಿಲ್ 27ರಂದು ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಲು ಸಿದ್ಧತೆ ನಡೆಸಲಾಗಿದೆ.

ಬೆಳಗಾವಿಯ ಮಾಳ ಮಾರುತಿ ದೇವಸ್ಥಾನದಲ್ಲಿ ಹನುಮ ಜಯಂತಿ ಪ್ರಯುಕ್ತ ಹಮ್ಮಿಕೊಳ್ಳಲಾಗಿದ್ದ ‘ಗೋ-ಸನ್ಮಾನ ಆಹ್ವಾನ ಅಭಿಯಾನ’ಕ್ಕೆ ಸಾರ್ವಜನಿಕರಿಂದ ಅಭೂತಪೂರ್ವ ಬೆಂಬಲ ವ್ಯಕ್ತವಾಗಿದೆ. ಗೋಹತ್ಯೆಯನ್ನು ಸಂಪೂರ್ಣವಾಗಿ ನಿಷೇಧಿಸಬೇಕು ಮತ್ತು ಗೋಮಾತೆಗೆ ರಾಷ್ಟ್ರಮಾತೆ ಎಂಬ ಗೌರವ ನೀಡಬೇಕೆಂದು ಆಗ್ರಹಿಸಿ ಸಾವಿರಾರು ಜನರು ಸಹಿ ಹಾಕುವ ಮೂಲಕ ಬೆಂಬಲ ಸೂಚಿಸಿದ್ದಾರೆ. ಈ ಅಭಿಯಾನದ ಮುಂದಿನ ಭಾಗವಾಗಿ ಏಪ್ರಿಲ್ 27ರಂದು ಬೆಳಗಾವಿಯ ಜಿಲ್ಲಾಧಿಕಾರಿ ಕಚೇರಿ ಹಾಗೂ ತಾಲ್ಲೂಕು ಕಚೇರಿಗಳಿಗೆ ತೆರಳಿ ಅಧಿಕೃತವಾಗಿ ಮನವಿ ಸಲ್ಲಿಸಲು ನಿರ್ಧರಿಸಲಾಗಿದೆ. ಈ ಹೋರಾಟಕ್ಕೆ ಶಕ್ತಿ ತುಂಬಲು ಹೆಚ್ಚಿನ ಸಂಖ್ಯೆಯಲ್ಲಿ ಹಿಂದೂ ಬಾಂಧವರು ಮತ್ತು ಗೋ-ಪ್ರೇಮಿಗಳು ಜಿಲ್ಲಾಧಿಕಾರಿ ಕಚೇರಿ ಮುಂದೆ ಸೇರಬೇಕೆಂದು ಅಭಿಯಾನದ ಆಯೋಜಕರು ಮನವಿ ಮಾಡಿದ್ದಾರೆ.

Tags:

error: Content is protected !!