Banglore

ಬೆಂಗಳೂರಿನಲ್ಲಿ ಬಿಜೆಪಿ ಹೈವೋಲ್ಟೇಜ್ ಕಾರ್ಯಕಾರಿಣಿ ಸಭೆ: ಮುಂಬರುವ ರಾಜಕೀಯ ಸವಾಲುಗಳ ಕುರಿತು ಸುದೀರ್ಘ ಚರ್ಚೆ

Share

ಬೆಂಗಳೂರಿನ ಮಲ್ಲೇಶ್ವರಂನಲ್ಲಿರುವ ಬಿಜೆಪಿ ರಾಜ್ಯ ಕಾರ್ಯಾಲಯ ‘ಜಗನ್ನಾಥ ಭವನ’ದಲ್ಲಿ ಇಂದು ಹಿರಿಯ ನಾಯಕರ ಉಪಸ್ಥಿತಿಯಲ್ಲಿ ಮಹತ್ವದ ಉನ್ನತ ಮಟ್ಟದ ಕಾರ್ಯಕಾರಿಣಿ ಸಭೆ ಜರುಗಿತು. ಪಕ್ಷದ ಸಂಘಟನೆಯನ್ನು ಮತ್ತಷ್ಟು ಬಲಪಡಿಸುವ ನಿಟ್ಟಿನಲ್ಲಿ ರಾಷ್ಟ್ರೀಯ ಮತ್ತು ರಾಜ್ಯ ನಾಯಕರು ಮುಂಬರುವ ಸವಾಲುಗಳ ಕುರಿತು ಸುದೀರ್ಘ ಚರ್ಚೆ ನಡೆಸಿದರು.

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಾದ ನಿತಿನ್ ನಬಿನ್ ಅವರ ಅಧ್ಯಕ್ಷತೆಯಲ್ಲಿ ಹಾಗೂ ರಾಜ್ಯ ಘಟಕದ ಅಧ್ಯಕ್ಷರಾದ ಬಿ.ವೈ. ವಿಜಯೇಂದ್ರ ಯಡಿಯೂರಪ್ಪ ಅವರ ನೇತೃತ್ವದಲ್ಲಿ ಜರುಗಿದ ಈ ಮಹತ್ವದ ಸಾಂಸ್ಥಿಕ ಸಭೆಯಲ್ಲಿ ಪಕ್ಷದ ಹಿರಿಯ ಧುರೀಣ ಹಾಗೂ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ರಾಷ್ಟ್ರೀಯ ಜಂಟಿ ಸಾಂಸ್ಥಿಕ ಪ್ರಧಾನ ಕಾರ್ಯದರ್ಶಿ ಶಿವಪ್ರಕಾಶ್, ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್. ಅಶೋಕ್, ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಚಲವಾದಿ ನಾರಾಯಣಸ್ವಾಮಿ ಉಪಸ್ಥಿತರಿದ್ದರು. ಇವರೊಂದಿಗೆ ವಿವಿಧ ಇಲಾಖೆಗಳ ಕೇಂದ್ರ ಸಚಿವರುಗಳಾದ ಪ್ರಲ್ಹಾದ್ ಜೋಶಿ, ಗಜೇಂದ್ರ ಸಿಂಗ್ ಶೇಖಾವತ್, ವಿ. ಸೋಮಣ್ಣ, ಕುಮಾರಿ ಶೋಭಾ ಕರಂದ್ಲಾಜೆ ಸೇರಿದಂತೆ ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ಕರ್ನಾಟಕ ಉಸ್ತುವಾರಿ ಡಾ. ರಾಧಾ ಮೋಹನ್ ದಾಸ್ ಅಗರವಾಲ್ ಮತ್ತು ರಾಜ್ಯ ಸಹ-ಉಸ್ತುವಾರಿ ಪಿ. ಸುಧಾಕರ್ ರೆಡ್ಡಿ ಪಾಲ್ಗೊಂಡಿದ್ದರು. ಅಲ್ಲದೆ, ಮಾಜಿ ಮುಖ್ಯಮಂತ್ರಿಗಳಾದ ಡಿ.ವಿ. ಸದಾನಂದ ಗೌಡ, ಜಗದೀಶ್ ಶೆಟ್ಟರ್, ಬಸವರಾಜ ಬೊಮ್ಮಾಯಿ, ರಾಜ್ಯ ಕೋರ್ ಕಮಿಟಿ ಸದಸ್ಯರು, ಸಂಸದರು, ಶಾಸಕರು, ವಿಧಾನ ಪರಿಷತ್ ಸದಸ್ಯರು, ರಾಜ್ಯ ಪದಾಧಿಕಾರಿಗಳು, ವಿವಿಧ ಮೋರ್ಚಾಗಳ ಅಧ್ಯಕ್ಷರು, ಪ್ರಧಾನ ಕಾರ್ಯದರ್ಶಿಗಳು, ವಿಭಾಗೀಯ ಪ್ರಭಾರಿಗಳು ಹಾಗೂ ಜಿಲ್ಲಾ ಅಧ್ಯಕ್ಷರು ಸಭೆಯಲ್ಲಿ ಭಾಗವಹಿಸಿ ಮುಂಬರುವ ರಾಜಕೀಯ ಕಾರ್ಯತಂತ್ರಗಳ ಕುರಿತು ಗಂಭೀರ ಸಮಾಲೋಚನೆ ನಡೆಸಿದರು.

Tags:

error: Content is protected !!