ಈ ವೇಳೆ ಈ ಹಿಂದೆ ಪಾಲಿಕೆ ಆವರಣದಲ್ಲಿ ಕನ್ನಡ ಧ್ವಜಸ್ತಂಭ ಸ್ಥಾಪಿಸಿದ್ದ ಹೋರಾಟಗಾರ ಶ್ರೀನಿವಾಸ ತಾಳೂಕರ್ ಅವರು ಸಭೆಯ ಒಳಗೆ ನುಗ್ಗಲು ಯತ್ನಿಸಿದಾಗ ಪೊಲೀಸರು ಅವರನ್ನು ತಡೆದು ಬಲವಂತವಾಗಿ ವಶಕ್ಕೆ ಪಡೆದರು. ಈ ವೇಳೆ ಶ್ರೀನಿವಾಸ್ ತಾಳೂಕರ್ ಅವರು ಹೋರಾಟಗಾರರನ್ನು ವಶಕ್ಕೆ ಪಡೆದ ನೀತಿಯನ್ನು ತೀವ್ರವಾಗಿ ಖಂಡಿಸಿ ಅಸಮಾಧಾನವನ್ನು ವ್ಯಕ್ತಪಡಿಸಿದರು.


ಈ ಪ್ರತಿಭಟನೆಯಿಂದಾಗಿ 11 ಗಂಟೆಗೆ ಆರಂಭವಾಗಬೇಕಿದ್ದ ಸಭೆಯು ಸುಮಾರು ಎರಡು ಗಂಟೆಗಳ ಕಾಲ ವಿಳಂಬವಾಯಿತು. ಸ್ಥಳಕ್ಕೆ ಭೇಟಿ ನೀಡಿದ ಮಹಾಪೌರ ಪ್ರೀತಿ ಕಾಮಕರ ಮತ್ತು ಉಪಮಹಾಪೌರ ಹಣುಮಂತ ಕೊಂಗಾಲಿ ಅವರು ಹೋರಾಟಗಾರರ ಮನವಿಯನ್ನು ಆಲಿಸಿ, ಸಾಮಾನ್ಯ ಸಭೆಯಲ್ಲಿ ಈ ಕುರಿತು ಗೊತ್ತುವಳಿ ಸ್ವೀಕರಿಸುವುದಾಗಿ ಭರವಸೆ ನೀಡಿದರು. ಪಾಲಿಕೆಯಲ್ಲಿ ಕನ್ನಡಿಗರೇ ಮೇಯರ್ ಮತ್ತು ಉಪ ಮೇಯರ್ ಸ್ಥಾನದಲ್ಲಿರುವ ಕಾರಣ, ಗಡಿ ಮತ್ತು ಭಾಷೆಯ ಹಿತದೃಷ್ಟಿಯಿಂದ ಈ ನಿರ್ಧಾರ ಕೈಗೊಳ್ಳುವ ಭರವಸೆ ಸಿಕ್ಕ ನಂತರ ಪರಿಸ್ಥಿತಿ ತಿಳಿಯಾಯಿತು.

