Belagavi

ಕ.ರಾ.ಸ.ನೌಕರರ ರಾಜ್ಯಮಟ್ಟದ ಕ್ರೀಡಾ ಸ್ಪರ್ಧೆ : ಪಾಲಿಕೆ ಉಪ ಆಯುಕ್ತ ಡಾ. ಸಿದ್ದು ಹುಲ್ಲೋಳಿ ಟೆನಿಸ್ ನಲ್ಲಿ ರಾಷ್ಟ್ರಮಟ್ಟಕ್ಕೆ ಆಯ್ಕೆ

Share

ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಂಯುಕ್ತವಾಗಿ ಬೆಂಗಳೂರಿನಲ್ಲಿ ಇತ್ತೀಚೆಗೆ ಆಯೋಜಿಸಿದ್ದ ಸರ್ಕಾರಿ ನೌಕರರ ರಾಜ್ಯಮಟ್ಟದ ಕ್ರೀಡಾ ಸ್ಪರ್ಧೆಯಲ್ಲಿ ಬೆಳಗಾವಿ ಮಹಾನಗರ ಪಾಲಿಕೆ ಕಂದಾಯ ವಿಭಾಗದ ಉಪ ಆಯುಕ್ತ ಡಾ. ಸಿದ್ದು ಹುಲ್ಲೋಳಿ ಅವರು ಟೆನ್ನಿಸ್ ಕ್ರೀಡೆಯಲ್ಲಿ ಭಾಗವಹಿಸಿ ಪ್ರಥಮ ಸ್ಥಾನ ಪಡೆದು ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

ಪಾಲಿಕೆಯ ಕಂದಾಯ, ಜನಗಣತಿ, ಚುನಾವಣೆ ವಿಭಾಗ ಸೇರಿದಂತೆ ಸಂದರ್ಭ ಕ್ಕನುಸಾರವಾಗಿ ಹಲವಾರು ಶಾಖೆಗಳ ಜವಾಬ್ದಾರಿಗಳನ್ನು ಸಮರ್ಥವಾಗಿ ನಿಭಾಯಿಸುವುದರ ಜೊತೆಗೆ ರಾಷ್ಟ್ರಮಟ್ಟದ ಕ್ರೀಡಾಪಟುಗಳಾಗಿಯೂ ಗುರುತಿಸಿಕೊಂಡಿರುವ ಇವರು ಎಲ್ಲರ ಮೆಚ್ಚುಗೆಗೆ ಪಾತ್ರವಾಗಿದ್ದು ಸರ್ಕಾರಿ ನೌಕರರಿಗೆ ಮಾದರಿಯಾಗಿದ್ದಾರೆ.
ಇಂತಹ ಸಾಧನೆಗೆ ಭಾಜನರಾಗಿರುವ ಡಾ. ಸಿದ್ದು ಹುಲ್ಲೋಳಿ ಅವರನ್ನು ಪಾಲಿಕೆಯ ಮೇಯರ ಪ್ರೀತಿ ಕಾಮಕರ, ಉಪಮೇಯರ ಹಣಮಂತ ಕೊಂಗಾಲಿ ಹಾಗೂ ನಗರಸೇವಕರು, ಆಯುಕ್ತ ಕಾರ್ತಿಕ್ ಎಂ ಹಾಗೂ ಸಿಬ್ಬಂದಿ ಸನ್ಮಾನಿಸಿ ಗೌರವಿಸಿ ಅಭಿನಂದಿಸಿದ್ದಾರೆ

Tags:

error: Content is protected !!