Dharwad

ಧಾರವಾಡದ ಲಕ್ಮಾಪುರ ಗ್ರಾಮದ ಬಸವಣ್ಣ ದೇವಸ್ಥಾನದಲ್ಲಿ ಕಳ್ಳತನ ಬೆಚ್ಚಿಬಿದ್ದ ಗ್ರಾಮಸ್ಥರು ..

Share

ಗ್ರಾಮದ ಐತಿಹಾಸಿಕ ಬಸವಣ್ಣ ದೇವಸ್ಥಾನದಲ್ಲಿ ಖದೀಮ ಕಳ್ಳರು ಕೈಚಳಕ ತೋರಿಸಿದ್ದು, ದೇವಸ್ಥಾನದಲ್ಲಿನ ಬೆಳ್ಳಿ ಆಭರಣಗಳನ್ನು ಕದ್ದುಕೊಂಡು ಪರಾರಿಯಾಗಿರುವ ಘಟನೆ ಧಾರವಾಡದ ಲಕ್ಮಾಪುರ ಗ್ರಾಮದಲ್ಲಿ ನಡೆದಿದೆ.

ಧಾರವಾಡ ತಾಲೂಕಿನ ಲಕಮಾಪುರ ಗ್ರಾಮದ ಹೊರವಲಯದಲ್ಲಿರುವ ಐತಿಹಾಸಿಕ ಬಸವಣ್ಣ ದೇವಸ್ಥಾನದಲ್ಲಿ ಕಳ್ಳರು ಕೈಚಳಕ ತೋರಿದ್ದು, ದೇವರಿಗೆ ಅರ್ಪಿಸಿದ್ದ ಸುಮಾರು 1,200 ಗ್ರಾಂ ಬೆಳ್ಳಿಯ ಆಭರಣಗಳನ್ನು ದೋಚಿಕೊಂಡು ಕಳ್ಳರು ಪರಾರಿಯಾಗಿದ್ದಾರೆ. ಪ್ರತಿದಿನದಂತೆ ದೇವಸ್ಥಾನಕ್ಕೆ ಪೂಜೆಗೆ ಬಂದ ಭಕ್ತರಿಗೆ ಬಾಗಿಲು ಮುರಿದಿರುವುದು ಗಮನಕ್ಕೆ ಬಂದಿದೆ. ಕೂಡಲೇ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ದುಷ್ಕರ್ಮಿಗಳು ದೇವಸ್ಥಾನದ ಬಾಗಿಲಿನ ಬೀಗ ಒಡೆದು ಒಳನುಗ್ಗಿ, ಬಸವಣ್ಣನ ವಿಗ್ರಹಕ್ಕೆ ಹಾಕಲಾಗಿದ್ದ ಸುಮಾರು 1.2 ಕೆಜಿ ಬೆಳ್ಳಿಯ ಒಡವೆಗಳನ್ನು ದೋಚಿದ್ದಾರೆ. ದೇವಸ್ಥಾನದ ಆವರಣದಲ್ಲಿ ಯಾರೂ ಇಲ್ಲದ ಸಮಯ ನೋಡಿಕೊಂಡು ಕಳ್ಳರು ಈ ಕೃತ್ಯ ಎಸಗಿದ್ದಾರೆ ಎಂದು ಶಂಕಿಸಲಾಗಿದ್ದು, ಕಳ್ಳತನ ಪ್ರಕರಣ ಗ್ರಾಮಸ್ಥರನ್ನು ಬೆಚ್ಚಿ ಬೀಳುವಂತೆ ಮಾಡಿದೆ. ಇನ್ನೂ
ಸುದ್ದಿ ತಿಳಿಯುತ್ತಿದ್ದಂತೆ ಗರಗ ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್ ಶಿವಯೋಗಿ ಲೋಹಾರ ಸ್ಥಳಕ್ಕೆ ದೌಡಾಯಿಸಿ, ಪರಿಶೀಲನೆ ನಡೆಸಿದರು. ಕಳ್ಳರ ಜಾಡು ಹಿಡಿಯಲು ಶ್ವಾನದಳದ ನೆರವು ಪಡೆಯಲಾಗಿದೆ. ಈ ಕುರಿತು ಗರಗ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಗಳ ಪತ್ತೆಗೆ ವಿಶೇಷ ಕಾರ್ಯಾಚರಣೆಯನ್ನು ಪೊಲೀಸರು ಆರಂಭಿಸಿದ್ದಾರೆ. ಸ್ಥಳೀಯರ ಅಳವಡಿಕೆಯಲ್ಲಿದ್ದ ಸಿಸಿಟಿವಿ ಕ್ಯಾಮೆರಾಗಳ ದೃಶ್ಯಾವಳಿಗಳನ್ನು ಪೊಲೀಸರು ಪರಿಶೀಲಿಸುತ್ತಿದ್ದು, ಕಳ್ಳರ ಬಂಧನಕ್ಕೆ ಪೊಲೀಸರು ಬಲೆ ಬೀಸಿದ್ದಾರೆ.

Tags:

error: Content is protected !!