Belagavi

ರಾಜ್ಯದ ಎರಡು ಕ್ಷೇತ್ರಗಳಲ್ಲಿ ಕಾಂಗ್ರೆಸ್‌ಗೆ ಗೆಲುವು ನಿಶ್ಚಿತ; ಸಿಎಂ ಬದಲಾವಣೆ ನಮಗೆ ಗೊತ್ತಿಲ್ಲ ಎಂದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

Share

1. ಎರಡು ಕ್ಷೇತ್ರಗಳಲ್ಲಿ ಕಾಂಗ್ರೆಸ್ ಗೆಲುವು ಖಚಿತ
2. ಬೆಳಗಾವಿಯಲ್ಲಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿಶ್ವಾಸ
3. ಸಿಎಂ ಬದಲಾವಣೆ ಹೈಕಮಾಂಡ್ ಹಂತದ ವಿಚಾರ
4. ಪಶ್ಚಿಮ ಬಂಗಾಳ ಫಲಿತಾಂಶಕ್ಕೆ ಸಚಿವರ ಕುತೂಹಲ

ರಾಜ್ಯದ ಉಪಚುನಾವಣೆ ಹಾಗೂ ಸಿಎಂ ಬದಲಾವಣೆ ಕುರಿತಾದ ಚರ್ಚೆಗಳ ನಡುವೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರು ಇಂದು ಬೆಳಗಾವಿಯಲ್ಲಿ ಮಹತ್ವದ ಪ್ರತಿಕ್ರಿಯೆ ನೀಡಿದ್ದಾರೆ. ಕಾಂಗ್ರೆಸ್ ಪಕ್ಷದ ಗೆಲುವಿನ ಬಗ್ಗೆ ವಿಶ್ವಾಸ ವ್ಯಕ್ತಪಡಿಸಿದ ಅವರು, ರಾಜ್ಯ ರಾಜಕೀಯದ ಪ್ರಚಲಿತ ವಿದ್ಯಮಾನಗಳ ಬಗ್ಗೆ ತಮ್ಮ ನಿಲುವು ಸ್ಪಷ್ಟಪಡಿಸಿದ್ದಾರೆ

ಬೆಳಗಾವಿಯಲ್ಲಿಂದು ಮಾತನಾಡಿದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರು, ದಾವಣಗೆರೆಯಲ್ಲಿ ನಾವು ಕೆಲಸ ಮಾಡಿದ್ದೇವೆ. ಕರ್ನಾಟಕದ 2 ಕ್ಷೇತ್ರಗಳಲ್ಲಿ ಕಾಂಗ್ರೆಸ್ ಗೆಲುವು ಸಾಧಿಸಲಿದೆ. ತಮಿಳುನಾಡಿನಲ್ಲಿ ರಾಜಕೀಯ ಮತ್ತು ಚಿತ್ರರಂಗದ ಅನೋನ್ಯ ಸಂಬಂಧವಿದೆ. ಇನ್ನು ಅಂತಿಮ ಫಲಿತಾಂಶ ಬರಲಿದೆ ಕಾಯ್ದು ನೋಡೋಣ. ಪಶ್ಚಿಮ ಬಂಗಾಳದ ಚುನಾವಣೆಯನ್ನು ಕೂಡ ಕಾಯ್ದು ನೋಡೋಣ. ಅಲ್ಲಿ ಕೇಂದ್ರ ಸರ್ಕಾರ ಅಲ್ಲಿ ಹೊರಗಿನ ಅಧಿಕಾರಿಗಳನ್ನು ನೇಮಿಸಿದೆ ಎಂದರು.

ಇದೇ ವೇಳೆ ಸಿಎಂ ಬದಲಾವಣೆಗೆ ಸಂಬಂಧಿಸಿದಂತೆ ನಮಗೆ ಗೊತ್ತಿಲ್ಲ. ನಮಗೆ ನೀಡಿದ ಜವಾಬ್ದಾರಿಯನ್ನು ಮಾತ್ರ ನಾವು ನಿರ್ವಹಿಸುತ್ತಿದ್ದೇವೆ. ಎಲ್ಲವೂ ಹೈಕಮಾಂಡ್’ಗೆ ಬಿಟ್ಟ ವಿಚಾರ ಎಂದರು.

Tags:

error: Content is protected !!