State

ಮಂಡ್ಯದಲ್ಲಿ ಮೋದಿ ಮಂತ್ರ: ಭೈರವೈಕ್ಯ ಮಂದಿರ ಲೋಕಾರ್ಪಣೆ ತತ್ವಜ್ಞಾನ ಮತ್ತು ತಂತ್ರಜ್ಞಾನದ ಸಮೃದ್ಧ ಭೂಮಿ ಕರ್ನಾಟಕ; ಪಿಎಂ ಮೋದಿ

Share

• ಆದಿಚುಂಚನಗಿರಿಯಲ್ಲಿ ಭೈರವೈಕ್ಯ ಮಂದಿರ ಲೋಕಾರ್ಪಣೆ
• ರಾಗಿ ಮುದ್ದೆ ಶಕ್ತಿಯನ್ನು ಕೊಂಡಾಡಿದ ಪ್ರಧಾನಿ ಮೋದಿ
• ತತ್ವಜ್ಞಾನ ಮತ್ತು ತಂತ್ರಜ್ಞಾನದ ಸಮೃದ್ಧ ಭೂಮಿ ಕರ್ನಾಟಕ
• ಮೋದಿ ಭೇಟಿಯಿಂದ ಹರ್ಷಗೊಂಡ ಮಂಡ್ಯದ ಭಕ್ತಸಾಗರ

ಕರ್ನಾಟಕ ಎಂದರೆ ಕೇವಲ ಭೂಭಾಗವಲ್ಲ, ಅದು ತತ್ವಜ್ಞಾನ ಮತ್ತು ತಂತ್ರಜ್ಞಾನದ ಸಮೃದ್ಧ ಸಂಗಮ” – ಹೀಗೆಂದು ಪ್ರಧಾನಿ ನರೇಂದ್ರ ಮೋದಿ ಅವರು ಕರ್ನಾಟಕದ ಮಣ್ಣಿನ ಗುಣವನ್ನು ಮುಕ್ತಕಂಠದಿಂದ ಶ್ಲಾಘಿಸಿದ್ದಾರೆ. ಮಂಡ್ಯದ ಆದಿಚುಂಚನಗಿರಿ ಮಠದಲ್ಲಿ ಭೈರವೈಕ್ಯ ಮಂದಿರ ಲೋಕಾರ್ಪಣೆಗೊಳಿಸಿ ಮಾತನಾಡಿದ ಅವರು, ರಾಜ್ಯದ ಆಧ್ಯಾತ್ಮಿಕ ಮತ್ತು ಆಧುನಿಕ ಶಕ್ತಿಯನ್ನು ಜಗತ್ತಿಗೆ ಪರಿಚಯಿಸಿದರು.

ಮಂಡ್ಯದ ಆದಿಚುಂಚನಗಿರಿ ಮಠದಲ್ಲಿ ಶ್ರೀ ಗುರು ಭೈರವೈಕ್ಯ ಮಂದಿರವನ್ನು ಪ್ರಧಾನಿ ನರೇಂದ್ರ ಮೋದಿ ಅವರು ಲೋಕಾರ್ಪಣೆಗೊಳಿಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿಯವರಿಗೆ ಕೇಂದ್ರ ಸಚಿವರಾದ ಎಚ್‌ಡಿ ಕುಮಾರಸ್ವಾಮಿ, ಸಚಿವೆ ಶೋಭಾ ಕರಂದ್ಲಾಜೆ, ನಿರ್ಮಲಾನಂದ ಸ್ವಾಮೀಜಿ, ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋತ್ ಸಾಥ್ ನೀಡಿದರು.

ಲೋಕಾರ್ಪಣೆಗೊಳಿಸಿ ಮಾತನಾಡಿದ ಅವರು, ಕರ್ನಾಟಕದ ಸಂಸ್ಕೃತಿ ಮತ್ತು ಮಠದ ಸೇವೆಯನ್ನು ಮುಕ್ತಕಂಠದಿಂದ ಶ್ಲಾಘಿಸಿದರು. ಕರ್ನಾಟಕಕ್ಕೆ ಬರುವುದೆಂದರೆ ನನಗೆ ಖುಷಿಯ ವಿಷಯ. ಇಲ್ಲಿಗೆ ಬಂದಾಗಲೆಲ್ಲಾ ಹೊಸ ಪ್ರೇರಣೆ ಸಿಗುತ್ತದೆ. ಅದರಲ್ಲೂ ಸಕ್ಕರೆ ನಾಡು ಮಂಡ್ಯಕ್ಕೆ ಬಂದಿರುವುದು ಈ ಭೇಟಿಯನ್ನು ಇನ್ನಷ್ಟು ಮಹತ್ವಪೂರ್ಣವಾಗಿಸಿದೆ ಎಂದು ಪ್ರಧಾನಿ ನರೇಂದ್ರ ಮೋದಿ ನುಡಿದರು. ಕರ್ನಾಟಕದ ಮಣ್ಣಿನ ಗುಣವನ್ನು ಬಣ್ಣಿಸಿದ ಪ್ರಧಾನಿ, ಈ ಮಣ್ಣು ತತ್ವಜ್ಞಾನ ಮತ್ತು ತಂತ್ರಜ್ಞಾನ ಎರಡರಲ್ಲೂ ಸಮೃದ್ಧವಾಗಿದೆ. ಇಲ್ಲಿ ದರ್ಶನದ ಆಳವೂ ಇದೆ, ಟೆಕ್ನಾಲಜಿಯ ಶಕ್ತಿಯೂ ಇದೆ. ಆದಿಚುಂಚನಗಿರಿ ಮಠವು ಕಳೆದ ಎರಡು ಸಾವಿರ ವರ್ಷಗಳಿಂದ ಭಾರತದ ನೈತಿಕ ಮತ್ತು ಆಧ್ಯಾತ್ಮಿಕ ಮೌಲ್ಯಗಳನ್ನು ಜೀವಂತವಾಗಿರಿಸಿರುವ ಸಾಕ್ಷಾತ್ ರೂಪ ಎಂದರು.

ನಿರ್ಮಲಾನಂಧನಾಥ ಸ್ವಾಮೀಜಿಯವರು ಮಾತನಾಡಿ, ಡಾ.ಬಾಲಗಂಗಾಧರ ನಾಥ ಸ್ವಾಮೀಜಿಯವರ ಶ್ರೀ ಗುರು ಭೈರವೈಕ್ಯ ಮಂದಿರ ಉದ್ಘಾಟನೆಗೆ ಬಂದ ಪ್ರಧಾನಿ ಮೋದಿಜಿಯವರಿಗೆ ಧನ್ಯವಾದ, ಇದರಿಂದ ಕೋಟ್ಯಾಂತರ ಭಕ್ತರ ಆಸೆ ನೆರವೇರಿದೆ ಎಂದರು. 2022 ರಲ್ಲಿ ಕೆಂಪೇಗೌಡರನ್ನು ನೆನೆಸಿದ್ದ ಪ್ರಧಾನಿ ಮೋದಿಯವರು, ಈಗಲೂ ಮಾದರಿ ಎಂದಿದ್ದರು. ಅದೇ ರೀತಿಯ ಪರಂಪರೆಗೆ ಸೇರಿದವರು ದೇವೇಗೌಡರು. ಮೋದಿಯವರ ದೂರದೃಷ್ಟಿಯಿಂದ ಬಹುತೇಕ ಯೋಜನೆಗಳನ್ನು ಜನರ ಕಲ್ಯಾಣಕ್ಕಾಗಿ ಜಾರಿಗೆ ತಂದಿದ್ದಾರೆ. 2016 ರಲ್ಲಿ ಆರಂಭಿಸಿದ “ಸ್ಟಾರ್ಟ್ ಅಪ್ ಇಂಡಿಯಾ” ಯೋಜನೆ ಮೂಲಕ, 400 ಸ್ಟಾರ್ಟ್ ಅಪ್ ಕಂಪನಿಗಳನ್ನು, 2 ಲಕ್ಷಕ್ಕೆ ಏರಿಸಿದ್ದಾರೆ. ದೇಶದ ಆರ್ಥಿಕತೆ ಬೆಳೆಯಲು ಇದೇ ಕಾರಣ ಎಂದು ಹೇಳಿದರು.

ಈ ಸಂದರ್ಭದಲ್ಲಿ ಮಾಜಿ ಪ್ರಧಾನಿ ದೇವೇಗೌಡರು, ಸಚಿವ ಚೆಲುವರಾಯಸ್ವಾಮಿ, ಆರ್ ಅಶೋಕ್ ಉಪಸ್ಥಿತಿ ಇದ್ದರು.

Tags:

error: Content is protected !!