ಹೆದ್ದಾರಿಯಲ್ಲಿ ಬಸ್-ಟಿಪ್ಪರ್ ಭೀಕರ ಡಿಕ್ಕಿ

ನಿಯಂತ್ರಣ ತಪ್ಪಿ ಕಂದಕಕ್ಕೆ ಬಿದ್ದ ಬಸ್
ಹಲವು ಪ್ರಯಾಣಿಕರಿಗೆ ಗಂಭೀರ ಗಾಯ
ಸ್ಥಳಕ್ಕೆ ಧಾವಿಸಿದ ಗ್ರಾಮೀಣ ಪೊಲೀಸರು
ವಿಜಯಪುರ ನಗರದ ಹೊರಭಾಗದಲ್ಲಿರುವ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಕೆಎಸ್‌ಆರ್ಟಿಸಿ ಬಸ್ ಮತ್ತು ಟಿಪ್ಪರ್ ನಡುವೆ ಸಂಭವಿಸಿದ ಭೀಕರ ಡಿಕ್ಕಿಯಲ್ಲಿ ಕೆಎಸ್‌ಆರ್ಟಿಸಿ ಬಸ್ ಕಂದಕಕ್ಕೆ ಉರುಳಿ ಬಿದ್ದಿದೆ.
ಈ ದುರ್ಘಟನೆಯಲ್ಲಿ ಹಲವು ಪ್ರಯಾಣಿಕರು ಗಾಯಗೊಂಡಿದ್ದು, ಅವರನ್ನು ತಕ್ಷಣವೇ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನಾ ಸ್ಥಳಕ್ಕೆ ವಿಜಯಪುರ ಗ್ರಾಮೀಣ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು.
