Uncategorized

ಹು-ಧಾ ಅವಳಿನಗರದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿರುವುದನ್ನು ಖಂಡಿಸಿ ಧಾರವಾಡದಲ್ಲಿ ಬಿಜೆಪಿ ಪ್ರತಿಭಟನೆ…. ಲವ್ ಜಿಹಾದ್, ಭೂ ಮಾಫಿಯಾ ಸೇರಿ ರೈತರ ಮೇಲ್ಲೆ ಹಲ್ಲೆ ಪ್ರಕರಣ ತಡೆಯುವಲ್ಲಿ ಕಮಿಷನರ್ ವಿಫಲ್ ಆರೋಪ.

Share

ಆಂಕರ: ಹುಬ್ಬಳ್ಳಿ ಧಾರವಾಡ ಅವಳಿನಗರದಲ್ಲಿನ ಭೂ ಮಾಫಿಯಾ ಚಟುವಟಿಕೆಗಳು, ರೈತರ ಮೇಲಿನ ಹಲ್ಲೆ ಪ್ರಕರಣಗಳು ಸೇರಿ ಲವ್ ಜಿಹಾದ್ ಪ್ರಕರಣಗಳನ್ನು ತಡೆಯುವಲ್ಲಿ ಪೊಲೀಸ ಕಮಿಷನರ್ ಸೇರಿ ರಾಜ್ಯ ಸರ್ಕಾರ ವಿಫಲವಾಗಿದೆ ಎಂದು ಆರೋಪಿಸಿ ಹಾಗೂ ಪೊಲೀಸ್ ಕಮಿಷನರ್ ಹಠಾವೋ ಎಂದು ಆಗ್ರಹಿಸಿ, ಧಾರವಾಡದಲ್ಲಿಂದ ಬಿಜೆಪಿ ನಾಯಕರು ಪ್ರತಿಭಟನೆ ನಡೆಸಿ ಸಿಎಂ ಸಿದ್ದರಾಮಯ್ಯ ಹಾಗೂ ಹುಬ್ಬಳ್ಳಿ ಧಾರವಾಡ ಪೊಲೀಸ ಕಮಿಷನರ್ ಭಾವಚಿತ್ರ ದಹಿಸಿ ಆಕ್ರೋಶ ವ್ಯಕ್ತಪಡಿಸಿದರು. ‌

ಹುಬ್ಬಳ್ಳಿ ಧಾರವಾಡ ಮಾಹಾನಗರ ಜಿಲ್ಲಾ ಬಿಜೆಪಿ ಘಟಕದ ನೇತೃತ್ವದಲ್ಲಿ ನಗರದ ಜಿಲ್ಲಾಧಿಕಾರಿ ಕಚೇರಿ ಮುಂಭಾಗದಲ್ಲಿ ಪ್ರತಿಭಟನೆ ನಡೆಸಿ ರಾಜ್ಯ ಸರ್ಕಾರ ಸೇರಿ ಅವಳಿ ನಗರ ಪೊಲೀಸ್ ಕಮಿಷನರ್ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ಹೊರಹಾಕಿದರು. ಜತೆಗೆ ಸಿಎಂ ಸಿದ್ದರಾಮಯ್ಯ ಸೇರಿ ಹುಬ್ಬಳ್ಳಿ ಧಾರವಾಡ ಪೊಲೀಸ್ ಕಮಿಷನರ್ ಎನ್ ಶಶಿಕುಮಾರವರು ಭಾವಚಿತ್ರ ದಹಿಸಿ ಅಸಮಧಾನ ವ್ಯಕ್ತಪಡಿಸಿದರು. ಇತ್ತೀಚೆಗೆ ಹಾಡು ಹಗಲೇ ಧಾರವಾಡ ತಡಸಿಕೊಪ್ಪ ಬಳಿ ಭೂ ಮಾಫಿಯಾಗಳಿಂದ ಫೈರಿಂಗ್ ನಡೆದಿರುವುದು ಅವಳಿನಗರ ಕಾನೂನು ಸುವ್ಯವಸ್ಥೆಗೆ ಹಿಡಿದ ಕೈಗನ್ನಡಿಯಾಗಿದೆ‌. ಅಲ್ಲದೆ ಅವಳಿನಗರದಲ್ಲಿ ಹಣವಂತರು ಆಡಿದೇ ಆಟವಾಗಿದೆ, ಇದಕ್ಕೆ ಪೊಲೀಸ್ ಕಮಿಷನರ್ ಕುಮ್ಮಕ್ಕು ಇದೆ. ಜತೆಗೆ ಅವಳಿನಗರದಲ್ಲಿ ಹಿಂದೂಪರ ಸಂಘಟನೆಗಳು ಅನೇಕ ಲವ್ ಜಿಹಾದ್ ಪ್ರಕರಣ ಬೆಳಕಿಗೆ ತಂದಿವೆ. ಇದರ ಜತೆಗೆ ಉದ್ಯೋಗ್ ಆಕಾಂಕ್ಷಿಗಳು ಸೇರಿ ವಿದ್ಯಾರ್ಥಿಗಳ ಮೇಲೆ ಕಾನೂನು ದೌರ್ಜನ್ಯ ನಡೆಸಲಾಗುತ್ತಿದೆ. ಇಷ್ಟೇ ಅಲ್ಲದೇ ರೈತರ ಮೇಲೆ ಹಲ್ಲೆ ಸೇರಿದಂತೆ ಸುಳ್ಳು ಪ್ರಕರಣಗಳು ಹೆಚ್ಚಾಗಿವೆ. ಇದಕ್ಕೆಲ್ಲ ಪೊಲೀಸ್ ಕಮಿಷನರ್ ನಿರ್ಲಕ್ಷ್ಯ ಹಾಗೂ ರಾಜ್ಯ ಸರ್ಕಾರದ ವೈಫಲ್ಯವೇ ನೇರ ಕಾರಣವಾಗಿದೆ‌. ಈ ಕೂಡಲೇ ಜಿಲ್ಲೆಯಲ್ಲಿ ಕಾನೂನು ಸುವ್ಯವಸ್ಥೆ ಸ್ಥಾಪನೆಯಾಗಬೇಕು, ಅವಳಿನಗರ ಪೊಲೀಸ್ ಕಮಿಷನರ್ ಹಠಾವ್ ಮಾಡಬೇಕು ಎಂದು ಆಗ್ರಹಿಸಿ ಜಿಲ್ಲಾ ಅಧಿಕಾರಿಗಳ ರಾಜ್ಯಪಾಲರಿಗೆ ಮನವಿ ಸಲ್ಲಿಸಿದರು. ಒಂದು ವೇಳೆ ನಿರ್ಲಕ್ಷ್ಯ ಕಂಡುಬಂದಲ್ಲಿ ಉಗ್ರ ಹೋರಾಟ ಕಡೆ ಚಿಂತನೆ ಮಾಡುವುದಾಗಿ ಖಡಕ್ ಎಚ್ಚರಿಕೆ ನೀಡಿದರು. ‌

Tags:

error: Content is protected !!