ಎಸ್‌ಎಸ್‌ಎಲ್‌ಸಿ ಫಲಿತಾಂಶದ ಪ್ರಕಟಣೆಯಾಗಿದ್ದು ವಿಜಯಪುರ ಜಿಲ್ಲೆಗೆ ಹೆಮ್ಮೆ ತಂದ ಸಾಧನೆ ದಾಖಲಾಗಿದೆ.
ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದ ವಿದ್ಯಾರ್ಥಿನಿಯಾಗಿ ಮುದ್ದೇಬಿಹಾಳ ತಾಲೂಕಿನ ಆಕ್ಸಫರ್ಡ್ ಶಾಲೆಯ ಸೌಜನ್ಯ ಬಸವರಾಜ್ ಕಂದಕೂರ ಹೊರಹೊಮ್ಮಿದ್ದಾರೆ. ಇಂಗ್ಲಿಷ್ ಮಾಧ್ಯಮದಲ್ಲಿ ಓದಿದ ಸೌಜನ್ಯ ಅವರು 625ಕ್ಕೆ 625 ಅಂಕಗಳನ್ನು ಪಡೆದು ಅತ್ಯುತ್ತಮ ಸಾಧನೆ ಮಾಡಿದ್ದಾರೆ.
ವಿದ್ಯಾರ್ಥಿನಿಯ ಈ ಅಪೂರ್ವ ಸಾಧನೆಗೆ ಶಾಲಾ ಆಡಳಿತ ಮಂಡಳಿ ಮೆಚ್ಚುಗೆ ವ್ಯಕ್ತಪಡಿಸಿದೆ.

