Accident

ಮಟಮಟ ಮಧ್ಯಾಹ್ನ ಚಲಿಸುತ್ತಿದ್ದ ಬುಲೆಟ್‌ನಲ್ಲಿ ಬೆಂಕಿ! ಅನಗೋಳದ ಹರಿಮಂದಿರದ ಬಳಿ ಆತಂಕ

Share

ಬೆಳಗಾವಿಯ ಅನಗೋಳದ ಹರಿಮಂದಿರದ ಬಳಿ ಚಲಿಸುತ್ತಿದ್ದ ಬುಲೆಟ್ ಬೈಕ್‌ನಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡ ಘಟನೆ ನಡೆದಿದೆ. ಮಧ್ಯಾಹ್ನದ ಬಿರು ಬಿಸಿಲಿನಲ್ಲಿ ಬೈಕ್ ಹೊತ್ತಿ ಉರಿದಿದ್ದು, ಚಾಲಕನ ಸಮಯಪ್ರಜ್ಞೆಯಿಂದ ಭಾರಿ ಅನಾಹುತವೊಂದು ತಪ್ಪಿದೆ.

ಬೆಳಗಾವಿ ನಗರದ ಅನಗೋಳ ಉಪನಗರದ ಹರಿಮಂದಿರದ ಸಮೀಪ ಇಂದು ಮಧ್ಯಾಹ್ನ ಚಲಿಸುತ್ತಿದ್ದ ಬುಲೆಟ್ ಬೈಕ್ ಒಂದರಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡು ಸಾರ್ವಜನಿಕರಲ್ಲಿ ಆತಂಕ ಮೂಡಿಸಿತು. ಮಟಮಟ ಮಧ್ಯಾಹ್ನದ ಬಿರು ಬಿಸಿಲಿನಲ್ಲಿ ಬೈಕ್ ಚಲಿಸುತ್ತಿದ್ದಾಗಲೇ ಇಂಜಿನ್ ಭಾಗದಲ್ಲಿ ಕಿಡಿ ಕಾಣಿಸಿಕೊಂಡು ಬೆಂಕಿ ವ್ಯಾಪಿಸಿದೆ. ಕೂಡಲೇ ಎಚ್ಚೆತ್ತುಕೊಂಡ ಬೈಕ್ ಚಾಲಕ ವಾಹನವನ್ನು ಪಕ್ಕಕ್ಕೆ ನಿಲ್ಲಿಸಿ ಕೆಳಗಿಳಿದಿದ್ದರಿಂದ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ತಕ್ಷಣವೇ ಸ್ಥಳೀಯರು ಧಾವಿಸಿ ಬಂದು ನೀರು ಮತ್ತು ಮರಳಿನ ಸಹಾಯದಿಂದ ಬೆಂಕಿ ನಂದಿಸುವ ಕೆಲಸ ಮಾಡಿದರು. ಬಿಸಿಲಿನ ತಾಪಕ್ಕೆ ಅಥವಾ ಶಾರ್ಟ್ ಸರ್ಕ್ಯೂಟ್‌ನಿಂದ ಈ ಅನಾಹುತ ಸಂಭವಿಸಿರಬಹುದು ಎಂದು ಶಂಕಿಸಲಾಗಿದೆ.

Tags:

error: Content is protected !!