Vijaypura

ಒಣ ದ್ರಾಕ್ಷಿ ಬೆಳೆಗಾರರಿಗೆ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ವಿಶೇಷ ಅನುದಾನ ನೀಡಬೇಕು; ರೈತ ಮುಖಂಡ ಸಂಗಮೇಶ ಸಗರ ಆಗ್ರಹ

Share

ಒಣ ದ್ರಾಕ್ಷಿ ಬೆಳೆಗಾರರಿಗೆ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ವಿಶೇಷ ಅನುದಾನ ನೀಡಬೇಕು ಎಂದು ಕರ್ನಾಟಕ ರೈತ ಸಂಘ ಹಾಗೂ ಹಸಿರು ಸೇನೆಯ ಜಿಲ್ಲಾಧ್ಯಕ್ಷ ಸಂಗಮೇಶ್ ಸಗರ ಆಗ್ರಹಿಸಿದ್ದಾರೆ. ವಿಜಯಪುರದಲ್ಲಿ ಮಾತನಾಡಿದ ಅವರು, ದೇಶದಲ್ಲೇ ಅತಿ ಹೆಚ್ಚು ದ್ರಾಕ್ಷ ಬೆಳೆಯುವ ಜಿಲ್ಲೆಗಳ ಪೈಕಿ ವಿಜಯಪುರ ಪ್ರಮುಖವಾಗಿದ್ದು, ಇಲ್ಲಿನ ಸಾವಿರಾರು ರೈತರು ದ್ರಾಕ್ಷ ಹಾಗೂ ಒಣ ದ್ರಾಕ್ಷ ಉತ್ಪಾದನೆಯಲ್ಲಿ ತೊಡಗಿದ್ದಾರೆ ಎಂದರು. ಆದರೆ ಉತ್ಪಾದನಾ ವೆಚ್ಚ ಹೆಚ್ಚಳ, ಹವಾಮಾನ ವೈಪರಿತ್ಯ ಹಾಗೂ ಮಾರುಕಟ್ಟೆ ಸಮಸ್ಯೆಯಿಂದ ರೈತರು ಸಂಕಷ್ಟ ಅನುಭವಿಸುತ್ತಿದ್ದಾರೆ ಎಂದು ಹೇಳಿದರು.
ಒಣ ದ್ರಾಕ್ಷ ತಯಾರಿಕೆಗೆ ಅಗತ್ಯ ಸೌಲಭ್ಯಗಳು, ಸಂಸ್ಕರಣಾ ಘಟಕಗಳು ಹಾಗೂ ಸಂಗ್ರಹಣಾ ವ್ಯವಸ್ಥೆಗೆ ಸರ್ಕಾರದಿಂದ ಸಬ್ಸಿಡಿ ನೀಡಬೇಕು. ಜೊತೆಗೆ ವಿಶೇಷ ಪ್ಯಾಕೇಜ್ ಘೋಷಿಸಿ ರೈತರ ನೆರವಿಗೆ ಬರಬೇಕು ಎಂದು ಸಂಗಮೇಶ್ ಸಗರ ಮನವಿ ಮಾಡಿದರು.

Tags:

error: Content is protected !!