Vijaypura

ಮಹಿಳೆಯರ ಮೇಲೆ ದೌರ್ಜನ್ಯ ತಡೆಗೆ ಸರ್ಕಾರ ಮುಂದಾಲು ಆಗ್ರಹ

Share

* ಮಹಿಳೆಯರ ಮೇಲೆ ದೌರ್ಜನ್ಯಕ್ಕೆ ಆಕ್ರೋಶ.
* ಮತಾಂತರ ಜಾಲ ಪತ್ತೆಗೆ ಆಗ್ರಹ.
* ಕಾರ್ಖಾನೆಗಳ ತಪಾಸಣೆಗೆ ಹಿಂದೂಪರ ಸಂಘಟನೆ ಒತ್ತಾಯ.
* ಬಿಜೆಪಿ ಮುಖಂಡರಿಂದ ಡಿಸಿಗೆ ಮನವಿ ಸಲ್ಲಿಕೆ.

ಮಹಾರಾಷ್ಟ್ರದ ಕಾರ್ಖಾನೆಯೊಂದರಲ್ಲಿ ಮಹಿಳೆಯರ ಮೇಲೆ ದೌರ್ಜನ್ಯ ಹಾಗೂ ಮತಾಂತರ ಮಾಡುವ ವ್ಯವಸ್ಥಿತ ಜಾಲ ಪತ್ತೆಯಾದ ಬೆನ್ನಲ್ಲೇ ವಿಜಯಪುರ ಜಿಲ್ಲೆಯಲ್ಲೂ ಆತಂಕ ಶುರುವಾಗಿದೆ. ಜಿಲ್ಲೆಯ ವಿವಿಧ ಕಾರ್ಖಾನೆಗಳಲ್ಲಿ ಇಂತಹ ಕಾನೂನುಬಾಹಿರ ಚಟುವಟಿಕೆಗಳು ನಡೆಯುತ್ತಿರುವ ಸಂಶಯ ವ್ಯಕ್ತಪಡಿಸಿರುವ ಹಿಂದೂಪರ ಸಂಘಟನೆಗಳು, ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹಿಸಿ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿವೆ.

ಮಹಾರಾಷ್ಟ್ರದ ಕಾರ್ಖಾನೆಯೊಂದರಲ್ಲಿ ಮಹಿಳೆಯರ ಮೇಲೆ ದೌರ್ಜನ್ಯ ಮತ್ತು ಮತಾಂತರ ಮಾಡುವ ಜಾಲ ಪತ್ತೆಯಾದ ಹಿನ್ನೆಲೆಯಲ್ಲಿ, ವಿಜಯಪುರ ಜಿಲ್ಲೆಯಲ್ಲೂ ಇಂತಹ ಜಾಲಗಳ ಅಸ್ತಿತ್ವದ ಬಗ್ಗೆ ಆತಂಕ ವ್ಯಕ್ತವಾಗಿದೆ. ಈ ಹಿನ್ನೆಲೆಯಲ್ಲಿ, ಶ ವಿಜಯಪುರದಲ್ಲಿ ಹಿಂದೂಪರ ಸಂಘಟನೆಗಳು ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿ, ಅಂತಹ ಕಾರ್ಖಾನೆಗಳನ್ನು ತಪಾಸಣೆಗೊಳಪಡಿಸಿ, ಮತಾಂತರ ಮಾಡುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದರು. ಈ ಸಂದರ್ಭದಲ್ಲಿ ಬಿಜೆಪಿ ಮುಖಂಡ ದಯಾಸಾಗರ ಪಾಟೀಲ, ಕೃಷ್ಣಾ ಗುನ್ಹಾಳಕರ ಸೇರಿದಂತೆ ಹಲವರು ಉಪಸ್ಥಿತರಿದ್ದರು.

 

Tags:

error: Content is protected !!