1. ಚಲಿಸುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ಆಕಸ್ಮಿಕ ಅಗ್ನಿ ಅವಘಡ.
2. ಚಿಕ್ಕನಾಯಕನಹಳ್ಳಿ ತಾಲೂಕಿನ ಹುಳಿಯಾರಿನಲ್ಲಿ ಸಂಭವಿಸಿದ ಘಟನೆ.
3. ತಕ್ಷಣವೇ ಬಸ್‌ನಿಂದ ಕೆಳಗಿಳಿದ ಎಲ್ಲಾ ಪ್ರಯಾಣಿಕರು.
4. ಹೊಗೆ ಕಾಣಿಸಿಕೊಂಡ ಕೂಡಲೇ ಬಸ್ ನಿಲ್ಲಿಸಿದ ಚಾಲಕ.

“ಚಿಕ್ಕನಾಯಕನಹಳ್ಳಿ ತಾಲೂಕಿನ ಹುಳಿಯಾರಿನಲ್ಲಿ ಇಂದು ಸಂಭವಿಸಬಹುದಾಗಿದ್ದ ಭೀಕರ ಬಸ್ ದುರಂತವೊಂದು ಚಾಲಕ ಮತ್ತು ನಿರ್ವಾಹಕರ ಸಮಯಪ್ರಜ್ಞೆಯಿಂದ ಕೂದಲೆಳೆ ಅಂತರದಲ್ಲಿ ತಪ್ಪಿದೆ. ಚಲಿಸುತ್ತಿದ್ದ ಸರ್ಕಾರಿ ಬಸ್‌ನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡಿದ್ದು, ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ತುಮಕೂರು ಜಿಲ್ಲೆ ಚಿಕ್ಕನಾಯಕನಹಳ್ಳಿ ತಾಲೂಕಿನ ಹುಳಿಯಾರು ಕನಕ ವೃತ್ತದ ಬಳಿ ಗುರುವಾರ ಕೆಎಸ್‌ಆರ್‌ಟಿಸಿ ಬಸ್‌ಗೆ ಆಕಸ್ಮಿಕವಾಗಿ ಬೆಂಕಿ ಹೊತ್ತಿಕೊಂಡಿದೆ. ಬಸ್ ಸಂಚರಿಸುತ್ತಿದ್ದ ವೇಳೆ ಏಕಾಏಕಿ ಹೊಗೆ ಕಾಣಿಸಿಕೊಂಡಿದ್ದು, ತಕ್ಷಣವೇ ಎಚ್ಚೆತ್ತ ಚಾಲಕ ಮತ್ತು ನಿರ್ವಾಹಕರು ವಾಹನವನ್ನು ನಿಲ್ಲಿಸಿ ಪ್ರಯಾಣಿಕರನ್ನು ಸುರಕ್ಷಿತವಾಗಿ ಕೆಳಗಿಳಿಸಿದ್ದಾರೆ.
ಸ್ಥಳೀಯರ ಸಹಕಾರದೊಂದಿಗೆ ಬೆಂಕಿಯನ್ನು ನಂದಿಸಲಾಗಿದ್ದು, ದೊಡ್ಡ ಮಟ್ಟದ ಅನಾಹುತವೊಂದು ತಪ್ಪಿದಂತಾಗಿದೆ. ಪ್ರಾಥಮಿಕ ತನಿಖೆಯ ಪ್ರಕಾರ ಯಾಂತ್ರಿಕ ದೋಷವೇ ಬೆಂಕಿ ಅವಘಡಕ್ಕೆ ಕಾರಣ ಎಂದು ಶಂಕಿಸಲಾಗಿದೆ. ಘಟನೆಯಲ್ಲಿ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಕೆಎಸ್‌ಆರ್‌ಟಿಸಿ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.
