ವಿಜಯಪುರ ನಗರದ ಸರಾಫ್ ಬಜಾರ್ ಬಡಾವಣೆಯಲ್ಲಿ ನಡೆಯುತ್ತಿರುವ ರಸ್ತೆ ಕಾಮಗಾರಿಯಿಂದ ಸಾರ್ವಜನಿಕರು ಮತ್ತು ವಾಹನ ಸವಾರರು ನಿತ್ಯ ತೊಂದರೆ ಅನುಭವಿಸುತ್ತಿದ್ದಾರೆ. ಗುತ್ತಿಗೆದಾರರು ಮತ್ತು ಅಧಿಕಾರಿಗಳು ಪರ್ಯಾಯ ರಸ್ತೆ ವ್ಯವಸ್ಥೆ ಮಾಡದೆ ಕಾಮಗಾರಿ ಆರಂಭಿಸಿದ್ದರಿಂದ ವಾಹನ ದಟ್ಟಣೆ ಹೆಚ್ಚಾಗಿ ಸಂಚಾರಕ್ಕೆ ಕಿರಿಕಿರಿ ಉಂಟಾಗಿದೆ. ಈ ಬಗ್ಗೆ ಸೂಕ್ತ ಪರಿಹಾರ ಕಲ್ಪಿಸುವಂತೆ ಸರಫ್ ಬಜಾರ್ ಬಡಾವಣೆಯ ಗ್ರಾಹಕರು ಹಾಗೂ ಬಿಜೆಪಿ ಮಹಾನಗರ ಘಟಕದಿಂದ ವಿಜಯಪುರ ಜಿಲ್ಲಾಧಿಕಾರಿಗಳ ಕಚೇರಿ ಮುಂದೆ ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿ ಗಳಿಗೆ ಮನವಿ ಸಲ್ಲಿಸಿದರು. ಈ ವೇಳೆ ಬಿಡಿಎ ಮಾಜಿ ಅಧ್ಯಕ್ಷ ಭೀಮಾಶಂಕರ ಹದನೂರ, ಬಿಜೆಪಿ ಸಂದೀಪ ಪಾಟೀಲ (ಝಳಕಿ) ಭರತ ಕೋಳಿ, ವಿಜು ಜೋಶಿ ಸೇರಿದಂತೆ ಹಲವರು ಉಪಸ್ಥಿತರಿದ್ದರು.

