BELAGAVI

ಕೇಂದ್ರ ಸರ್ಕಾರದ ಮೂರು ಹೊಸ ಸಂಹಿತೆಗಳಿಗೆ ವಿರೋಧ

Share

ಕೇಂದ್ರ ಸರ್ಕಾರ ಜಾರಿ ಮಾಡುತ್ತಿರುವ ನೂತನ ಮೂರು ಸಂಹಿತೆಗಳನ್ನು ವಿರೋಧಿಸಿ ಇಂದು ಬೆಳಗಾವಿಯಲ್ಲಿ ಸಿ.ಐ.ಟಿ.ಯೂ ವತಿಯಿಂದ ಪ್ರತಿಭಟನೆಯನ್ನು ನಡೆಸಲಾಯಿತು.

ಇಂದು ಬೆಳಗಾವಿಯಲ್ಲಿ ಪ್ರತಿಭಟನಾ ರ್ಯಾಲಿ ನಡೆಸಿ ಬೆಳಗಾವಿ ಜಿಲ್ಲಾಧಿಕಾರಿಗಳ ಕಾರ್ಯಾಲಯಕ್ಕೆ ತಲುಪಿದ ಸಿ.ಐ.ಟಿ.ಯೂ ಕಾರ್ಯಕರ್ತರು ಕೇಂದ್ರ ಸರ್ಕಾರದ ನೀತಿಯನ್ನು ಖಂಡಿಸಿ ಜಿಲ್ಲಾಧಿಕಾರಿಗಳ ಮೂಲಕ ಕೇಂದ್ರ ಸರ್ಕಾರಕ್ಕೆ ಮನವಿಯನ್ನು ಸಲ್ಲಿಸಿದರು.

ಸಿಐಟಿಯೂ ನೇತೃತ್ವದಲ್ಲಿ ಕೇಂದ್ರ ಸರ್ಕಾರದ ಹೊಸ ನಾಲ್ಕು ಕಾರ್ಮಿಕ ಸಂಹಿತೆಗಳನ್ನು ವಿರೋಧಿಸಿ ಭಾರತಾದ್ಯಂತ ಕರಾಳ ದಿನಾಚರಣೆಯನ್ನು ಆಚರಿಸಲಾಗುತ್ತಿದೆ. ಈ ಹಿನ್ನೆಲೆ ಬೆಳಗಾವಿಯಲ್ಲಿಯೂ ಸಿಐಟಿಯು ತನ್ನ ಪ್ರತಿಭಟನೆಯನ್ನು ನಡೆಸಿತು. ಆದೇಶದ ಪತ್ರಗಳನ್ನು ಸುಟ್ಟು ತನ್ನ ಅಸಮಾಧಾನವನ್ನು ಹೊರ ಹಾಕಿತು.

ಕಾರ್ಮಿಕ ಕಾನೂನುಗಳನ್ನು ಬದಲಾವಣೆ ಕೇಂದ್ರ ಸರ್ಕಾರ ಬದಲಾವಣೆ ಮಾಡಿ, ಮಾಲೀಕರ ಜೇಬುಗಳನ್ನು ತುಂಬುತ್ತಿದೆ. ಅಲ್ಲದೇ ಕಾರ್ಮಿಕ ಹೊಟ್ಟೆ ಮೇಲೆ ಕಾಲು ತರುವ ಕೆಲಸವನ್ನು ಮಾಡುತ್ತಿದೆ. ನೂತನ ಸಂಹಿತೆಗಳನ್ನು ಜಾರಿಗೊಳಿಸಬಾರದು ಎಂದು ಫೆಬ್ರುವರಿಯಲ್ಲಿ ಪ್ರತಿಭಟಿಸಿ 4 ಕೋಟಿ ಜನರು ಮನವಿ ಸಲ್ಲಿಸಿದರೂ ಪಿಎಂ ಅವರು ವಿಮರ್ಶೆ ಮಾಡದೇ, ಹೊಸ ಕಾನೂನುಗಳನ್ನು ಜಾರಿ ಮಾಡಲು ಹೊರಟಿದ್ದಾರೆ. ಚೌಕಾಶಿ ಕಾಯ್ದೆ, ಮಾತುಕತೆಯ ಕಾನೂನು, ಹೋರಾಟದ ಹಕ್ಕು, ನೋಂದನಿ ಹಕ್ಕುಗಳನ್ನು ಕಸಿದುಕೊಳ್ಳುತ್ತಿದ್ದಾರೆ. ಕಾರ್ಮಿಕ ಮೇಲೆ ನಡೆಯುತ್ತಿರುವ ದಾಳಿಯನ್ನು ಸಹಿಸಲು ಸಾಧ್ಯವಿಲ್ಲ. ಮುಂದಿನ ದಿನಗಳಲ್ಲಿ ಇದರ ವಿರುದ್ಧ ಉಗ್ರ ಹೋರಾಟ ನಡೆಸಲಾಗುವುದಾಗಿ ಹೋರಾಟದ ನೇತೃತ್ವ ವಹಿಸಿದ್ದ ಜೆ.ಎಂ. ಜೈನೆಖಾನ್ ಎಚ್ಚರಿಕೆಯನ್ನು ನೀಡಿದರು.

ಈ ಸಂದರ್ಭದಲ್ಲಿ ಸಿ.ಐ.ಟಿ.ಯೂ ಪದಾಧಿಕಾರಿಗಳು ಮತ್ತು ಕಾರ್ಮಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗಿಯಾಗಿದ್ಧರು.

Tags:

error: Content is protected !!