ನೀಟ್ ಪರೀಕ್ಷೆಯಲ್ಲಿ ನಿರಂತರವಾಗಿ ನಡೆಯುತ್ತಿರುವ ಪ್ರಶ್ನೆ ಪತ್ರಿಕೆ ಸೋರಿಕೆ, ಅಕ್ರಮಗಳು, OMR ತಿದ್ದುಪಡಿ ಹಾಗೂ ಭ್ರಷ್ಟಾಚಾರ ಪ್ರಕರಣಗಳು ವಿದ್ಯಾರ್ಥಿಗಳ ಭವಿಷ್ಯಕ್ಕೆ ಮಾರಕವಾಗಿವೆ ಎಂದು ದ್ರಾವಿಡ ವಿದ್ಯಾರ್ಥಿ ಪರಿಷತ್ ತೀವ್ರ ಆಕ್ರೋಶ ವ್ಯಕ್ತಪಡಿಸಿದೆ.

ಈ ಹಿನ್ನೆಲೆಯಲ್ಲಿ, ವಿಜಯಪುರ ನಗರದಲ್ಲಿರುವ ಬಿಜೆಪಿ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಲಾಗಿದೆ. ಮೇ 12 ರಂದು ನಡೆದ ಈ ಪ್ರತಿಭಟನೆಯಲ್ಲಿ, ಕೇಂದ್ರ ಸರ್ಕಾರದ ವೈಫಲ್ಯವನ್ನು ಖಂಡಿಸಿದರು.

