State

ಯೋಗೇಶ್ ಗೌಡ ಕೊಲೆ ಪ್ರಕರಣ: ಏಪ್ರಿಲ್ 15ಕ್ಕೆ ಅಂತಿಮ ತೀರ್ಪು ಮುಂದೂಡಿಕೆ; ಕುತೂಹಲ ಮೂಡಿಸಿದ ಕೋರ್ಟ್ ಆದೇಶ!

Share

ರಾಜ್ಯ ರಾಜಕಾರಣದಲ್ಲಿ ತೀವ್ರ ಸಂಚಲನ ಮೂಡಿಸಿದ್ದ ಧಾರವಾಡ ಜಿಲ್ಲಾ ಪಂಚಾಯತ್ ಸದಸ್ಯ ಯೋಗೇಶ್ ಗೌಡ ಕೊಲೆ ಪ್ರಕರಣದ ತೀರ್ಪು ಮತ್ತೆ ಮುಂದೂಡಲ್ಪಟ್ಟಿದೆ. ಇಂದು ಆದೇಶ ಪ್ರಕಟಿಸಬೇಕಿದ್ದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಅಂತಿಮ ತೀರ್ಪನ್ನು ಏಪ್ರಿಲ್ 15ಕ್ಕೆ ಕಾಯ್ದಿರಿಸಿದೆ.

ಬಹುನಿರೀಕ್ಷಿತ ಯೋಗೇಶ್ ಗೌಡ ಹತ್ಯೆ ಪ್ರಕರಣದ ವಿಚಾರಣೆ ನಡೆಸುತ್ತಿರುವ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಇಂದು ಮಹತ್ವದ ತೀರ್ಪು ನೀಡಬೇಕಿತ್ತು. ಈ ಹಿನ್ನೆಲೆಯಲ್ಲಿ ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ಸೇರಿದಂತೆ ಒಟ್ಟು 21 ಆರೋಪಿಗಳು ಕೋರ್ಟ್ ಕಲಾಪಕ್ಕೆ ಹಾಜರಾಗಿದ್ದರು. ನ್ಯಾಯಾಲಯಕ್ಕೆ ತೆರಳುವ ಮುನ್ನ ಮಾಧ್ಯಮಗಳೊಂದಿಗೆ ಮಾತನಾಡಿದ್ದ ಶಾಸಕ ವಿನಯ್ ಕುಲಕರ್ಣಿ, ಸತ್ಯಕ್ಕೆ ಜಯ ಸಿಗಲಿದೆ, ನ್ಯಾಯಾಲಯದ ಮೇಲೆ ನಮಗೆ ಸಂಪೂರ್ಣ ಭರವಸೆ ಇದೆ”ಎಂದು ವಿಶ್ವಾಸ ವ್ಯಕ್ತಪಡಿಸಿದ್ದರು. ಆದರೆ, ನ್ಯಾಯಾಧೀಶರು ತೀರ್ಪನ್ನು ಏಪ್ರಿಲ್ 15ಕ್ಕೆ ಮುಂದೂಡಿದ್ದು, ಇಡೀ ರಾಜ್ಯದ ಗಮನ ಈಗ ಆ ದಿನದತ್ತ ನೆಟ್ಟಿದೆ.

Tags:

error: Content is protected !!