• ಯೋಗಿಶ್ ಗೌಡ ಕೊಲೆ: ವಿನಯ್ ಕುಲಕರ್ಣಿ ದೋಷಿ
• ಶಾಸಕ ವಿನಯ್ ಕುಲಕರ್ಣಿ ಸೇರಿ 17 ಮಂದಿ ಅರೆಸ್ಟ್
• ನಾಳೆ ಪ್ರಕಟವಾಗಲಿದೆ ಶಿಕ್ಷೆಯ ಪ್ರಮಾಣದ ವಿವರ
• ಹತ್ಯೆಯಾದ 10 ವರ್ಷಕ್ಕೆ ಸಿಕ್ಕಿತು ನ್ಯಾಯದ ಜಯ

ಧಾರವಾಡ ಜಿಲ್ಲಾ ಪಂಚಾಯತ್ ಮಾಜಿ ಸದಸ್ಯ ಯೋಗೇಶ್ ಗೌಡ ಕೊಲೆ ಪ್ರಕರಣದ ತೀರ್ಪನ್ನು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಬುಧವಾರ ಪ್ರಕಟಿಸಿದೆ. ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ಅಪರಾಧಿ (ದೋಷಿ) ಎಂದು ಕೋರ್ಟ್ ಘೋಷಣೆ ಮಾಡಿದೆ.
ಕಳೆದ 10 ವರ್ಷಗಳಿಂದ ಪ್ರಕರಣದ ತನಿಖೆ ನಡೆಯುತ್ತಿದ್ದು, ವಿನಯ್ ಕುಲಕರ್ಣಿ ಸೇರಿ 17 ಮಂದಿ ಅಪರಾಧಿಗಳು ಎಂದು ಜನಪ್ರತಿನಿಧಿ ನ್ಯಾಯಾಲಯದ ನ್ಯಾಯಾಧೀಶರಾದ ಸಂತೋಷ್ ಗಜಾನನ್ ಭಟ್ ಅವರು ತೀರ್ಪು ಪ್ರಕಟಿಸಿದ್ದಾರೆ. ಕೂಡಲೇ ಅವರನ್ನು ಸಿಬಿಐ ಪೊಲೀಸರು ವಶಕ್ಕೆ ಪಡೆದುಕೊಳ್ಳಲು ಸೂಚಿಸಿದ್ದಾರೆ. ಈ ಮೂಲಕ ಶಾಸಕರು ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲು ಸೇರಲಿದ್ದು, ಗುರುವಾರ ಶಿಕ್ಷೆಯ ಪ್ರಮಾಣ ಪ್ರಕಟವಾಗಲಿದೆ.
2016 ಜೂನ್ 15 ರಂದು ಧಾರವಾಡದ ಸಪ್ತಾಪುರದಲ್ಲಿರುವ ಯೋಗೇಶ್ ಗೌಡ ಅವರದ್ದೇ ಒಡೆತನದ ಉದಯ್ ಜಿಮ್‌ನಲ್ಲಿ ಬೆಳಗಿನ ಜಾವ ಅವರು ದಿನಪತ್ರಿಕೆ ಓದುತ್ತಿದ್ದಾಗ, ಅಲ್ಲಿಗೆ ಬಂದ ದುಷ್ಕರ್ಮಿಗಳ ಗುಂಪೊಂದು ಅವರ ಕಣ್ಣಿಗೆ ಖಾರದ ಪುಡಿ ಎರಚಿ, ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರವಾಗಿ ಹತ್ಯೆ ಮಾಡಿ ಪರಾರಿಯಾಗಿತ್ತು. ವಿನಯ್ ಕುಲಕರ್ಣಿ, ಚಂದ್ರಶೇಖರ್ ಇಂಡಿ, ಬಸವರಾಜ ಮುತ್ತಗಿ. ವಿನಾಯಕ ಕಟಗಿ. ಶಿವಾನಂದ ಬಾಗವಾಡಿ, ಸಂದೀಪ್ ಸವದತ್ತಿ. ಮಹಂತೇಶ್ ಸಿರಿಯಣ್ಣವರ್ ಮತ್ತು ನವೀನ್ ಮುದ್ದಾಪುರ್ ಆರೋಪಿಗಳಾಗಿದ್ದರು.
ಇನ್ನು ಯೋಗಿಶಗೌಡ ಅವರ ಸಂಬಂಧಿಗಳು ಕಾನೂನಿನಕ್ಕಿಂತ ಯಾರೂ ದೊಡ್ಡವರಿಲ್ಲ. ಈ ಪ್ರಕರಣದ ಹೋರಾಟಕ್ಕೆ ಬೆಂಬಲ ನೀಡಿದ ಎಲ್ಲರಿಗೂ ಧನ್ಯವಾದಗಳನ್ನು ತಿಳಿಸಿದರು. ಈ ಹೀನ ಕೃತ್ಯ ಎಸಗಿದವರಿಗೆ ಜೀವಾವಧಿ ಶಿಕ್ಷೆಯಾಗಲಿ ಎಂದರು.
