• ಬೆಳಗಾವಿ ನಗರದಲ್ಲಿ ತಂಬಾಕು ಮುಕ್ತ ಕಾರ್ಯಾಚರಣೆ
• ಕೋಟ್ಪಾಿ (COTPA) ಕಾಯ್ದೆ ಅಡಿ ಖಡಕ್ ಕ್ರಮ
• ಸಾರ್ವಜನಿಕ ಸ್ಥಳದಲ್ಲಿ ಧೂಮಪಾನಿಗಳಿಗೆ ಬಿತ್ತು ದಂಡ
• ಶಾಲಾ-ಕಾಲೇಜು ವ್ಯಾಪ್ತಿಯಲ್ಲಿ ತಂಬಾಕು ಮಾರಾಟ ನಿಷೇಧ
ಬೆಳಗಾವಿಯ ಎಪಿಎಂಸಿ ಮಾರ್ಕೆಟ್ ವ್ಯಾಪ್ತಿಯಲ್ಲಿ ಜಿಲ್ಲಾ ತಂಬಾಕು ನಿಯಂತ್ರಣ ಕೋಶ ಹಾಗೂ ಪೊಲೀಸ್ ಇಲಾಖೆ ಜಂಟಿಯಾಗಿ ಮಿಂಚಿನ ದಾಳಿ ನಡೆಸಿದೆ. ಕೋಟ್ಪಾ -2003 ಕಾಯ್ದೆಯನ್ನು ಉಲ್ಲಂಘಿಸಿದ ಅಂಗಡಿ ಮಾಲೀಕರು ಹಾಗೂ ಸಾರ್ವಜನಿಕರಿಗೆ ಸ್ಥಳದಲ್ಲೇ ದಂಡ ವಿಧಿಸಿ ಅಧಿಕಾರಿಗಳು ಬಿಸಿ ಮುಟ್ಟಿಸಿದ್ದಾರೆ.
ದಿನಾಂಕ 07.05.2026 ರಂದು ಬೆಳಗಾವಿ ನಗರದ APMC ಮಾರ್ಕೆಟ್ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಜಿಲ್ಲಾ ಜಾರಿ ಅಧಿಕಾರಿಗಳ ಮಾರ್ಗದರ್ಶನದಲ್ಲಿ ವಿಶೇಷ ಕಾರ್ಯಾಚರಣೆ ಹಮ್ಮಿಕೊಳ್ಳಲಾಗಿತ್ತು. ಸಾರ್ವಜನಿಕ ಸ್ಥಳಗಳಲ್ಲಿ ಧೂಮಪಾನ ಮಾಡುವುದು, ನೇರ ಮತ್ತು ಪರೋಕ್ಷವಾಗಿ ತಂಬಾಕು ಜಾಹಿರಾತು ಪ್ರದರ್ಶಿಸುವುದು ಹಾಗೂ ಶೈಕ್ಷಣಿಕ ಸಂಸ್ಥೆಗಳ 100 ಮೀಟರ್ ಅಂತರದೊಳಗೆ ತಂಬಾಕು ಉತ್ಪನ್ನಗಳನ್ನು ಮಾರಾಟ ಮಾಡುತ್ತಿದ್ದವರ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಯಿತು. ಈ ದಾಳಿಯ ವೇಳೆ ಒಟ್ಟು 42 ಪ್ರಕರಣಗಳನ್ನು ದಾಖಲಿಸಿ ದಂಡ ವಿಧಿಸಲಾಯಿತು, ಜೊತೆಗೆ ಸಾರ್ವಜನಿಕರಿಗೆ ತಂಬಾಕು ಸೇವನೆಯಿಂದಾಗುವ ಮಾರಕ ದುಷ್ಪರಿಣಾಮಗಳ ಬಗ್ಗೆ ಅರಿವು ಮೂಡಿಸಲಾಯಿತು. ಈ ಮಹತ್ವದ ಕಾರ್ಯಾಚರಣೆಯಲ್ಲಿ ರಾಜ್ಯ ತಂಬಾಕು ನಿಯಂತ್ರಣ ಘಟಕದ ವಿಭಾಗೀಯ ಸಂಯೋಜಕ ಮಹಾಂತೇಶ ಉಳ್ಳಾಗಡ್ಡಿ, ಜಿಲ್ಲಾ ತಂಬಾಕು ನಿಯಂತ್ರಣ ಕೋಶದ ಸಮಾಜ ಸೇವಕಿ ಕುಮಾರಿ ಕವಿತಾ ರಾಜಣ್ಣವರ, ನಗರ ಪ್ರಾಥಮಿಕ ಕೇಂದ್ರ ಮುತ್ತಾನಟ್ಟಿ ಆರೋಗ್ಯ ನಿರೀಕ್ಷಣಾಧಿಕಾರಿಗಳಾದ ಶ್ರೀಯುತ ರಾಘವೇಂದ್ರ ಕಾಂಬಳೆ ಹಾಗೂ ಕಾಶಪ್ಪ ಪಾಮರ, ಮತ್ತು ಪೊಲೀಸ್ ಇಲಾಖೆಯ R. Y. ಬೋಸಲೆ ಉಪಸ್ಥಿತರಿದ್ದರು.

