BELAGAVI

ಬೆಳಗಾವಿ ಮಹಾಂತೇಶ ನಗರದಲ್ಲಿ ಪಾಲಿಕೆ ಆಯುಕ್ತರ ಸ್ವಚ್ಛತಾ ರೌಂಡ್ಸ್!

Share

ಬೆಳಗಾವಿ ಮಹಾನಗರ ಪಾಲಿಕೆಯ ಆಯುಕ್ತರು ಇಂದು ನಗರದ ವಿವಿಧೆಡೆ ಹಠಾತ್ ಭೇಟಿ ನೀಡಿ ಸ್ವಚ್ಛತಾ ಕಾರ್ಯವನ್ನು ಪರಿಶೀಲಿಸಿದ್ದಾರೆ. ಮಹಾಂತೇಶ ನಗರದ ಜನವಸತಿ ಪ್ರದೇಶಗಳಲ್ಲಿ ಸಂಚರಿಸಿದ ಅಧಿಕಾರಿಗಳು, ಸಾರ್ವಜನಿಕ ನೈರ್ಮಲ್ಯ ಕಾಪಾಡುವ ಕುರಿತು ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.


ಬೆಳಗಾವಿ ಮಹಾನಗರ ಪಾಲಿಕೆಯ ಆಯುಕ್ತರಾದ ಕಾರ್ತೀಕ್ ಎಂ. ಅವರು ಇಂದು ಮಹಾಂತೇಶ ನಗರ ವ್ಯಾಪ್ತಿಯ ವಿವಿಧ ಜನವಸತಿ ಪ್ರದೇಶಗಳಿಗೆ ಭೇಟಿ ನೀಡಿ, ಕೈಗೊಳ್ಳಲಾಗಿರುವ ಸ್ವಚ್ಛತಾ ಕಾರ್ಯಗಳ ಕುರಿತು ಖುದ್ದು ಪರಿಶೀಲನೆ ನಡೆಸಿದರು. ಈ ಸಂದರ್ಭದಲ್ಲಿ ರಸ್ತೆಗಳ ನೈರ್ಮಲ್ಯ ಹಾಗೂ ಚರಂಡಿ ಹೂಳೆತ್ತುವ ಕಾರ್ಯವನ್ನು ವೀಕ್ಷಿಸಿದ ಅವರು, ಸಾರ್ವಜನಿಕರಿಗೆ ತೊಂದರೆಯಾಗದಂತೆ ನಿರಂತರವಾಗಿ ಸ್ವಚ್ಛತೆ ಕಾಪಾಡಲು ಆರೋಗ್ಯ ವಿಭಾಗದ ಅಧಿಕಾರಿಗಳಿಗೆ ಮತ್ತು ಸಿಬ್ಬಂದಿಗಳಿಗೆ ಕಟ್ಟುನಿಟ್ಟಿನ ನಿರ್ದೇಶನ ನೀಡಿದರು. ಈ ಭೇಟಿಯ ಸಮಯದಲ್ಲಿ ನಗರ ಸೇವಕರಾದ ರಾಜಶೇಖರ ಡೋಣಿ ಹಾಗೂ ಪಾಲಿಕೆಯ ಆರೋಗ್ಯ ವಿಭಾಗದ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದು, ಆಯುಕ್ತರಿಗೆ ಸ್ಥಳೀಯ ಸ್ಥಿತಿಗತಿಗಳ ಬಗ್ಗೆ ಮಾಹಿತಿ ನೀಡಿದರು.

Tags:

error: Content is protected !!