ಖಾನಾಪೂರ ತಹಶೀಲ್ದಾರ್ ಕಾರ್ಯಾಲಯದಲ್ಲಿ ಸುಮಾರು 38 ವರ್ಷಗಳ ಕಾಲ ಅತ್ಯಂತ ಪ್ರಾಮಾಣಿಕವಾಗಿ ಸೇವೆ ಸಲ್ಲಿಸಿದ ಹಿರಿಯ ಗ್ರಾಮ ಸಹಾಯಕ ವೀರಭದ್ರ ಚಿನ್ನಪ್ಪ ಜವಳಿ ಅವರು ವಯೋಮಿತಿ ನಿವೃತ್ತಿ ಹೊಂದಿದ್ದಾರೆ. ಈ ಹಿನ್ನೆಲೆಯಲ್ಲಿ ಕಂದಾಯ ಇಲಾಖೆಯ ಅಧಿಕಾರಿಗಳು ಹಾಗೂ ಸಿಬ್ಬಂದಿ ವರ್ಗದವರು ಜವಳಿ ದಂಪತಿಯನ್ನು ಆತ್ಮೀಯವಾಗಿ ಸತ್ಕರಿಸಿ, ಗೌರವಪೂರ್ವಕವಾಗಿ ಬೀಳ್ಕೊಟ್ಟರು.

ಖಾನಾಪೂರ ತಹಶೀಲ್ದಾರ್ ಕಾರ್ಯಾಲಯದಲ್ಲಿ ಸತತ ಮೂರೂವರೆ ದಶಕಗಳಿಗೂ ಹೆಚ್ಚು ಕಾಲ ಸರ್ಕಾರದ ಕೊಂಡಿಯಾಗಿ ಸೇವೆ ಸಲ್ಲಿಸಿ ನಿವೃತ್ತಿ ಹೊಂದಿದ ಗ್ರಾಮ ಸಹಾಯಕ ವೀರಭದ್ರ ಚಿನ್ನಪ್ಪ ಜವಳಿ ಅವರಿಗೆ ಕಚೇರಿಯ ವತಿಯಿಂದ ಹಮ್ಮಿಕೊಂಡಿದ್ದ ಸಮಾರಂಭದಲ್ಲಿ ಸನ್ಮಾನಿಸಿ ಗೌರವಿಸಲಾಯಿತು. ನಿವೃತ್ತಿ ಹೊಂದಿದ ವೀರಭದ್ರ ಜವಳಿ ಅವರ ಕರ್ತವ್ಯ ನಿಷ್ಠೆಯನ್ನು ಸ್ಮರಿಸಿದ ಅಧಿಕಾರಿಗಳು, ಅವರ ಮುಂದಿನ ನಿವೃತ್ತ ಜೀವನವು ಸುಖ, ಶಾಂತಿ ಮತ್ತು ಸಮೃದ್ಧಿಯಿಂದ ಕೂಡಿರಲಿ ಎಂದು ಹಾರೈಸಿದರು. ಈ ಸಂದರ್ಭದಲ್ಲಿ ಗ್ರೇಡ್-2 ತಹಶೀಲ್ದಾರ್ ಎಸ್.ಕೆ. ತಂಗೊಳ್ಳಿ, ಶಿರಸ್ತೆದಾರರಾದ ಕಟ್ಟಿಮನಿ, ಮ್ಯಾಗೇರಿ ಸೇರಿದಂತೆ ತಹಶೀಲ್ದಾರ್ ಕಚೇರಿಯ ಕಂದಾಯ ಇಲಾಖೆಯ ಅಧಿಕಾರಿಗಳು, ಪ್ರಮುಖ ಸಿಬ್ಬಂದಿಗಳು ಹಾಗೂ ಗಣ್ಯರು ಉಪಸ್ಥಿತರಿದ್ದು ಹಿರಿಯ ಜೀವಕ್ಕೆ ಶುಭ ಹಾರೈಸಿದರು.

