BELAGAVI

ಶಾಂತಿಯುತ ಬಕ್ರೀದ್ ಆಚರಣೆಗೆ ಸಕಲ ಸಿದ್ಧತೆ: ಬೆಳಗಾವಿಯಲ್ಲಿ ಪೊಲೀಸರಿಂದ ಖಡಕ್ ಬಂದೋಬಸ್ತ್, ಪಥಸಂಚಲನ!

Share

ದ್ ಹಬ್ಬವನ್ನು ಆಚರಿಸಲಾಗುತ್ತಿದ್ದು, ಕುಂದಾನಗರಿ ಬೆಳಗಾವಿಯಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಪೊಲೀಸ್ ಇಲಾಖೆ ಹದ್ದಿನ ಕಣ್ಣಿಟ್ಟಿದೆ. ನಗರದಾದ್ಯಂತ ಶಾಂತಿ ಮತ್ತು ಸುವ್ಯವಸ್ಥೆ ಕಾಪಾಡಲು ಪೊಲೀಸ್ ಪಡೆ ಸಂಪೂರ್ಣ ಸಜ್ಜಾಗಿದ್ದು, ಸಾರ್ವಜನಿಕರು ಸೌಹಾರ್ದತೆಯಿಂದ ಹಬ್ಬ ಆಚರಿಸುವಂತೆ ಕರೆ ನೀಡಲಾಗಿದೆ.


ಬಕ್ರೀದ್ ಹಬ್ಬದ ಹಿನ್ನೆಲೆಯಲ್ಲಿ ಬೆಳಗಾವಿ ಮಹಾನಗರದಲ್ಲಿ ಕಮಿಷನರೇಟ್ ವತಿಯಿಂದ ಬಿಗಿ ಪೊಲೀಸ್ ಬಂದೋಬಸ್ತ್ ನಿಯೋಜಿಸಲಾಗಿದೆ. ಮುಂಜಾಗ್ರತಾ ಕ್ರಮವಾಗಿ ನಗರದ ಜಿಲ್ಲಾಧಿಕಾರಿಗಳ ಕಾರ್ಯಾಲಯದಿಂದ ಪಥಸಂಚಲನವು ಚವ್ಹಾಟ್ ಗಲ್ಲಿ, ದರ್ಬಾರ್ ಗಲ್ಲಿ, ಖಡೇಬಝಾರ್, ಟೆಂಗಿನಕೇರಾ ಗಲ್ಲಿ, ಬೇಂಢಿ ಬಝಾರ್ ಗಲ್ಲಿ ಕಾರ್ನರ್, ಸಶಸ್ತ್ರ ಪೊಲೀಸ್ ಪಡೆಗಳಿಂದ ಪಥಸಂಚಲನ ನಡೆಸುವ ಮೂಲಕ ಸಾರ್ವಜನಿಕರಲ್ಲಿ ಧೈರ್ಯ ತುಂಬಲಾಯಿತು.

ಪಥಸಂಚಲನವು ಫೋರ್ಟ್ ರಸ್ತೆಗೆ ತಲುಪಿ ಕೊನೆಗೊಂಡಿತು. ಹಬ್ಬದ ನೆಪದಲ್ಲಿ ಕಾನೂನು ಕೈಗೆತ್ತಿಕೊಳ್ಳುವ ಕಿಡಿಗೇಡಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ಎಚ್ಚರಿಕೆಯನ್ನು ನೀಡಿದ್ದಾರೆ. ಅತ್ಯಂತ ಶಾಂತಿಯುತ ಹಾಗೂ ಸೌಹಾರ್ದಯುತವಾಗಿ ಬಕ್ರೀದ್ ಆಚರಿಸಬೇಕೆಂದು ಮನವಿ ಮಾಡಲಾಗಿದೆ.

Tags:

error: Content is protected !!