Belagavi

ಪಂಚರಾಜ್ಯ ಚುನಾವಣೆಯಲ್ಲಿ ಬಿಜೆಪಿಗೆ ದಿಗ್ವಿಜಯ: ಬೆಳಗಾವಿಯಲ್ಲಿ ಪಟಾಕಿ ಸಿಡಿಸಿ, ಬೃಹತ್ ಬೈಕ್ ರ್ಯಾಲಿ ನಡೆಸಿ ಬಿಜೆಪಿ ಕಾರ್ಯಕರ್ತರ ಸಂಭ್ರಮಾಚರಣೆ

Share

• ಬೆಳಗಾವಿಯಲ್ಲಿ ಬಿಜೆಪಿ ಕಾರ್ಯಕರ್ತರ ವಿಜಯೋತ್ಸವ.
• ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಐತಿಹಾಸಿಕ ಗೆಲುವು.
• ಕುಂದಾನಗಡಿಯಲ್ಲಿ ಕಮಲ ಕಾರ್ಯಕರ್ತರ ಬೈಕ್ ರ್ಯಾಲಿ.
• ಮೋದಿ-ಅಮಿತ್ ಶಾ ನೇತೃತ್ವಕ್ಕೆ ಸಿಕ್ಕ ಜಯ.

ಪಂಚರಾಜ್ಯ ಚುನಾವಣೆಗಳಲ್ಲಿ ಬಿಜೆಪಿ ಸಾಧಿಸಿದ ದಿಗ್ವಿಜಯಕ್ಕೆ ಬೆಳಗಾವಿ ಬಿಜೆಪಿಯ ವತಿಯಿಂದ ಸಂಭ್ರಮದ ವಿಜಯೋತ್ಸವವನ್ನು ಆಚರಿಸಲಾಯಿತು.

ಪಂಚರಾಜ್ಯ ಚುನಾವಣೆಯಲ್ಲಿ ಬಿಜೆಪಿ ದಿಗ್ವಿಜಯ ಸಾಧಿಸಿದ ಹಿನ್ನೆಲೆ ಬೆಳಗಾವಿ ಬಿಜೆಪಿಯ ವತಿಯಿಂದ ವಿಜಯೋತ್ಸವವನ್ನು ಆಚರಿಸಲಾಯಿತು. ಬಿಜೆಪಿ ಕಾರ್ಯಾಲಯದ ಎದುರು ಪಟಾಕಿ ಸಿಡಿಸಿ ಸಂಭ್ರಮಾಚರಣೆ ಮಾಡಿದ ಕಾರ್ಯಕರ್ತರು ನಗರದಲ್ಲಿ ಬೃಹತ್ ಬೈಕ್ ರ್ಯಾಲಿ ನಡೆಸಿದರು.

ರಾಜ್ಯ ಬಿಜೆಪಿ ಉಪಾಧ್ಯಕ್ಷ ಮತ್ತು ಮಾಜಿ ಶಾಸಕ ಅನೀಲ್ ಬೆಣಕೆ ಅವರು ಪಂಚರಾಜ್ಯ ಚುನಾವಣೆಯಲ್ಲಿ ಬಿಜೆಪಿಯೂ ಪಶ್ಚಿಮ ಬಂಗಾಳದಲ್ಲಿ ಐತಿಹಾಸಿಕ ಗೆಲುವು ಸಾಧಿಸಿದೆ. ಬಿಜೆಪಿಗೆ ಜನಾದೇಶ ನೀಡಿರುವ ಎಲ್ಲರಿಗೂ ಧನ್ಯವಾದಗಳನ್ನು ತಿಳಿಸಿದರು.

ಬಿಜೆಪಿ ನಗರಾಧ್ಯಕ್ಷೆ ಗೀತಾ ಸುತಾರ್ ಅವರು ಪಶ್ಚಿಮ ಬಂಗಾಳದ ಐತಿಹಾಸಿಕ ವಿಜಯಕ್ಕೆ ಸಂತಸ ವ್ಯಕ್ತಪಡಿಸಿದರು. ಪಂಚರಾಜ್ಯ ಚುನಾವಣೆಯಲ್ಲಿ ಮಾಜಿ ಪಿಎಂ ಅಟಲ್ ಬಿಹಾರಿ ವಾಜಪೇಯಿ ಅವರು ಕಂಡ ಕನಸು ನನಸಾಗುತ್ತಿದೆ ಎಂದರು.

ಪಶ್ಚಿಮ ಬಂಗಾಳ, ಅಸ್ಸಾಂ ಮತ್ತು ಪಾಂಡಿಚೇರಿಯಲ್ಲಿ ಬಿಜೆಪಿ ಗೆಲುವನ್ನು ಸಾಧಿಸಿದ್ದು, ಸಂತಸ ತಂದಿದೆ. ಪಶ್ಚಿಮ ಬಂಗಾಳದಲ್ಲಿನ ಅತ್ಯಾಚಾರವನ್ನು ನಿಲ್ಲಿಸಲು ಪಿಎಂ ಮೋದಿ ಮತ್ತು ಅಮೀತ್ ಶಾಹ್ ನೇತೃತ್ವದಲ್ಲಿ ಬಿಜೆಪಿ ಚುಕ್ಕಾಣಿಯನ್ನು ಹಿಡಿದಿದೆ ಎಂದು ಬಿಜೆಪಿ ಮುಖಂಡ ಡಾ. ರವಿ ಪಾಟೀಲ್ ಹೇಳಿದರು.

ಮುರುಘೇಂದ್ರಗೌಡ ಪಾಟೀಲ್ ಅವರು ಪಂಚ ರಾಜ್ಯ ಚುನಾವಣೆಯಲ್ಲಿ ಅಸ್ಸಾಂ ಮತ್ತು ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಐತಿಹಾಸಿಕ ಗೆಲುವನ್ನು ಸಾಧಿಸಿದ್ದು, ಮಾಜಿ ಪಿಎಂ ಅಟಲ್ ಬಿಹಾರಿ ವಾಜಪೇಯಿ ಅವರು ನೀಡಿದ ಸಂದೇಶ ಸತ್ಯವಾಗುತ್ತಿದೆ ಎಂದರು.

ಈ ಸಂದರ್ಭದಲ್ಲಿ ಚುನಾಯಿತ ಜನಪ್ರತಿನಿಧಿಗಳು, ಪದಾಧಿಕಾರಿಗಳು ಮತ್ತು ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗಿಯಾಗಿದ್ಧರು.

Tags:

error: Content is protected !!