BELAGAVI

ಬೆಳಗಾವಿ ನಗರ ಶಾಸಕ ಆಸೀಫ್ ಸೇಠ್‌ಗೆ ಸಚಿವ ಸ್ಥಾನ ನೀಡಿ…

Share

ಬೆಳಗಾವಿ ಉತ್ತರ ಕ್ಷೇತ್ರದ ಶಾಸಕರಾದ ಆಸೀಫ್ ಸೇಠ್ ಅವರಿಗೆ ಸಚಿವ ಸಂಪುಟದಲ್ಲಿ ಸ್ಥಾನ ನೀಡಬೇಕು ಎಂದು ಒತ್ತಾಯಿಸಿ ಇಂದು ಬೆಳಗಾವಿಯಲ್ಲಿ ಅಭಿಮಾನಿಗಳು ಹಾಗೂ ಮುಖಂಡರು ಜಂಟಿ ಸುದ್ದಿಗೋಷ್ಠಿ ನಡೆಸಿದರು. ಶಾಸಕರಿಗೆ ಸಚಿವ ಸ್ಥಾನ ಸಿಗುವವರೆಗೂ ನಮ್ಮ ಹೋರಾಟ ನಿಲ್ಲುವುದಿಲ್ಲ ಎಂದು ಅಭಿಮಾನಿ ಬಳಗ ಹೈಕಮಾಂಡ್‌ಗೆ ಎಚ್ಚರಿಕೆ ನೀಡಿದೆ.

ಇಂದು ಬೆಳಗಾವಿಯಲ್ಲಿ ಮಾಧ್ಯಮಗೋಷ್ಟಿ ನಡೆಸಿ ಮಾತನಾಡಿದ ಶಾಸಕ ಆಸೀಫ್ ಸೇಠ್ ಅಭಿಮಾನಿ ಮಲ್ಲೇಶ್ ಚೌಗಲೆ ಅವರು ಬೆಳಗಾವಿ ನಗರಕ್ಕೆ ಇಲ್ಲಿಯ ವರೆಗೂ ಸಚಿವ ಸ್ಥಾನ ನೀಡಿಲ್ಲ. ಮಾಜಿ ದಿವಂಗತ ಸಿದ್ನಾಳ್ ಅವರು ಹಲವು ಬಾರಿ ಸಂಸದರಾದರು, ಅವರಿಗೂ ಸಚಿವ ಸ್ಥಾನ ಸಿಗಲಿಲ್ಲ. ಉತ್ತರ ಶಾಸಕ ಆಸೀಫ್ ಸೇಠ್ ಅವರು ಶಾಸಕರಾಗಿ ಹಲವಾರು ಅಭಿವೃದ್ಧಿ ಕಾರ್ಯಗಳನ್ನು ಕೈಗೊಂಡಿದ್ದಾರೆ. ಇದಕ್ಕೂ ಮೊದಲೂ ಕಾಂಗ್ರೆಸ್ ನಗರಾಧ್ಯಕ್ಷರಾಗಿ ಕೆಲಸ ಮಾಡಿದ್ದಾರೆ. ಈ ಹಿನ್ನೆಲೆ ಅವರಿಗೆ ಸಚಿವ ಸಂಪುಟದಲ್ಲಿ ಒಂದು ಸ್ಥಾನಮಾನವನ್ನು ನೀಡಿ, ಬೆಳಗಾವಿ ನಗರಕ್ಕೆ ಓರ್ವ ಸಚಿವರನ್ನು ನೀಡಿದ ಹೆಗ್ಗಳಿಕೆಗ ಪಾತ್ರವಾಗಲಿ. ಹೈಕಮಾಂಡ್ ಅವರಿಗೆ ಪತ್ರವನ್ನು ಬರೆಯುವ ಅಭಿಯಾನವನ್ನು ಕೂಡ ನಡೆಸಲಾಗುವುದು. ಬೆಳಗಾವಿ ನಗರ ಶಾಸಕ ಆಸೀಫ್ ಸೇಠ್ ಅವರಿಗೆ ಸಚಿವ ಸ್ಥಾನ ಸಿಗುವ ವರೆಗೂ ನಮ್ಮ ಹೋರಾಟ ನಿಲ್ಲದು ಎಂದು ಎಚ್ಚರಿಸಿದರು.

ಅದರಂತೆ ಸಚಿವ ಸತೀಶ ಜಾರಕಿಹೊಳಿ ಅವರಿಗೆ ಕೆಪಿಸಿಸಿ ಅಧ್ಯಕ್ಷ ಸ್ಥಾನ ಸಿಗಲಿ, ಲಕ್ಷ್ಮೀ ಹೆಬ್ಬಾಳ್ಕರ್ ಅವರಿಗೂ ಉನ್ನತ ಸ್ಥಾನ ಸಿಗಲಿ. ಅದರಂತೆ ಬೆಳಗಾವಿಯ ಅಹಿಂದ್ ನಾಯಕ ನಗರ ಶಾಸಕರು ಸಚಿವರಾಗಲಿ ಎಂಬುದು ನಮ್ಮ ಒತ್ತಾಸೆಯಾಗಿದೆ. ಈಗಾಗಲೇ ಸಚಿವದ್ವಯರು ನಗರದ ಅಭಿವೃದ್ಧಿಗೆ ಒತ್ತು ನೀಡಿದ್ದು, ಮೂರು ಜಿಲ್ಲೆಯಾಗುವಂತೆ ಬೆಳಗಾವಿ ಜಿಲ್ಲೆಯಲ್ಲಿ ಇನ್ನೊಬ್ಬರಿಗೆ ಸಚಿವ ಸ್ಥಾನ ನೀಡಲಿ ಎಂದರು.

ಇನ್ನು ಎಲ್ಲ ಜಾತಿ ಧರ್ಮ ಭಾಷಿಕರೊಂದಿಗೆ ಸೌಹಾರ್ದತೆಯೊಂದಿಗಿರುವ ಶಾಸಕ ಆಸೀಫ್ ಸೇಠ್ ಅವರಿಗೆ ಸಚಿವ ಸ್ಥಾನ ನೀಡಿದರೇ, ಬೆಳಗಾವಿ ಇನ್ನಷ್ಟು ಅಭಿವೃದ್ಧಿಗೊಳ್ಳಲಿದೆ. ಅಲ್ಲದೇ, ನಗರ ಶಾಸಕರಿಗೆ ಸಚಿವ ಸ್ಥಾನ ನೀಡಿದರೇ, ಬೆಳಗಾವಿಗೆ ಒಂದು ಗೌರವ ಸಲ್ಲಿಸಿದಂತಾಗುತ್ತದೆ ಎಂದು ಆರ್.ಪಿ. ಪಾಟೀಲ್ ಅವರು ಆಗ್ರಹಿಸಿದರು.

ಈ ಸಂದರ್ಭದಲ್ಲಿ ಶಾಸಕ ಆಸೀಫ್ ಸೇಠ್ ಅಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗಿಯಾಗಿದ್ಧರು.

Tags:

error: Content is protected !!