ಭಾರತೀಯ ಸಂಸ್ಕೃತಿ ಮತ್ತು ಆಧ್ಯಾತ್ಮಿಕತೆಯನ್ನು ಮುಂದಿನ ಪೀಳಿಗೆಗೆ ದಾಟಿಸುವ ಜವಾಬ್ದಾರಿ ಹೆಣ್ಣು ಮಕ್ಕಳ ಮೇಲಿದೆ ಎಂದು ರಾಷ್ಟ್ರೀಯ ಹೆದ್ದಾರಿಯ ವಿಶೇಷ ಭೂಸ್ವಾಧೀನ ಅಧಿಕಾರಿ ರಾಜಶ್ರೀ ಜೈನಾಪೂರೆ ತಿಳಿಸಿದ್ದಾರೆ.


ಬೆಳಗಾವಿಯ ಮಿನಿ ಮಿಲೇನಿಯಮ್ ಗಾರ್ಡನ್ನಲ್ಲಿ ಶ್ರೀ ಭುವನೇಶ್ವರಿ ಉತ್ಸವ ಸಮಿತಿ ಹಾಗೂ ಕನ್ನಡ ಮಹಿಳಾ ಸಂಘದ ಸಂಯುಕ್ತ ಆಶ್ರಯದಲ್ಲಿ ಆಯೋಜಿಸಲಾಗಿದ್ದ ‘ಚೈತ್ರೋತ್ಸವ-2026’ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಪಾಲ್ಗೊಂಡು ಮಾತನಾಡಿದ ರಾಷ್ಟ್ರೀಯ ಹೆದ್ದಾರಿಯ ವಿಶೇಷ ಭೂಸ್ವಾಧೀನ ಅಧಿಕಾರಿ ರಾಜಶ್ರೀ ಜೈನಾಪೂರೆ ಅವರು, ಯುವಪೀಳಿಗೆ ಶ್ಲೋಕ, ವಚನ ಹಾಗೂ ಆಧ್ಯಾತ್ಮಿಕತೆಯನ್ನು ಮರೆಯುತ್ತಿರುವುದು ವಿಷಾದನೀಯ ಎಂದರು. ತಾಯಂದಿರು ಮೊಬೈಲ್ ಗೀಳಿನಿಂದ ಹೊರಬಂದು ಮಕ್ಕಳಿಗೆ ಉನ್ನತ ಶಿಕ್ಷಣ ನೀಡಲು ಶ್ರಮಿಸಬೇಕು. ಗೋವುಗಳ ಸಾಕಣೆ ಮತ್ತು ನಮ್ಮ ಮೂಲ ಸಂಸ್ಕೃತಿಯನ್ನು ಉಳಿಸಿಕೊಳ್ಳುವ ಉಪಕ್ರಮಗಳು ನಿರಂತರವಾಗಿರಬೇಕು ಎಂದು ಅವರು ಕಿವಿಮಾತು ಹೇಳಿದರು. ಭಾವಿ ಪೀಳಿಗೆಗೆ ನಮ್ಮ ಸಂಸ್ಕೃತಿಯನ್ನು ಪರಿಚಯಿಸಿದಾಗಲೇ, ಅದನ್ನು ಉಳಿಸುವ ಕೆಲಸ ಹೆಣ್ಣು ಮಕ್ಕಳಿಂದಲೇ ಮಾತ್ರ ಸಾಧ್ಯ. ಹೆಣ್ಣು ಮಕ್ಕಳು ಎಂದು ಭೇಧಭಾವ ಮಾಡದೇ. ಮೊಬೈಲ್ ಗೀಳಿಂದ ತಾಯಂದಿರು ಹೊರ ಬಂದು ತಮ್ಮ ಹೆಣ್ಣು ಮಕ್ಕಳಿಗೂ ಉನ್ನತ ಶಿಕ್ಷಣವನ್ನು ನೀಡಲೂ ಸಹಾಯ ಮಾಡಬೇಕೆಂದು ಕರೆ ನೀಡಿದರು.

ಕಾರ್ಯಕ್ರಮದಲ್ಲಿ ಗೌರವಾನ್ವಿತ ಅತಿಥಿಗಳಾಗಿ ಭಾಗವಹಿಸಿದ್ದ ಮನೋವೈದ್ಯಶಾಸ್ತ್ರದ ಕನ್ಸಲ್ಟೆಂಟ್ ಡಾ. ಸರಸ್ವತಿ ತೆನಗಿ ಅವರು ಮಹಿಳೆಯರ ಮಾನಸಿಕ ಸ್ಥಿತಿಗತಿ ಹಾಗೂ ಸಾಮಾಜಿಕ ಸವಾಲುಗಳ ಕುರಿತು ಮಾಹಿತಿ ಹಂಚಿಕೊಂಡರು. ಶ್ರೀ ಭುವನೇಶ್ವರಿ ಉತ್ಸವ ಸಮಿತಿಯ ಅಧ್ಯಕ್ಷರಾದ ರಂಜನಾ ನಾಯಕ್ ಹಾಗೂ ಕನ್ನಡ ಮಹಿಳಾ ಸಂಘದ ಅಧ್ಯಕ್ಷರಾದ ಮಹೇಶ್ವರಿ ಗಾಳಿ ಅವರು ಕಾರ್ಯಕ್ರಮದ ನೇತೃತ್ವ ವಹಿಸಿ, ಸಂಘಟನೆಯ ಮೂಲಕ ಸಾಂಸ್ಕೃತಿಕ ಚಟುವಟಿಕೆಗಳನ್ನು ಉತ್ತೇಜಿಸುವ ಬಗ್ಗೆ ಮಾತನಾಡಿದರು.
ಕಾರ್ಯಕ್ರಮದಲ್ಲಿ ಭಾರತಿ ವಡವಿ ಸೇರಿದಂತೆ ಪಾಲ್ಗೊಂಡಿದ್ದ ಗಣ್ಯರು ಮಹಿಳಾ ಸಂಘಟನೆಗಳ ಕಾರ್ಯವೈಖರಿಯನ್ನು ಶ್ಲಾಘಿಸಿದರು.
