Accident

ಕಿತ್ತೂರು ತಾಲ್ಲೂಕಿನಲ್ಲಿ ಭೀಕರ ರಸ್ತೆ ಅಪಘಾತ: ವಾಹನ ಹರಿದು ಬೈಕ್ ಸವಾರ ಸ್ಥಳದಲ್ಲೇ ಸಾವು

Share

ಬೆಳಗಾವಿ ಜಿಲ್ಲೆಯ ಕಿತ್ತೂರು ತಾಲೂಕಿನಲ್ಲಿ ಭೀಕರ ರಸ್ತೆ ಅಪಘಾತವೊಂದು ಸಂಭವಿಸಿದೆ. ಅತಿವೇಗವಾಗಿ ಬಂದ ಅಪರಿಚಿತ ವಾಹನವೊಂದು ಬೈಕ್‌ಗೆ ಡಿಕ್ಕಿ ಹೊಡೆದ ಪರಿಣಾಮ, ಸವಾರ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಚಿಕ್ಕಬಾಗೇವಾಡಿ ಮತ್ತು ಎಂ.ಕೆ. ಹುಬ್ಬಳ್ಳಿ ಮಾರ್ಗ ಮಧ್ಯೆ ನಡೆದಿದೆ.

ಬೈಲಹೊಂಗಲ ತಾಲೂಕಿನ ತಿಗಡಿ ಗ್ರಾಮದ ನಿವಾಸಿ ಯಾಸೀನ್ (45) ಮೃತಪಟ್ಟ ದುರ್ದೈವಿ ಎಂದು ಗುರುತಿಸಲಾಗಿದೆ. ಇವರು ಎಂ.ಕೆ. ಹುಬ್ಬಳ್ಳಿಯಿಂದ ಚಿಕ್ಕಬಾಗೇವಾಡಿ ಗ್ರಾಮದ ಕಡೆಗೆ ತಮ್ಮ ಬೈಕ್‌ನಲ್ಲಿ ಪ್ರಯಾಣಿಸುತ್ತಿದ್ದಾಗ ಈ ಅವಘಡ ಸಂಭವಿಸಿದೆ. ವೇಗವಾಗಿ ಬಂದ ವಾಹನವು ಬೈಕ್‌ಗೆ ಡಿಕ್ಕಿ ಹೊಡೆದಿದ್ದಲ್ಲದೆ, ಸವಾರನ ತಲೆಯ ಮೇಲೆಯೇ ಹರಿದು ಹೋದ ಪರಿಣಾಮ ಯಾಸೀನ್ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಅಪಘಾತ ನಡೆದ ತಕ್ಷಣ ವಾಹನ ಚಾಲಕ ಸ್ಥಳದಿಂದ ಪರಾರಿಯಾಗಿದ್ದಾನೆ. ವಿಷಯ ತಿಳಿಯುತ್ತಿದ್ದಂತೆಯೇ ಕಿತ್ತೂರು ಠಾಣೆಯ ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದ್ದು, ಹಿಟ್ ಅಂಡ್ ರನ್ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಪರಾರಿಯಾದ ಚಾಲಕನಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ.

Tags:

error: Content is protected !!