ತೆಲಂಗಾಣದ ನಿಜಾಮಾಬಾದ್ನಲ್ಲಿ ನಡೆದ ಭಾರತೀಯ ಜನತಾ ಪಾರ್ಟಿಯ ರಾಜ್ಯಮಟ್ಟದ ತರಬೇತಿ ಶಿಬಿರದ ಸಮಾರೋಪ ಸಮಾರಂಭದಲ್ಲಿ ಬೆಳಗಾವಿ ದಕ್ಷಿಣ ಕ್ಷೇತ್ರದ ಶಾಸಕ ಅಭಯ್ ಪಾಟೀಲ್ ಭಾಗವಹಿಸಿದ್ದಾರೆ. ಪಕ್ಷವನ್ನು ಬೂತ್ ಮಟ್ಟದಿಂದ ಬಲಪಡಿಸುವ ಕುರಿತು ಹಾಗೂ ಕಾಂಗ್ರೆಸ್ ಸರ್ಕಾರದ ವಿಫಲತೆಗಳ ವಿರುದ್ಧ ಹೋರಾಡುವ ಬಗ್ಗೆ ತೆಲಂಗಾಣ ಬಿಜೆಪಿ ನಾಯಕರಿಗೆ ಅವರು ಮಹತ್ವದ ದಿಕ್ಸೂಚಿ ನೀಡಿದ್ದಾರೆ.


ತೆಲಂಗಾಣ ರಾಜ್ಯದ ನಿಜಾಮಾಬಾದ್ನಲ್ಲಿ ಆಯೋಜಿಸಲಾಗಿದ್ದ ಭಾರತೀಯ ಜನತಾ ಪಾರ್ಟಿಯ ರಾಜ್ಯಮಟ್ಟದ ತರಬೇತಿ ಶಿಬಿರದ ಸಮಾರೋಪ ಸಮಾರಂಭದಲ್ಲಿ ಬೆಳಗಾವಿ ದಕ್ಷಿಣ ಕ್ಷೇತ್ರದ ಜನಪ್ರಿಯ ಶಾಸಕ ಅಭಯ್ ಪಾಟೀಲ್ ಅವರು ಪ್ರಮುಖ ಅತಿಥಿಯಾಗಿ ಪಾಲ್ಗೊಂಡಿದ್ದರು.


ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡಿದ ಶಾಸಕರು, ಪಕ್ಷವನ್ನು ತಳಮಟ್ಟದಿಂದ ಅಂದರೆ ಬೂತ್ ಮಟ್ಟದಿಂದ ಇನ್ನಷ್ಟು ಬಲಪಡಿಸುವ ಮತ್ತು ಸಂಘಟನಾತ್ಮಕವಾಗಿ ಮುನ್ನಡೆಸುವ ಹಲವು ಪ್ರಮುಖ ವಿಚಾರಗಳ ಕುರಿತು ಪದಾಧಿಕಾರಿಗಳಿಗೆ ಮಾರ್ಗದರ್ಶನ ನೀಡಿದರು. ಇದೇ ವೇಳೆ ತೆಲಂಗಾಣದ ಕಾಂಗ್ರೆಸ್ ಸರ್ಕಾರದ ಆಡಳಿತಾತ್ಮಕ ವಿಫಲತೆಗಳು ಮತ್ತು ಜನವಿರೋಧಿ ನೀತಿಗಳ ಬಗ್ಗೆ ಸಾರ್ವಜನಿಕರಲ್ಲಿ ವ್ಯಾಪಕ ಜಾಗೃತಿ ಮೂಡಿಸುವಂತೆ ಕರೆ ನೀಡಿದರು.
ಈ ಉನ್ನತ ಮಟ್ಟದ ಕಾರ್ಯಕ್ರಮದಲ್ಲಿ ತೆಲಂಗಾಣ ರಾಜ್ಯದ ಬಿಜೆಪಿ ಪಕ್ಷದ ಹಿರಿಯ ಪದಾಧಿಕಾರಿಗಳು, ಪ್ರಮುಖ ಮುಖಂಡರು ಹಾಗೂ ನೂರಾರು ಸಂಖ್ಯೆಯ ಸಕ್ರಿಯ ಕಾರ್ಯಕರ್ತರು ಉಪಸ್ಥಿತರಿದ್ದರು.

