hubbali

ಉಪ‌ಚುನಾವಣೆಯಲ್ಲಿ ಎರಡು ಕ್ಷೇತ್ರದಲ್ಲಿ ನಾವೇ ಗೆಲ್ಲುತ್ತೇವೆ : ಡಿಕೆ ಶಿವಕುಮಾರ

Share

ರಾಜ್ಯದ ಎರಡೂ ಕ್ಷೇತ್ರಗಳಲ್ಲಿ ನಡೆಯುತ್ತಿರುವ ಉಪ‌ಚುನಾವಣೆಯಲ್ಲಿ ನಾವೇ ಗೆಲ್ಲುತ್ತೇವೆ‌ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ವಿಶ್ವಾಸ ವ್ಯಕ್ತಪಡಿಸಿದರು.

ಅವರು ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿ, ಕೇಂದ್ರ ಸರ್ಕಾರ ಪೆಟ್ರೋಲ್ ಸೇರಿದಂತೆ ಎಲ್.ಪಿ.ಜಿ ದರ ಹೆಚ್ಚಳ ಮಾಡಿದ್ದು ಇದರಿಂದಾಗಿ ಜನತೆ ಭ್ರಮನಿರಸನಗೊಂಡಿದ್ದಾರೆ. ಹೀಗಾಗಿ‌ ಜನ ನಮ್ಮ ಗ್ಯಾರಂಟಿಗಳ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದಾರೆ. ಈ ಉಪ ಚುನಾವಣೆಯಲ್ಲಿ ನಮ್ಮ ಪಕ್ಷದ ಅಭ್ಯರ್ಥಿಗಳು ಗೆಲ್ಲುವುದು ಖಚಿತ ಎಂದರು.
ಆಟೋ ಚಾಲಕರು ಗ್ಯಾಸ್ ಬಿಟ್ಟು ಪೆಟ್ರೋಲ್ ಬಳಸಿ ಎಂಬ ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಅವರ ಹೇಳಿಕೆ ಕುರಿತು ಪ್ರತಿಕ್ರಿಯಿಸಿದ ಅವರು, ಇರಾನಿನಿಂದ ಎರಡು ಎಲ್.ಪಿ.ಜಿ ಹಡಗುಗಳು ಭಾರತಕ್ಕೆ ಬಂದಿರುವುದನ್ನು ಗುಜರಾತಿಗೆ ಏಕೆ ಕಳಸಿದರು. ರಾಜ್ಯದ ಮಂಗಳೂರು, ಕೇರಳಕ್ಕೆ ಕಳಿಸುವ ಮೂಲಕ ರಾಜ್ಯದ ಹಿತಕ್ಕೆ ಸಹಾಯ‌ ಮಾಡಬಹುದಿತ್ತಲ್ಲ. ಕೇಂದ್ರವು ಉತ್ತರ ಭಾರತ ಮಾತ್ರ ನೋಡುತ್ತದ್ದಾರೆ. ಅವರಿಗೆ ದಕ್ಷಿಣ ಭಾರತ ನೋಡುತ್ತಿಲ್ಲ ಎಂದು ಹರಿಹಾಯ್ದರು.

ಗ್ಯಾಸ್ ಅಭಾವ ವಿಚಾರ; ಜೋಶಿ ಅವರು ಉತ್ತರ ಭಾರತದ ಕಡೆ ನೋಡ್ತಾರೆ ಕರ್ನಾಟಕ ಕಡೆ ನೋಡಬೇಕು

ಆಟೋ ಚಾಲಕರು ಗ್ಯಾಸ್ ಬಿಟ್ಟು ಪೆಟ್ರೋಲ್ ಬಳಸಬೇಕು ಅನ್ನೋ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿಯವರ ಹೇಳಿಕೆ ವಿಚಾರ, ಪ್ರಲ್ಹಾದ್ ಜೋಶಿ ಅವರು ರಾಜ್ಯದ ಹಿತಕ್ಕೆ ಸಹಾಯ ಮಾಡಬೇಕು. ಎರಡು ಶಿಪ್ ಗಳು ಬಂದವು, ಯಾಕೆ ಗುಜರಾತ್ ಗೆ ಇಳಿಸಿದ್ರು..? ಅವರು ಉತ್ತರ ಭಾರತ ಮಾತ್ರ ನೋಡ್ತಾರೆ, ದಕ್ಷಿಣ ಭಾರತ ನೋಡಲ್ಲ ಎಂದು ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಹೇಳಿದರು.

Tags:

error: Content is protected !!