ಹಳೇ ಹುಬ್ಬಳ್ಳಿ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿ ಐಪಿಎಲ್ ಬೆಟ್ಟಿಂಗ್ ಜಾಲವನ್ನು ಪತ್ತೆಹಚ್ಚಿ, ₹5.5 ಲಕ್ಷ ನಗದು ಜಪ್ತಿ ಮಾಡಿದ್ದಾರೆ.


ಹೌದು..ಇದೆ ತಿಂಗಳ 6ರಂದು ಆನಂದ ನಗರ ರಸ್ತೆಯ ಬಳಿ ಪೊಲೀಸರು ದಾಳಿ ನಡೆಸಿ, ಕೊಲ್ಕತ್ತಾ-ಪಂಜಾಬ್ ನಡುವಿನ ಪಂದ್ಯಕ್ಕೆ ಸಂಬಂಧಿಸಿದಂತೆ ಬೆಟ್ಟಿಂಗ್ ನಡೆಸುತ್ತಿದ್ದ ವೇಳೆ ದೀಪಕ್ ಬದ್ದಿ ಎಂಬಾತನ ಬಂಧಿಸಲಾಗಿದ್ದು ಇನ್ನೋರ್ವ ಆರೋಪಿ ಎಸ್ಕೆಪ್ ಆಗಿದ್ದಾನೆ ಆತನ ಪತ್ತೆಗೆ ಬೇಲ್ ಬೀಸಿದ್ದಾರೆ.
ಕಾರ್ಯಾಚರಣೆಯಲ್ಲಿ ಹಳೇ ಹುಬ್ಬಳ್ಳಿ ಠಾಣೆಯ ಇನ್ಸೆಕ್ಟರ್ ಮಲ್ಲಿಕಾರ್ಜುನ ಸಿಂಧೂರ ನೇತೃತ್ವದಲ್ಲಿ ಪಿಎಸ್ಐ ಬಿ ಸಾತಣ್ಣವರ, ವಿಶ್ವನಾಥ ಆಲಮಟ್ಟಿ ಹಾಗೂ ಕ್ರೈಮ್ ಸಿಬ್ಬಂದಿ ದಾಳಿ ನಡೆಸಿ ಆರೋಪಿಯನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.
ಈ ಕುರಿತು ಹುಬ್ಬಳ್ಳಿ-ಧಾರವಾಡ ಪೊಲೀಸ್ ಕಮಿಷನರ್ ಎನ್. ಶಶಿಕುಮಾರ್ ಪ್ರತಿಕ್ರಿಯಿಸಿ, ಹಳೆ ಹುಬ್ಬಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಹೆಚ್ಚಿನ ತನಿಖೆ ಕೈಗೊಳ್ಳಲಾಗಿದೆ ಎಂದರು. ಈಗಾಗಲೇ ಇಂತಹ ಹನ್ನೊಂದು ಪ್ರಕರಣಗಳು ದಾಖಲಾಗಿವೆ. ಬೆಟ್ಟಿಂಗ್ ಚಟುವಟಿಕೆಗಳಲ್ಲಿ ತೊಡಗಿರುವವರ ಮೇಲೆ ನಿಗಾ ಇಟ್ಟು, ಮಾಹಿತಿ ಆಧಾರಿಸಿ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ತಿಳಿಸಿದ್ದಾರೆ.
