ಬೆಳಗಾವಿ ಗಾಂಧಿ ನಗರದ ರಾಷ್ಟ್ರೀಯ ಹೆದ್ದಾರಿಯ ಪಕ್ಕದಲ್ಲಿರುವ ಜೈ ಕಿಸಾನ್ ಖಾಸಗಿ ಮಾರುಕಟ್ಟೆ ಲೈಸನ್ಸ್ ರದ್ದು ಮಾಡಿರುವುದನ್ನು ಪ್ರಶ್ನಿಸಿ ಕೆಎಟಿ ಹೋದ ವೇಳೆ ಖಾಸಗಿ ಮಾರುಕಟ್ಟೆಯ ಅರ್ಜಿ ವಜಾ ಮಾಡಿ ಆದೇಶ ಹೊರಡಿಸಿದೆ ಎಂದು ನ್ಯಾಯವಾದಿ ನಿತೀನ್ ಬೋಳಬಂದಿ ಹೇಳಿದರು.

ಬುಧವಾರ ಬೆಳಗಾವಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು. ಜೈ ಕಿಸಾನ್ ಖಾಸಗಿ ಮಾರುಕಟ್ಟೆಯ ಲೈಸನ್ಸ್ ರದ್ದು ಆದಮೇಲೆ 30 ದಿನಗಳ ಒಳಗೆ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಬೇಕಿತ್ತು. ಸಮಯದ ವಿಳಂಬದಿಂದ ಕೆಎಟಿಗೆ ಲೈಸನ್ಸ್ ರದ್ದು ಮಾಡಿರುವುದನ್ನು ರದ್ದು ಮಾಡಬೇಕು ಎಂದು ಅರ್ಜಿ ಸಲ್ಲಿಸಿದರು. ಆದರೆ ಅದನ್ನು ಕೆಎಟಿ ವಜಾಗೊಳಿಸಿ ಆದೇಶ ಹೊರಡಿಸಿದೆ. ಅವರು ಬೇಕಾದರೆ ಮುಂದೆ ನ್ಯಾಯಾಲಯಕ್ಕೆ ಹೋದರೂ ಅದು ನಿಲ್ಲುವುದಿಲ್ಲ ಎಂದರು.

ರಾಜಕುಮಾರ ಟೋಪಣ್ಣವರ ಮಾತನಾಡಿ, ಬೆಳಗಾವಿಯ ಸ್ಥಳೀಯ ಬಿಜೆಪಿ ಶಾಸಕರು ಖಾಸಗಿ ಮಾರುಕಟ್ಟೆಯನ್ನು ಗಾಂಧಿ ನಗರದಲ್ಲಿ ಸ್ಥಳಾಂತರಿಸುವ ಹುನ್ನಾರ ನಡೆಸಿದ್ದರು. ಬಿಜೆಪಿ ಸರಕಾರದ ಅವಧಿಯಲ್ಲಿ ಖಾಸಗಿ ಮಾರುಕಟ್ಟೆ ವಿರೋಧ ಮಾಡಿ ಅದನ್ನು ಬಂದ್ ಮಾಡುವಂತೆ ಮನವಿ ಮಾಡಿದರೂ ಸ್ಪಂದಿಸಿರಲಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು. ಬಳಿಕ ಕಾಂಗ್ರೆಸ್ ಸರಕಾರ ಅಧಿಕಾರಕ್ಕೆ ಬಂದ ಬಳಿಕ ಕೃಷಿ ಮಾರುಕಟ್ಟೆ ಸಚಿವರು, ಜಿಲ್ಲಾ ಉಸ್ತುವಾರಿ ಸಚಿವರ ಗಮನಕ್ಕೆ ತಂದು ಜೈ ಕಿಸಾನ್ ಖಾಸಗಿ ಮಾರುಕಟ್ಟೆಯ ಲೈಸನ್ಸ್ ರದ್ದು ಮಾಡಬೇಕು ಎಂದು ಮನವಿ ಸಲ್ಲಿಸಿದ್ದೇವು. ಎಪಿಎಂಸಿ ಮಾರುಕಟ್ಟೆಯಲ್ಲಿರುವ ಸಣ್ಣ ಸಣ್ಣ ವ್ಯಾಪಾರಿಗಳ ಜೊತೆಗೆ ಹೋರಾಟ ನಡೆಸಿದ್ದಕ್ಕೆ ಈಗ ಜಯ ಸಿಕ್ಕಿದೆ ಎಂದರು.
ಕೇಂದ್ರ ಸರಕಾರ ಕೃಷಿ ಮಸೂದೆ ಕಾಯ್ದೆಯನ್ನು ಜಾರಿಗೆ ತಂದು ದೆಹಲಿಯಲ್ಲಿ ಸಾವಿರಾರು ಸಂಖ್ಯೆಯಲ್ಲಿ ರೈತರು ಹೋರಾಟ ಮಾಡಿದ ಬಳಿಕ ಆ ಕಾಯ್ದೆಯನ್ನು ಹಿಂಪಡೆದರು.
ಬೆಳಗಾವಿ ಕೃಷಿ ಮಾರುಕಟ್ಟೆಯನ್ನು ಹೈಟೆಕ್ ಮಾಡಲು ಕೇಂದ್ರ ಮತ್ತು ರಾಜ್ಯ ಸರಕಾರದ ಅನುದಾನದಲ್ಲಿ ದೊಡ್ಡ ಪ್ರಾಂಗಣದಲ್ಲಿ ಮಳೆಗೆ ನಿರ್ಮಾಣ ಮಾಡಿದ್ದರು. ಆದರೆ ಸ್ಥಳೀಯ ಬಿಜೆಪಿ ಶಾಸಕರ ಕೈವಾಡದಿಂದ ಖಾಸಗಿ ಮಾರುಕಟ್ಟೆ ನಿರ್ಮಾಣವಾಗಿತ್ತು. ಖಾಸಗಿ ಮಾರುಕಟ್ಟೆ ಪರವಾಗಿ ಬಿಜೆಪಿ ನಾಯಕರು ಹೋರಾಟದಲ್ಲಿ ಭಾಗಿಯಾಗಿದ್ದರು. ಅದು ರೈತರ ಪರವಾಗಿರಲಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ಸಾಮಾಜಿಕ ಕಾರ್ಯಕರ್ತ ಸುಜೀತ್ ಮುಳಗುಂದ ಮಾತನಾಡಿ, ಕಾನೂನು ಬಾಹಿರವಾಗಿ ನಿರ್ಮಾಣ ಮಾಡಿದ್ದ ಜೈ ಕಿಸಾನ್ ಮಾರುಕಟ್ಟೆಯನ್ನು ಎಪಿಎಂಸಿ ಪ್ರಾಂಗಣದಲ್ಲಿ ಸ್ಥಳಾಂತರ ಮಾಡಿದ್ದಾರೆ. ಆದರೆ ಅಲ್ಲಿ ಭಾನುವಾರ ಮಾರುಕಟ್ಟೆಯಲ್ಲಿ ಅಕ್ರಮವಾಗಿ ವ್ಯಾಪಾರ ವಹಿವಾಟು ನಡೆಸಿದ್ದಾರೆ. ಅದನ್ನು ನಿಲ್ಲಿಸಿ ಎಪಿಎಂಸಿ ಪ್ರಾಂಗಣದಲ್ಲಿಯೇ ವ್ಯಾಪಾರ ವಹಿವಾಟ ನಡೆಸುವಂತೆ ಮಾಡಬೇಕು. ರೈತರಿಗೆ ಅನಕೂಲವಾಗುವ ನಿಟ್ಟಿನಲ್ಲಿ ನಿರ್ಮಾಣ ಮಾಡಿರುವ ಭಾನುವಾರ ಮಾರುಕಟ್ಟೆ ಅವರಿಗೆ ಉಪಯೋಗವಾಗಬೇಕು ಎಂದರು.
