Vijaypura

ವಿಜಯಪುರ ಪೊಲೀಸರ ಮೇಘಾ ಆಪರೇಷನ್ – 30 ಕೇಸ್ ಕ್ಲಿಯರ್!

Share

ವಿಜಯಪುರ ನಗರ ಉಪ-ವಿಭಾಗದ ವ್ಯಾಪ್ತಿಯಲ್ಲಿ ನಡೆದ ವಿವಿಧ ಕಳ್ಳತನ ಪ್ರಕರಣಗಳನ್ನು ಪೊಲೀಸರು ಭೇದಿಸಿ ಒಟ್ಟು ₹1.60 ಕೋಟಿ ಮೌಲ್ಯದ ಆಸ್ತಿಯನ್ನು ವಶಪಡಿಸಿಕೊಂಡಿದ್ದಾರೆ. ಈ ಕುರಿತು ಜಿಲ್ಲಾ ಪೊಲೀಸ್ ಅಧೀಕ್ಷಕರಾದ ಲಕ್ಷ್ಮಣ ನಿಂಬರಗಿ ತಿಳಿಸಿದ್ದಾರೆ.

ವಿಜಯಪುರ ನಗರದಲ್ಲಿಂದು ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು ವಿಜಯಪುರ ನಗರದ ಗಾಂಧಿಚೌಕ, ಗೋಲಗುಂಬಜ್, ಎಪಿಎಂಸಿ, ಆದರ್ಶನಗರ ಹಾಗೂ ಜಲನಗರ ಪೊಲೀಸ್ ಠಾಣೆಗಳಲ್ಲಿ ದಾಖಲಾಗಿದ್ದ ಪ್ರಕರಣಗಳನ್ನು ಪತ್ತೆಹಚ್ಚಲು ವಿಶೇಷ ತನಿಖಾ ತಂಡಗಳನ್ನು ರಚಿಸಿ ಕಾರ್ಯಾಚರಣೆ ನಡೆಸಲಾಗಿತ್ತು. ಹೆಚ್ಚುವರಿ ಪೊಲೀಸ್ ಅಧೀಕ್ಷಕ ರಾಮನಗೌಡ ಹಟ್ಟಿ ಹಾಗೂ ಡಿಎಸ್‌ಪಿ ನಾಗರಾಜ್ ಮಾರ್ಗದರ್ಶನದಲ್ಲಿ ಅಧಿಕಾರಿಗಳು ಕಾರ್ಯನಿರ್ವಹಿಸಿದ್ದರು.
ಗಾಂಧಿಚೌಕ ಠಾಣೆಯಲ್ಲಿ 2026ರ 7 ಪ್ರಕರಣಗಳಲ್ಲಿ 6 ಆರೋಪಿಗಳನ್ನು ಬಂಧಿಸಿ ₹27.25 ಲಕ್ಷ ಮೌಲ್ಯದ ಬಂಗಾರ, ದ್ವಿಚಕ್ರ ವಾಹನಗಳು, ನಗದು ಹಾಗೂ ಇತರೆ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ. ಗೋಲಗುಂಬಜ್ ಠಾಣೆಯಲ್ಲಿ 7 ಪ್ರಕರಣಗಳಲ್ಲಿ 8 ಆರೋಪಿಗಳನ್ನು ಬಂಧಿಸಿ ₹33.02 ಲಕ್ಷ ಮೌಲ್ಯದ ಬಂಗಾರ ಹಾಗೂ ಕಾರನ್ನು ವಶಪಡಿಸಿಕೊಂಡಿದ್ದಾರೆ.

ಎಪಿಎಂಸಿ ಠಾಣೆಯಲ್ಲಿ 2 ಪ್ರಕರಣಗಳಲ್ಲಿ 3 ಆರೋಪಿಗಳನ್ನು ಬಂಧಿಸಿ ₹19.20 ಲಕ್ಷ ಮೌಲ್ಯದ ಆಸ್ತಿ ವಶಪಡಿಸಿಕೊಳ್ಳಲಾಗಿದೆ. ಆದರ್ಶನಗರ ಠಾಣೆಯಲ್ಲಿ 10 ಪ್ರಕರಣಗಳಲ್ಲಿ 21 ಆರೋಪಿಗಳನ್ನು ಬಂಧಿಸಿ ₹74.55 ಲಕ್ಷ ಮೌಲ್ಯದ ಬಂಗಾರ, ವಾಹನಗಳು ಹಾಗೂ ನಗದು ವಶಪಡಿಸಿಕೊಂಡಿರುವುದು ಗಮನಾರ್ಹವಾಗಿದೆ. ಜಲನಗರ ಠಾಣೆಯಲ್ಲಿ 4 ಪ್ರಕರಣಗಳಲ್ಲಿ 5 ಆರೋಪಿಗಳನ್ನು ಬಂಧಿಸಿ ₹6.30 ಲಕ್ಷ ಮೌಲ್ಯದ ಆಭರಣಗಳು ಹಾಗೂ ವಾಹನಗಳನ್ನು ವಶಪಡಿಸಿಕೊಂಡಿದ್ದಾರೆ.

ಒಟ್ಟಾರೆ 2025ರ 17 ಪ್ರಕರಣಗಳು ಹಾಗೂ 2026ರ 13 ಪ್ರಕರಣಗಳನ್ನು ಪತ್ತೆಹಚ್ಚಿ, 43 ಆರೋಪಿಗಳನ್ನು ಬಂಧಿಸಲಾಗಿದೆ. ಆರೋಪಿಗಳಿಂದ ಒಟ್ಟು ₹1,60,32,000 ಮೌಲ್ಯದ ಬಂಗಾರ, ಬೆಳ್ಳಿ ಹಾಗೂ ವಾಹನಗಳನ್ನು ವಶಪಡಿಸಿಕೊಳ್ಳಲಾಗಿದೆ.
ಪ್ರಕರಣಗಳನ್ನು ಶೀಘ್ರದಲ್ಲಿ ಭೇದಿಸಿದ ತನಿಖಾ ತಂಡದ ಕಾರ್ಯಕ್ಷಮತೆಯನ್ನು ಹಿರಿಯ ಪೊಲೀಸ್ ಅಧಿಕಾರಿಗಳು ಶ್ಲಾಘಿಸಿದ್ದಾರೆ.

Tags:

error: Content is protected !!