Accident

ಕ್ಯಾಂಟರ್ ವಾಹನ ಹಾಗೂ ಟ್ರ್ಯಾಕ್ಟರ್‌ ಮಧ್ಯೆ ಭೀಕರ ಅಪಘಾತ

Share

ವಿಜಯಪುರ ಜಿಲ್ಲೆಯ ಮನಗೂಳಿ ಪಟ್ಟಣದ ಹೊರಭಾಗದ ಬೈಪಾಸ್ ಬಳಿ ಕ್ಯಾಂಟರ್ ವಾಹನ ಮತ್ತು ಟ್ರ್ಯಾಕ್ಟ‌ರ್ ನಡುವೆ ಭೀಕರ ಅಪಘಾತ ಸಂಭವಿಸಿದೆ.

ಈ ದುರ್ಘಟನೆಯಲ್ಲಿ ಟ್ರ್ಯಾಕ್ಟರ್‌ನಲ್ಲಿದ್ದ ಇಬ್ಬರು ವ್ಯಕ್ತಿಗಳಿಗೆ ಗಂಭೀರ ಗಾಯಗಳಾಗಿದ್ದು, ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ವಿಜಯಪುರದ ಖಾಸಗಿ ಆಸ್ಪತ್ರೆಗೆ ರವಾನಿಸಲಾಗಿದೆ. ಘಟನೆಯಿಂದಾಗಿ ಸುಮಾರು 4 ಕಿಲೋಮೀಟರ್‌ಗಳಷ್ಟು ದೂರ ಸಂಪೂರ್ಣ ಟ್ರಾಫಿಕ್ ಜಾಮ್ ಉಂಟಾಗಿ, ಅಂಬ್ಯುಲೆನ್ಸ್‌ಗಳು ಸಹ ಟ್ರಾಫಿಕ್‌ನಲ್ಲಿ ಸಿಲುಕಿಕೊಂಡಿವೆ. ಈ ಘಟನೆ ಮನಗೂಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

Tags:

error: Content is protected !!