BELAGAVI

ಬೆಳಗಾವಿಯಲ್ಲಿಲ್ಲ ಕುಡಿಯುವ ನೀರಿಗೆ ತೊಂದರೆ…ಜಲಾಶಯಗಳ ನೀರಿನ ಮಟ್ಟದ ಮೇಲಿದೆ ನಿಗಾ

Share

ಬೇಸಿಗೆಯ ಬಿಸಿ ಏರುತ್ತಿದ್ದಂತೆ ಬೆಳಗಾವಿ ಜಿಲ್ಲೆಯಲ್ಲಿ ಕುಡಿಯುವ ನೀರಿನ ಬವಣೆ ಎದುರಾಗದಂತೆ ಜಿಲ್ಲಾಡಳಿತ ಈಗಿನಿಂದಲೇ ಮುನ್ನೆಚ್ಚರಿಕೆ ಕ್ರಮ ಕೈಗೊಂಡಿದೆ. ಜಿಲ್ಲೆಯ ಜಲಾಶಯಗಳ ನೀರಿನ ಮಟ್ಟದ ಮೇಲೆ ಕಣ್ಣಿಟ್ಟಿರುವ ಜಿಲ್ಲಾಧಿಕಾರಿ ಮೊಹ್ಮದ್ ರೋಷನ್ ಅವರು, ಜನರಿಗೆ ಹಾಗೂ ಜಾನುವಾರುಗಳಿಗೆ ನೀರಿನ ತೊಂದರೆಯಾಗದಂತೆ ಕೈಗೊಂಡಿರುವ ಕ್ರಮಗಳ ಬಗ್ಗೆ ಮಾಹಿತಿ ನೀಡಿದ್ದಾರೆ.

ಇಂದು ಬೆಳಗಾವಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಜಿಲ್ಲಾಧಿಕಾರಿಗಳಾದ ಮೊಹ್ಮದ್ ರೋಷನ್ ಅವರು, ಬೆಳಗಾವಿಯ 500 ಗ್ರಾ.ಪಂ.ಗಳಲ್ಲಿ ಯಾವುದೇ ಕುಡಿಯುವ ನೀರಿನ ಕೊರತೆಯಿಲ್ಲ. ಈಗಾಗಲೇ ಸಭೆ ನಡೆಸಲಾಗಿದ್ದು, 126 ಗ್ರಾಮಗಳಲ್ಲಿ ಕುಡಿಯುವ ನೀರಿನ ಕೊರತೆ ಸಂಭವಿಸುವ ಸಾಧ್ಯತೆಯಿದೆ. ಆಯಾ ಗ್ರಾ.ಪಂ ವ್ಯಾಪ್ತಿಯಲ್ಲಿ ಸಿಇಓ ಅಧ್ಯಕ್ಷತೆಯಲ್ಲಿ ಸ್ವಂತ ಟ್ಯಾಂಕರ್ ವ್ಯವಸ್ಥೆ ಮಾಡಲಾಗಿದ್ದು, ಖಾಸಗಿ ಬೋರವೆಲ್’ಗಳನ್ನು ಗುರುತಿಸಲಾಗಿದೆ. ಜಿಲ್ಲೆಯ ಜಲಾಶಯಗಳ ಮಟ್ಟಗಳ ಮೇಲೆ ನಿಗಾವಹಿಸಲಾಗಿದ್ದು, ರೈತರಿಗೆ ಮತ್ತು ಜನರಿಗೆ ಸಮರ್ಪಕ ನೀರು ನೀಡಲು ಕ್ರಮವಹಿಸಲಾಗುತ್ತಿದೆ. ಇನ್ನು ನಗರ ಪ್ರದೇಶದಲ್ಲಿ ಖಾಸಗಿ ಟ್ಯಾಂಕರ್’ಗಳಿಗೆ ಹೆಚ್ಚಿನ ದರ ತೆಗೆದುಕೊಂಡರೇ ಅವರ ವಿರುದ್ಧ ಕ್ರಮಕೈಗೊಳ್ಳಲಾಗುವುದು ಎಂದರು.

Tags:

error: Content is protected !!